Site icon Vistara News

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Neha Murder Case

ಹುಬ್ಬಳ್ಳಿ: ದೇಶದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ನೇಹಾ ಕೊಲೆ ಪ್ರಕರಣದಲ್ಲಿ (Neha Murder Case) ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ ನಡೆಸುತ್ತಿದೆ. ಏ.18 ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ ಹಿರಮೇಠ ಪುತ್ರಿ ನೇಹಾ ಕೊಲೆ ನಡೆದಿತ್ತು. ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಇದೀಗ ಪ್ರಕರಣದ ಕುರಿತು ಚಾರ್ಚ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ ನಡೆಸಿದೆ.

ನೇಹಾಳನ್ನು ಕೊಂದಿದ್ದ ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಫಯಾಜ್ ತಂದೆ-ತಾಯಿ ಸೇರಿ 10 ಕ್ಕೂ ಹೆಚ್ಚು ಜನರ ವಿಚಾರಣೆ ಮಾಡಿರುವ ಸಿಐಡಿ ಇನ್ನೊಂದು ವಾರದಲ್ಲಿ ಚಾರ್ಚ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.

ನೇಹಾ ತಂದೆ ನಿರಂಜನ ಫಯಾಜ್ ಬಿಟ್ಟು, ಇನ್ನು ಕೆಲವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದರ ಹಿಂದೆ ದೊಡ್ಡ ಜಾಲ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಈ ಬಗ್ಗೆಯೂ ಸಿಐಡಿ ತನಿಖೆ ನಡೆಸುತ್ತಿದೆ. ಜೆಎಂಎಫ್‌ಸಿ ನ್ಯಾಯಾಲಯದ ಅನುಮತಿ ಮೇರೆಗೆ ಏ. 30ರ ವರೆಗೆ ಆರು ದಿನಗಳ ಕಾಲ ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದು ಸಿಐಡಿ ವಿಚಾರಣೆ ನಡೆಸಿತ್ತು. ನಂತರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, 14‌ ದಿನಗಳ ಕಾಲ ಫಯಾಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.

ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು ಸ್ವೀಕರಿಸಿದ ರಮೇಶ್‌ ಜೋಶ್‌ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.

ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್‌ ರಮೇಶ್‌ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಈಜುವ ಚಾಲೆಂಜ್ ವಿನಯ್ ರಮೇಶ್‌ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Exit mobile version