NEET PG | ಗ್ರಾಮೀಣ ಸೇವೆಯಲ್ಲಿರುವ ವೈದ್ಯರ PG-NEET ಸೀಟು ಹಂಚಿಕೆ ಕಡಿತ ಆದೇಶ ರದ್ದುಗೊಳಿಸಿದ ಹೈಕೋರ್ಟ್‌ - Vistara News

ಕರ್ನಾಟಕ

NEET PG | ಗ್ರಾಮೀಣ ಸೇವೆಯಲ್ಲಿರುವ ವೈದ್ಯರ PG-NEET ಸೀಟು ಹಂಚಿಕೆ ಕಡಿತ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಗ್ರಾಮೀಣ ಸೇವೆಯಲ್ಲಿ ನಿರತರಾಗಿರುವ ವೈದ್ಯರಿಗೆ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೀಸಲಿಟ್ಟಿರುವ ಸೀಟುಗಳ ಸಂಖ್ಯೆಯನ್ನು ಶೇ. 30ರಿಂದ ಶೇ. 15ಕ್ಕೆ ಇಳಿಸಿದ ಕ್ರಮವನ್ನು ಹೈಕೋರ್ಟ್‌ ವಜಾ ಮಾಡಿದೆ.

VISTARANEWS.COM


on

NEET PG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಎಂಬಿಬಿಎಸ್‌ ಪೂರ್ಣಗೊಳಿಸಿ ಗ್ರಾಮೀಣ ಸೇವೆಯಲ್ಲಿ ನಿರತವಾಗಿರುವ ವೈದ್ಯರಿಗೆ (ಇನ್‌ ಸರ್ವೀಸ್‌) ಪಿಜಿ-ನೀಟ್‌ ಪರೀಕ್ಷೆಯಲ್ಲಿನ ಸೀಟು ಹಂಚಿಕೆಯನ್ನು ಶೇ. 30ರಿಂದ ಶೇ. 15ಕ್ಕೆ ಇಳಿಕೆ ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ.

ಸೀಟು ಹಂಚಿಕೆಯನ್ನು ಗಣನೀಯವಾಗಿ ತಗ್ಗಿಸಿದ್ದನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಎಂಬಿಬಿಎಸ್‌ ವೈದ್ಯರುಗಳಾದ ಕೆ.ಎಸ್‌ ಸ್ವಾತಿ, ಡಾ. ಭೀಮಣ್ಣ ಎಸ್‌. ಸಿನ್ನೂರ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಅಲೋಕ್‌ ಅರಾಧೆ ಮತ್ತು ಎಸ್‌. ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ಮಾನ್ಯ ಮಾಡಿ, ಆದೇಶವನ್ನು ವಜಾ ಮಾಡಿದ್ದಾರೆ.

