Site icon Vistara News

Vijayanagara News: ಚಿಕಿತ್ಸಕ ಕ್ರಮದಿಂದ ರೋಗ ನಿಯಂತ್ರಣ: ಶಾಸಕ ಗವಿಯಪ್ಪ

MLA HR Gaviyappa spoke at the National Viral Hepatitis Control Program held in Vijayanagara

ವಿಜಯನಗರ: ಯಾವುದೇ ರೋಗವಾದರೂ (Disease) ಅದನ್ನು ಮುಚ್ಚಿಟ್ಟುಕೊಳ್ಳದೇ ಪೂರಕವಾಗಿ ಅದರ ವಿರುದ್ಧ ಚಿಕಿತ್ಸಕ ಕ್ರಮ ಅನುಸರಿಸಿ ಗುಣಮುಖರಾಗುವತ್ತ ಪ್ರತಿಯೊಬ್ಬರೂ (Everyone) ಗಮನ ಹರಿಸಬೇಕು ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಿಶ್ವ ಹೆಪಾಟೈಟಿಸ್ ದಿನದ ಅಂಗವಾಗಿ ಹೊಸಪೇಟೆ ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈರಲ್ ಹೆಪಾಟೈಟಿಸ್ ನಿಯಂತ್ರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೆಪಾಟೈಟಿಸ್ ಖಾಯಿಲೆ ಅಪಾಯಕರವಾದರೂ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಬಹುದಾಗಿದೆ. ಸರ್ಕಾರದ ಯೋಜನೆಯಿಂದ ಚಿಕಿತ್ಸೆ ಲಭ್ಯವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: KL Rahul: ರಾಹುಲ್​ ಕಮ್​ಬ್ಯಾಕ್​ಗೆ ವೇದಿಕೆ ಸಜ್ಜು; ಈ ಸರಣಿಯಲ್ಲಿ ಆಡುವುದು ಖಚಿತ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸದಾಶಿವ ಪ್ರಭು ಬಿ. ಮಾತನಾಡಿ, ಹೆಪಾಟೈಟಿಸ್ ರೋಗ ಹಲವು ವಿಧಗಳನ್ನು ಹೊಂದಿದೆ. 9 ಲಕ್ಷ ಜನರು ಈ ರೋಗದಿಂದ ಬಾಧಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಜತೆಗೆ 32 ಕೋಟಿ ಜನ ರೋಗದಿಂದ ಬಳಲುತ್ತಿದ್ದಾರೆ ಎಂಬುದು ರೋಗದ ಅಗಾಧತೆ ಅರಿವಿಗೆ ಬರುತ್ತದೆ. ರೋಗ ಲಕ್ಷಣಗಳು ಕಂಡುಬಂದರೆ ಅದನ್ನು ಮರೆಮಾಚದೆ ಪರೀಕ್ಷೆಗೆ ಒಳಪಟ್ಟು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ಮಾತನಾಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ವೈರಲ್ ಹೆಪಾಟೈಟಿಸ್ ನಿಯಂತ್ರಣ ಕಾರ್ಯಕ್ರಮ ಹಾಗೂ ಮಿಷನ್ ಇಂದ್ರಧನುಷ್ ಲಸಿಕಾಕರಣ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸಲೀಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು.

ಇದನ್ನೂ ಓದಿ: Depression: ಖಿನ್ನತೆಯನ್ನು ಗುರುತಿಸಿ, ಅದರಿಂದ ಹೊರ ಬರುವುದು ಹೇಗೆ?

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಭಾಸ್ಕರ್, ಡಾ.ಜಂಬಯ್ಯ, ಡಾ.ಜಗದೀಶ್ ಪಾಟ್ನೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಸೇರಿದಂತೆ ವಿವಿಧ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಹಾಗೂ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version