Site icon Vistara News

NEET UG 2024: ಯುಜಿ ನೀಟ್: ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಅವಕಾಶ

UG Neet 2024

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡು, ಆನ್ ಲೈನ್ ಅರ್ಜಿ ಸಲ್ಲಿಸಿರುವವರು ಈಗ ಯುಜಿ-ನೀಟ್‌ನಲ್ಲಿ (NEET UG 2024) ಅರ್ಹತೆ ಪಡೆದಿದ್ದಲ್ಲಿ, ಅಂಥವರು ತಮ್ಮ ರೋಲ್ ನಂಬರ್ ದಾಖಲಿಸಲು ಸದ್ಯದಲ್ಲೇ ಜಾಲತಾಣದಲ್ಲಿ ಪೋರ್ಟಲ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ತಿಳಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಾಹಿತಿ ನೀಡಿದ್ದು, ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರ್ ಆಧಾರದ ಮೇಲೆ ಅಭ್ಯರ್ಥಿಯ ಹೆಸರು, ರ‍್ಯಾಂಕ್, ಅಂಕ, ಅರ್ಹತೆಗಳ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಈಗ ಯುಜಿ ನೀಟ್‌ನಲ್ಲಿ ಅರ್ಹತೆ ಪಡೆದುಕೊಂಡಿದ್ದು, ಈವರೆಗೂ ಯುಜಿ-ಸಿಇಟಿಗೆ ನೋಂದಣಿ ಮಾಡಿಕೊಳ್ಳದೆ ಇರುವವರಿಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಅವಕಾಶ ನೀಡಲಾಗುವುದು. ಅಭ್ಯರ್ಥಿಗಳು ದಾಖಲಿಸುವ ವಿವರಗಳನ್ನು ವೆಬ್-ಸರ್ವೀಸ್ ಮೂಲಕ ಆನ್‌ಲೈನ್ ಮೂಲಕವೇ ಪರಿಶೀಲಿಸಲಾಗುವುದು. ಹೀಗಾಗಿ ಭೌತಿಕ ಪರಿಶೀಲನೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Job News: ಗುಡ್‌ನ್ಯೂಸ್‌; 35 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮತಿ

ರಾಜ್ಯದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಾಧಿಕಾರದಲ್ಲಿ ನೋಂದಣಿ ಮಾಡಿ, ಅರ್ಜಿ ಸಲ್ಲಿಸಿ, ಆನ್‌ಲೈನ್ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ. ನಮೂದಿಸುವ ಆಪ್ಶನ್ಸ್ (Options)ಪರಿಗಣಿಸಿ, ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು. ಎಂಜಿನಿಯರಿಂಗ್ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳಿಗೆ ಏಕಕಾಲದಲ್ಲೇ ಆಪ್ಶನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಮತ್ತು ಜತೆಯಲ್ಲೇ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ವಿವರಿಸಿದರು.

ಸಂಬಂಧ ವಿವಿಧ ಇಲಾಖೆಗಳು ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕದ ವಿವರಗಳನ್ನು ಕೆಇಎಗೆ ನೀಡಿದ ಬಳಿಕ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ | Job Alert: ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

Exit mobile version