ಕೋರ್ಟ್‌ ಹೇಳಿದ್ದೇನು?
“ಅಭ್ಯರ್ಥಿಗಳಿಗಿಂತ ಹೆಚ್ಚಿನ ಸೀಟುಗಳಿವೆ. ಈ ಕಾರಣಕ್ಕಾಗಿ ಸೀಟಿನಲ್ಲಿ ಇಳಿಕೆ ಮಾಡಲಾಗಿದೆ ಎಂದು ಪ್ರತಿವಾದಿಗಳ ಪರವಾಗಿ ವಿವರಣೆ ನೀಡಲಾಗಿದೆ. ಆದರೆ, 2022ರ ಸೆಪ್ಟೆಂಬರ್‌ 29ರಂದು ವೈದ್ಯಕೀಯ ಶಿಕ್ಷಣ ಇಲಾಖೆ ನಡೆಸಿದ್ದ ಸಭೆಯಲ್ಲಿನ ನಿರ್ಧಾರ ಅದಾಗಿರಲಿಲ್ಲ. ಸೇವೆಯಲ್ಲಿ ನಿರತವಾಗಿಲ್ಲದ ಅರ್ಹರಾದ ಅಭ್ಯರ್ಥಿಗಳು ತಮ್ಮ ಅರ್ಹತೆಗೆ (ಮೆರಿಟ್‌) ಅನುಗುಣವಾಗಿ ಸೀಟು ಪಡೆಯಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಇನ್‌ ಸರ್ವೀಸ್‌ ಅಭ್ಯರ್ಥಿಗಳ ಕೋಟಾವನ್ನು ಶೇ. 30ರಿಂದ ಶೇ. 15ಕ್ಕೆ ಇಳಿಕೆ ಮಾಡಲಾಗಿದೆ. ಸೀಟುಗಳ ಸಂಖ್ಯೆ ಇಳಿಕೆ ಮಾಡಲು ಪಾಲಿಸಿರುವ ಮಾನದಂಡವು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಲಭ್ಯವಿರುವ ಸೀಟುಗಳು ಮತ್ತು ಕೌನ್ಸೆಲಿಂಗ್‌ಗೆ ಅರ್ಹವಾಗಿರುವ ಸೇವೆಯಲ್ಲಿರುವ ಅಭ್ಯರ್ಥಿಗಳು ಪ್ರಸ್ತುತ ಮಾನದಂಡವಾಗಬೇಕಿತ್ತು. ಉತ್ತಮ ಅನುಪಾತ ಆಯ್ಕೆಯು ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಗಬೇಕು. ಕಳೆದ ವರ್ಷ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ 1:5ರ ಅನುಪಾತದಲ್ಲಿ ಸೀಟುಗಳು ದೊರೆತಿತ್ತು. ಅಂದರೆ ಒಬ್ಬ ಅಭ್ಯರ್ಥಿಯು 5 ಸೀಟುಗಳಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಒಂದು ಸೀಟಿನಲ್ಲಿ ಅಭ್ಯರ್ಥಿಯು ಅದೇ ಸೀಟು ಆಯ್ಕೆ ಮಾಡಿಕೊಳ್ಳಬೇಕಿದೆ,” ಎಂದು ನ್ಯಾಯಾಲಯ ಆದೇಶದಲ್ಲಿ ವಿವರಿಸಿದೆ.

