Site icon Vistara News

Naxalite Srimathi: ನಕ್ಸಲ್ ಹೋರಾಟಗಾರ್ತಿ ಶ್ರೀಮತಿ ಪೊಲೀಸ್‌ ಕಸ್ಟಡಿಗೆ

Srimathi

ಶಿವಮೊಗ್ಗ: ನಕ್ಸಲ್ ಹೋರಾಟ ಪ್ರಕರಣಗಳ ತನಿಖೆ ಮತ್ತಷ್ಟು ಚುರುಕು ಪಡೆದಿದ್ದು, ಇದೀಗ ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು (Naxalite Srimathi) ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ತೀರ್ಥಹಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ಶ್ರೀಮತಿಯನ್ನು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆ ಮತ್ತಷ್ಟು ಚುರುಕು ಪಡೆದಿದೆ. ನಕ್ಸಲರ ನಾಯಕ ಬಿ.ಜಿ‌. ಕೃಷ್ಣಮೂರ್ತಿ ಅವರನ್ನು ಕಳೆದ ತಿಂಗಳು ಶಿವಮೊಗ್ಗ ಕೋರ್ಟ್‌ಗೆ ಪೊಲೀಸರು ಹಾಜರು ಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ನಕ್ಸಲ್ ಹೋರಾಟಗಾರ್ತಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತಾರಳ್ಳಿಕೊಡಿಗೆ ಗ್ರಾಮದ ಶ್ರೀಮತಿ, ನಕ್ಸಲ್ ಹೋರಾಟಗಾರ ಬಿ.ಜಿ. ಕೃಷ್ಣಮೂರ್ತಿ ಜತೆ ಗುರುತಿಸಿಕೊಂಡಿದ್ದರು. 2023ರ ನವೆಂಬರ್ 7 ರಂದು ಶ್ರೀಮತಿಯನ್ನು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದರು. 3/12 ಆಗುಂಬೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಿಚಾರಣೆ ನಡೆಸಲು ಶ್ರೀಮತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಗಿ ಭದ್ರತೆಯೊಂದಿಗೆ ಕೇರಳದ ತ್ರಿಶೂರ್‌ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಶ್ರೀಮತಿಯನ್ನು ಕರೆತರಲಾಗಿದೆ.

ಇದನ್ನೂ ಓದಿ | Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದು ಬಿಜೆಪಿ ಎಂದ ಸಚಿವ ಮಂಕಾಳು ವೈದ್ಯ!

‘ಪಾಕಿಸ್ತಾನ ಜಿಂದಾಬಾದ್’ ಕೇಸ್‌; FSL ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತ ಎಫ್‍ಎಸ್‍ಎಲ್ ವರದಿಯನ್ನು (FSL Report) ಕೂಡಲೇ ಬಹಿರಂಗ ಮಾಡುವಂತೆ ಬಿಜೆಪಿ (BJP Karnataka) ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿದೆ.

ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಸೋಮವಾರ ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿತು.

ಇದೇ ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಇದು ಖಂಡನೀಯ ಎಂದು ಬಿಜೆಪಿ ಹೇಳಿದೆ.

ವಿಳಂಬ ಮಾಡಿದರೆ ಸಮಾಜಘಾತಕರಿಗೆ ಬಲ ನೀಡಿದಂತೆ

ಸತ್ಯ ತಿಳಿಸಲು ವಿಳಂಬವೇಕೆ? ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ | Kyasanur Forest Disease: ಕರ್ನಾಟಕದಲ್ಲಿ ಕೆಎಫ್‌ಡಿಗೆ 6 ಬಲಿ! ಕಾಯಿಲೆ ಲಕ್ಷಣಗಳೇನು? ಪಾರಾಗುವುದು ಹೇಗೆ?

ಎಫ್‍ಎಸ್‍ಎಲ್ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅನೇಕ ಪೋಸ್ಟ್‌ಗಳಿವೆ. ಆದ್ದರಿಂದ ಈ ತನಿಖೆಯ ವಾಸ್ತವಾಂಶವನ್ನು ತಿಳಿಯಲು ಬಯಸುತ್ತೇವೆ. ರಾಜ್ಯದ ಜವಾಬ್ದಾರಿಯುತ ವಿಪಕ್ಷವಾಗಿ, ನಾವು ಈ ಪತ್ರಕ್ಕೆ ನಿಮ್ಮಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಹೇಳಿದೆ.

Exit mobile version