Site icon Vistara News

Navaratri: ರಾಜ್ಯದ ವಿವಿಧೆಡೆ ನವರಾತ್ರಿ ಉತ್ಸವಕ್ಕೆ ಚಾಲನೆ; ದೇವಾಲಯಗಳಲ್ಲಿ ವಿಶೇಷ ಪೂಜೆ

Sringeri-Dasara

ಬೆಂಗಳೂರು: ಮೈಸೂರಿನಲ್ಲಿ ವಿಶ್ವ ವಿಖ್ಯಾತ ದಸರಾಗೆ ಭಾನುವಾರ ಚಾಲನೆ ನೀಡಲಾಗಿದೆ. ಅದೇ ರೀತಿ ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ನವರಾತ್ರಿ ಉತ್ಸವಕ್ಕೆ (Navaratri) ಚಾಲನೆ ನೀಡಲಾಗಿದ್ದು, ಮೊದಲ ದಿನ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನೆರವೇರಿದವು. ನೂರಾರು ಭಕ್ತರು ದೇವಾಲಗಳಿಗೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು.

ಬಾಗಲಕೋಟೆಯಲ್ಲಿ ಅಂಬಾ ಭವಾನಿ ದೇವಿ ಮೆರವಣಿಗೆ

ಬಾಗಲಕೋಟೆ ನಗರದಲ್ಲಿ ದಸರಾ ಹಬ್ಬಕ್ಕೆ ಚಾಲನೆ ಹಿನ್ನೆಲೆಯಲ್ಲಿ ಅಂಬಾ ಭವಾನಿ ದೇವಿ ಮೂರ್ತಿ ಮೆರವಣಿಗೆ ಮಾಡಲಾಯಿತು.
ಮಡಿಕೇರಿಯಲ್ಲಿ ಕರಗ ಉತ್ಸವದ ಮೂಲಕ ದಸರಾ ಹಬ್ಬಕ್ಕೆ ಚಾಲನೆ ನೀಡಲಾಯಿತು.

ಸೊರಬ ತಾಲೂಕಿನ ಜಡೆ ಗ್ರಾಮದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ಶ್ರೀ ದುರ್ಗಾ ದೇವಿಯ ಪ್ರತಿಷ್ಠಾಪನಾ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.

ಇದನ್ನೂ ಓದಿ | Mysore Dasara : ಅರಮನೆಯಲ್ಲೂ ದಸರಾ ಸಡಗರ; ಖಾಸಗಿ ದರ್ಬಾರ್‌ ಆರಂಭಿಸಿದ ಯದುವೀರ್‌ ಒಡೆಯರ್

ಸೊರಬದ ಪುರಾಣ ಪ್ರಸಿದ್ಧ ಕ್ಷೇತ್ರ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ನಾಡ ಹಬ್ಬ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು.

Exit mobile version