ಸರಕಾರ ನೀಡಿದ ಕಾರಣ ಸರಿಯಾಗಿಲ್ಲ
“ಸಮರ್ಥವಾದ ಕಾರಣ ನೀಡದೇ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನೀಡಲಾಗುತ್ತಿದ್ದ ಕೋಟಾವನ್ನು ಯಾವುದೇ ಸಾಧಕ-ಬಾಧಕ ಪರಿಶೀಲಿಸದೇ ತಗ್ಗಿಸಲಾಗಿದೆ. ಸೇವೆಯಲ್ಲಿರುವ ವೈದ್ಯರ ಕೋಟಾದಲ್ಲಿನ ಸೀಟು ಹಂಚಿಕೆ ಇಳಿಕೆ ಮಾಡುವಾಗ ರಾಜ್ಯ ಸರ್ಕಾರವು ವಾಸ್ತವಿಕ ವಿಚಾರಗಳನ್ನು ಗಮನಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ, ಅಕ್ಟೋಬರ್‌ 6ರಂದು ಹೊರಡಿಸಿರುವ ಆಕ್ಷೇಪಾರ್ಹ ಅಧಿಸೂಚನೆಯು ಸ್ವೇಚ್ಛೆಯಿಂದ ಕೂಡಿದೆ. ಹಾಗಾಗಿ ಅದನ್ನು ವಜಾ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 9ರಂದು ವೈದ್ಯಕೀಯ ಶಿಕ್ಷಣ ನಿರ್ದೇಶಕರು ಹೊರಡಿಸಿರುವ ಸೀಟ್‌ ಮ್ಯಾಟ್ರಿಕ್ಸ್‌ ಅನ್ನು ವಜಾ ಮಾಡಲಾಗಿದೆ. ವಾಸ್ತವಿಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸೇವೆಯಲ್ಲಿರುವ ವೈದ್ಯರಿಗೆ ಕೋಟಾ ನಿಗದಿಪಡಿಸುವ ಸ್ವಾತಂತ್ರ್ಯ ರಾಜ್ಯ ಸರ್ಕಾರಕ್ಕೆ ಇದೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ ಏನಿತ್ತು?
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿದಾರರು (ಗ್ರಾಮೀಣ ಸೇವೆಯಲ್ಲಿರುವ ಎಂಬಿಬಿಎಸ್‌ ವೈದ್ಯರು) ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಪ್ರತಿ ವರ್ಷ ಸ್ನಾತಕೋತ್ತರ ಕೋರ್ಸ್‌ಗಳಿಗೆ ಸೇರಲು ರಾಜ್ಯ ಸರ್ಕಾರವು ಸೀಟುಗಳನ್ನು ನಿಗದಿಪಡಿಸುತ್ತದೆ. 2022ರ ಜನವರಿ 19ರಂದು ರಾಜ್ಯ ಸರ್ಕಾರವು ಸೇವಾನಿರತ ವೈದ್ಯರಿಗೆ ಶೇ. 30ರಷ್ಟು ಸೀಟುಗಳನ್ನು ನಿಗದಿಪಡಿಸಿತ್ತು. 86 ಅಭ್ಯರ್ಥಿಗಳು ಕೌನ್ಸೆಲಿಂಗ್‌ಗೆ ಅರ್ಹತೆ ಪಡೆದಿದ್ದರೂ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ 392 ಸೀಟುಗಳನ್ನು ನಿಗದಿಪಡಿಸಲಾಗಿತ್ತು. ಆದರೆ, ಪ್ರಸಕ್ತ ವರ್ಷದಲ್ಲಿ 113 ಸೇವಾ ನಿರತರು ಕೌನ್ಸೆಲಿಂಗ್‌ಗೆ ಅರ್ಹತೆ ಪಡೆದಿದ್ದು, ಒಟ್ಟು ಸೀಟುಗಳ ಸೀಟುಗಳ ಸಂಖ್ಯೆಯನ್ನು 206ಕ್ಕೆ ಸೀಮಿತಗೊಳಿಸಲಾಗಿದೆ. ಅಕ್ಟೋಬರ್‌ 6ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಸೇವಾನಿರತರಿಗೆ ಶೇ. 15ರಷ್ಟು ಸೀಟುಗಳನ್ನು ನಿಗದಿಪಡಿಸಿ ಉಳಿದ ಶೇ. 85ರಷ್ಟು ಸೀಟುಗಳನ್ನು ಸೇವಾನಿರತರಲ್ಲದ ಅಭ್ಯರ್ಥಿಗಳಿಗೆ ನಿಗದಿಪಡಿಸಲಾಗಿತ್ತು. ಇದರ ಭಾಗವಾಗಿ ಅಕ್ಟೋಬರ್‌ 9ರಂದು ವೈದ್ಯಕೀಯ ಶಿಕ್ಷಣ ನಿರ್ದೇಶಕರು ಸೀಟ್‌ ಮ್ಯಾಟ್ರಿಕ್ಸ್‌ ಪ್ರಕಟಿಸಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನು ಓದಿ | NEET-PG ಫಲಿತಾಂಶ ಪ್ರಕಟ: ರಿಸಲ್ಟ್ ಚೆಕ್‌ ಮಾ‌ಡೋದು ಹೀಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Davanagere News: ಹೊನ್ನಾಳಿ ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kittur Rani Chennamma Residential School
Koo

ಹೊನ್ನಾಳಿ: ತಾಲೂಕಿನ ತರಗನಹಳ್ಳಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು (Davanagere News) ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ತರಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ, ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ. ಪರಿಸರವು ಸಕಲ ಜೀವರಾಶಿಗಳಿಗೂ ಆಶ್ರಯ ನೀಡಿದೆ. ಎಲ್ಲರೂ ಪರಿಸರ ಉಳಿಸಿ, ಬೆಳೆಸೋಣ ಎಂದು ಶಾಲೆಯ ವಿದ್ಯಾರ್ಥಿಗಳಿಗೆ ತಿಳಿಸಿದರು.

ಪರಿಸರದ ಬಗ್ಗೆ ಮಕ್ಕಳಿಗೆ ಬಾಲ್ಯದಲ್ಲಿಯೇ ಕಾಳಜಿ ಮೂಡಿಸಬೇಕು ಎಂದ ಅವರು, ಗಿಡಗಳನ್ನು ನೆಡುವುದರ ಜತೆಗೆ ಅದನ್ನು ಉಳಿಸಿ, ಬೆಳೆಸುವ ಕಾರ್ಯವನ್ನು ಮಾಡಬೇಕು ಎಂದು ತಿಳಿಸಿದರು. ಇದೇ ವೇಳೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಕೆ.ಆರ್. ಹಾಗೂ ವಸತಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

Physical Abuse: ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.

