Site icon Vistara News

ಬೆಂಗಳೂರಿಗೆ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ; ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ದ್ರೌಪದಿ ಮುರ್ಮು

ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಆತ್ಮೀಯವಾಗಿ ಸ್ವಾಗತಿಸಿದರು.

ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಆಗಮಿಸಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿರುವ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿ ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ದ್ರೌಪದಿ ಮುರ್ಮು ಆಗಮನದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ಕಿಶನ್ ರೆಡ್ಡಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ | ರಾಷ್ಟ್ರಪತಿ ಚುನಾವಣೆ | ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ?

Exit mobile version