VISTARANEWS.COM


on

Physical Abuse
Koo

ಮೈಸೂರು: ವಿಚ್ಛೇದಿತ ಮಹಿಳೆ ಜತೆ ಲವ್ವಿ ಡವ್ವಿ ನಡೆಸಿ, ಆಕೆಯನ್ನು ಗರ್ಭಿಣಿ ಮಾಡಿ ಯುವಕನೊಬ್ಬ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಯುವಕ ದುರ್ಬಳಕೆ ಮಾಡಿಕೊಂಡಿದ್ದಾನೆ ಎಂದು ಮಹಿಳೆ ನೀಡಿದ ದೂರಿನ ಮೇರೆಗೆ ನಗರದ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ 34 ವರ್ಷದ ಮಹಿಳೆ ಮೋಸ ಹೋದವರು. ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ, ಕೊಳ್ಳೇಗಾಲದ ತೇರಂಬಳ್ಳಿ ಗ್ರಾಮದ ಹರೀಶ (25) ಎಂಬಾತನ ವಿರುದ್ಧ ದೂರು ನೀಡಿದ್ದಾರೆ.

2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿಯಾಗಿದ್ದಾನೆ. ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಯುವಕ ಪರಾರಿಯಾಗಿದ್ದಾನೆ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದು, ಇಬ್ಬರೂ ಹವ್ಯಾಸಿ ಹಾಡುಗಾರರು. ಸಿಂಗಿಂಗ್ ಇವೆಂಟ್ಸ್‌ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯವಾಗಿತ್ತು. ಪರಿಚಯ ಪ್ರೇಮಕ್ಕೆ ತಿರುಗಿ ಪ್ರೀತ್ಸೆ ಎಂದು ದುಂಬಾಲು ಬಿದ್ದಿದ್ದ. ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್, ಆತನ ಪ್ರೀತಿಯನ್ನು ಒಪ್ಪಿದ್ದರಿಂದ
ಮನೆಗೆ ಯುವಕ ಆಗಾಗ್ಗೆ ಬಂದು ಹೋಗುತ್ತಿದ್ದ.

ಇದನ್ನೂ ಓದಿ | Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ ಎಂದ ಮಹಿಳೆ

ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. ನಂತರ ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ ಮಾಡಲಾಗಿದೆ. ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನು ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ಹೀಗಾಗಿ ನನಗೆ ನ್ಯಾಯ ಕೊಡಿಸಿ ಎಂದು ಪೊಲೀಸರ ಬಳಿ ನೊಂದ ಮಹಿಳೆ ಅಂಗಲಾಚಿದ್ದಾರೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

World Environment Day: ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಜರುಗಿತು.

VISTARANEWS.COM


on

World Environment Day Celebration at Kamaruru Government higher Primary School
Koo

ಸೊರಬ: ನಿಸರ್ಗದತ್ತವಾದ ಪರಿಸರ (World Environment Day) ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್. ವಾಸುದೇವ್ ಹೇಳಿದರು.

ತಾಲೂಕಿನ ಚಂದ್ರಗುತ್ತಿ ಸಮೀಪದ ಕಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಗಿಡಗಳನ್ನು ನೆಡುವುದರ ಜತೆಯಲ್ಲಿ ಗಿಡಗಳನ್ನು ಪೋಷಣೆ ಮಾಡುವುದು ಸಹ ಮುಖ್ಯ. ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಪರಿಸರದ ವಾತಾವರಣವಿದ್ದಲ್ಲಿ ಮತ್ತು ಮನುಷ್ಯ ಆರೋಗ್ಯಕರವಾಗಿರಬೇಕಾದರೆ ಪರಿಸರ ಉತ್ತಮವಾಗಿರಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಸಸಿಗಳನ್ನು ನೆಟ್ಟರೆ ಸಾಲದು ಪೋಷಣೆ ಅಗತ್ಯ ಈ ನಿಟ್ಟಿನಲ್ಲಿ ಕಳೆದ ವರ್ಷ ನೆಟ್ಟ ಗಿಡಗಳನ್ನು ಸಂರಕ್ಷಣೆ ಮಾಡುವಲ್ಲಿ ಶಾಲಾ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಶಾಲಾ ಶಿಕ್ಷಕ ವರ್ಗದವರು ಹಾಗೂ ವಿದ್ಯಾರ್ಥಿಗಳಿಂದ ಹಲವು ಜಾತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡಲಾಯಿತು.

ಇದನ್ನೂ ಓದಿ: Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಗಣೇಶ್ ಪ್ರಸಾದ, ನಾಮದೇವ ನಾಯ್ಕ್, ಅಕ್ಷಯ್, ಶ್ರೀಕೃಷ್ಣ, ಆಶಾ, ಶಶಿಕಾಂತ್, ಕಾವ್ಯ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಚಿಕ್ಕಬಳ್ಳಾಪುರ

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Raksha Ramaiah: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದರೂ ಸಹ ನಾನಾ ಕಾರಣಗಳಿಂದಾಗಿ ಅದನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಶೇ. 3 ರಷ್ಟು ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Youth Congress National General Secretary Raksha Ramaiah latest statement
Koo

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿದ್ದರೂ ಸಹ ನಾನಾ ಕಾರಣಗಳಿಂದಾಗಿ ಅದನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ (Raksha Ramaiah) ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಪತ್ರಕರ್ತರ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಮಾಜಿ ಸಚಿವ, ಎಂಎಲ್‌ಸಿ ಡಾ. ಎಂ.ಆರ್. ಸೀತಾರಾಂ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಕಾಂಗ್ರೆಸ್‌ಗೆ ಶೇ. 3 ರಷ್ಟು ಮತಗಳು ಹೆಚ್ಚಿನ ಪ್ರಮಾಣದಲ್ಲಿ ಬಂದಿತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ತಮಗೆ 6.60 ಲಕ್ಷ ಮತಗಳು ದೊರೆತಿದ್ದು, 1.60 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿರುವ ತಮ್ಮ ಪ್ರತಿಸ್ಪರ್ಧಿ ಸುಧಾಕರ್ ಅವರಿಗೆ ಶುಭ ಕೋರುತ್ತೇನೆ. ಜನರ ನಿರೀಕ್ಷೆಯಂತೆ ಅವರು ಕೆಲಸ ಮಾಡುತ್ತಾರೆ. ಕ್ಷೇತ್ರದ ಜನರ ಧ್ವನಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

ಕರ್ನಾಟಕದಲ್ಲಿ 11 ಕ್ಷೇತ್ರದಲ್ಲಿ 40ಕ್ಕಿಂತ ಕಡಿಮೆ ವಯಸ್ಸಿನವರಿಗೆ ಸ್ಪರ್ಧಿಸಲು ಅವಕಾಶ ದೊರೆತ್ತಿತ್ತು. ನಾಲ್ವರು ಯುವಕರು ಗೆಲುವು ಸಾಧಿಸಿರುವುದು ಉತ್ತಮ ಬೆಳವಣಿಗೆ. ಜನಪರ ಕಾರ್ಯಕ್ರಮಗಳ ಮೂಲಕ ಚುನಾವಣೆ ಎದುರಿಸಿದೆವು. ಮನೆ ಮನೆಗಳಿಗೆ ನಮ್ಮ ಕಾರ್ಯಕ್ರಮಗಳು ತಲುಪಿವೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ಯುವ ಜನಾಂಗಕ್ಕೆ ಆದ್ಯತೆ ಕಲ್ಪಿಸಿದ್ದರು. ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜನರಿಗೆ ಧನ್ಯವಾದಗಳು. ಚಿಕ್ಕಬಳ್ಳಾಪುರದಲ್ಲಿ ಕಳೆದ ಐದಾರು ವರ್ಷಗಳಿಂದ ಯುವ ಕಾಂಗ್ರೆಸ್ ಜತೆಗೂಡಿ ಕೆಲಸ ಮಾಡುತ್ತಿದ್ದೆ. ಅತಿ ಹೆಚ್ಚು ಮತಗಳನ್ನು ಪಡೆಯಲು ಪ್ರಯತ್ನಿಸಿದ್ದೇವೆ. ಮುಂಬರುವ ದಿನಗಳಲ್ಲಿ ಚಿಕ್ಕಬಳ್ಳಾಪುರದಲ್ಲಿ ಹೂವಿನ ಮಾರುಕಟ್ಟ ಸ್ಥಾಪಿಸುವುದು ಸೇರಿದಂತೆ ರೈತರು, ಮಹಿಳೆಯರ ಪರವಾಗಿ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ, ಅನುಸೂಯಮ್ಮ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Continue Reading
Advertisement
Kisan Samman Nidhi
ಪ್ರಮುಖ ಸುದ್ದಿ6 mins ago

Kisan Samman Nidhi: ರೈತರಿಗೆ ಗುಡ್‌ ನ್ಯೂಸ್;‌ ಕಿಸಾನ್‌ ಸಮ್ಮಾನ್‌ ನಿಧಿ 2 ಸಾವಿರ ರೂ. ಹೆಚ್ಚಳ, ಇನ್ನು ಸಿಗೋದು 8 ಸಾವಿರ ರೂ.!

IND vs PAK
ಕ್ರೀಡೆ22 mins ago

IND vs PAK: ಭಾರತ-ಪಾಕ್​ ಹೈವೋಲ್ಟೇಜ್​ ಪಂದ್ಯದ ಹವಾಮಾನ ವರದಿ, ಆಡುವ ಬಳಗ ಹೇಗಿದೆ?

World Environment Day Celebration at Kittur Rani Chennamma Residential School
ದಾವಣಗೆರೆ25 mins ago

Davanagere News: ತರಗನಹಳ್ಳಿಯ ಚನ್ನಮ್ಮ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

Physical Abuse
ಕರ್ನಾಟಕ27 mins ago

Physical Abuse: 34 ವರ್ಷದ ವಿಚ್ಛೇದಿತ ಮಹಿಳೆ ಜತೆ 25ರ ಯುವಕನ ಲವ್ವಿ ಡವ್ವಿ; ಗರ್ಭಿಣಿ ಮಾಡಿ ಪರಾರಿ!

World Environment Day Celebration at Kamaruru Government higher Primary School
ಶಿವಮೊಗ್ಗ27 mins ago

World Environment Day: ಚಂದ್ರಗುತ್ತಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Youth Congress National General Secretary Raksha Ramaiah latest statement
ಚಿಕ್ಕಬಳ್ಳಾಪುರ29 mins ago

Raksha Ramaiah: ಚಿಕ್ಕಬಳ್ಳಾಪುರದಲ್ಲಿ ನಾನಾ ಕಾರಣಗಳಿಂದ ಮತಗಳನ್ನು ಗೆಲುವಾಗಿ ಪರಿವರ್ತಿಸಲು ಸಾಧ್ಯವಾಗಿಲ್ಲ: ರಕ್ಷಾ ರಾಮಯ್ಯ

Narendra Modi
ದೇಶ50 mins ago

ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ತನ್ನ ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ ಮೋದಿ ‘ಭಕ್ತ’!

IND vs PAK
ಕ್ರೀಡೆ1 hour ago

IND vs PAK: ಬಾಬರ್‌ ಪಡೆಯನ್ನು ಬೆಂಡೆತ್ತಲಿ ರೋಹಿತ್​ ಸಾರಥ್ಯದ ಟೀಮ್​ ಇಂಡಿಯಾ

Valmiki Corporation Scam
ವೈರಲ್ ನ್ಯೂಸ್2 hours ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಹಣ ಹಿಂತಿರುಗಿಸಲು ತೆಲಂಗಾಣ ಸಿಎಂಗೆ ಪತ್ರ ಬರೆದ ಕನ್ನಡಿಗರು

Mamata Banerjee
ದೇಶ2 hours ago

Mamata Banerjee: 15 ದಿನಗಳಲ್ಲೇ ಮೋದಿ ಸರ್ಕಾರ ಪತನ; ಸ್ಫೋಟಕ ಭವಿಷ್ಯ ನುಡಿದ ಮಮತಾ ಬ್ಯಾನರ್ಜಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