ಕರ್ನಾಟಕ
Book release: ನೋವಿನ ನಡುವೆಯೂ ಪ್ರೀತಿ ಹಂಚಿದ ರಾಹುಲ್ ಗಾಂಧಿ: ಜಿ.ಎನ್ ದೇವಿ; ಸುಗತ ಶ್ರೀನಿವಾಸರಾಜು ಕೃತಿ ʼಸ್ಟ್ರೇಂಜ್ ಬರ್ಡನ್ಸ್ʼ ಬಿಡುಗಡೆ
2004ರಲ್ಲಿ ರಾಜಕೀಯಕ್ಕೆ ಬಂದ ದಿನದಿಂದ ಭಾರತ್ ಜೋಡೋ ಯಾತ್ರೆಯವರೆಗಿನ ರಾಹುಲ್ ಗಾಂಧಿಯವರ ಏಳು ಬೀಳುಗಳನ್ನು ವಾಸ್ತವಿಕವಾಗಿ ʼಸ್ಟ್ರೇಂಜ್ ಬರ್ಡನ್ಸ್ʼ ಕೃತಿ ಕಟ್ಟಿಕೊಟ್ಟಿದೆ ಎಂದು ಇತಿಹಾಸಜ್ಞ ಸಂಜೀವ್ ಜೈನ್ ಹೇಳಿದರು.
ಬೆಂಗಳೂರು: ತಮ್ಮ ಪರಿವಾರದ ಹತ್ಯೆಗಳ ನೋವಿನ ನಡುವೆಯೂ ಸಮಾಜಕ್ಕೆ ಪ್ರೀತಿ ಹಂಚಲು ನಿರಂತರ ಪ್ರಯತ್ನ ಮಾಡಿದವರು ರಾಹುಲ್ ಗಾಂಧಿ (Rahul Gandhi). ಅವರ ನಡೆ ಬುದ್ಧಪ್ರಜ್ಞೆಯ ಹಾದಿಯಂತೆ ಕಾಣುತ್ತದೆ. ಅವರ ವ್ಯಕ್ತಿತ್ವ, ದ್ವಂದ್ವ, ವೈರುಧ್ಯಗಳನ್ನು ʼಸ್ಟ್ರೇಂಜ್ ಬರ್ಡನ್ಸ್ʼ ಕೃತಿ ಹಿಡಿದಿಡುತ್ತದೆ ಎಂದು ಚಿಂತಕ ಜಿ.ಎನ್.ದೇವಿ ಹೇಳಿದ್ದಾರೆ.
ಅವರು ಮಂಗಳವಾರ ನಗರದಲ್ಲಿ ನಡೆದ ಪತ್ರಕರ್ತ ಸುಗತ ಶ್ರೀನಿವಾಸರಾಜು (sugatha srinivasarajua) ಅವರ ಕೃತಿ ʼʼಸ್ಟ್ರೇಂಜ್ ಬರ್ಡನ್ಸ್- ದಿ ಪಾಲಿಟಿಕ್ಸ್ ಆಂಡ್ ಪ್ರೆಡಿಕಮೆಂಟ್ಸ್ ಆಫ್ ರಾಹುಲ್ ಗಾಂಧಿʼ (Strange Burdens: The Politics and Predicaments of Rahul Gandhi) ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೃತಿ ಬಿಡುಗಡೆ ಮಾಡಿ ಮಾತನಾಡಿದರು.
ರಾಹುಲ್ ಅವರಲ್ಲಿ ಮಾನವ ಪ್ರೇಮ, ಬಡವರ ಬಗೆಗಿನ ಕಾಳಜಿ, ಕೋಮುವಾದವನ್ನು ವಿರೋಧಿಸುವ ಜಾತ್ಯತೀತ ನಿಲುವು, ಧರ್ಮಗಳ ನಡುವೆ ಸಾಮರಸ್ಯ ಮೂಡಿಸುವ ಪ್ರಯತ್ನ, ಮಾನವೀಯತೆ, ಆಧ್ಯಾತ್ಮ ಹೀಗೆ ಹಲವ ಆಯಾಮಗಳಿವೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರ ವ್ಯಕ್ತಿತ್ವವನ್ನು ಸಾರ್ವಜನಿಕವಾಗಿ ಕುಗ್ಗಿಸಲು ಯತ್ನಿಸಿದರೂ ರಾಹುಲ್ ಹಿಂದಡಿ ಇಡಲಿಲ್ಲ. ಅವರ ʼಅನಿರೀಕ್ಷಿತ ಹೊರೆʼಗಳನ್ನು ಸುಗತ ಚಿತ್ರಿಸಿದ್ದಾರೆ ಎಂದು ದೇವಿ ಹೇಳಿದರು.
ಅನುಕೂಲಕರವಾಗಿ ಇರುವ ಸಾಧ್ಯತೆಯನ್ನು ಬಿಟ್ಟುಕೊಟ್ಟು ರಾಹುಲ್ ಗಾಂಧಿಯವರು ಪ್ರತೀಕಾರದ ರಾಜಕೀಯಕ್ಕೆ ಎದೆಯೊಡ್ಡಿ ಸಾಗುತ್ತಿದ್ದಾರೆ. 2004ರಲ್ಲಿ ರಾಜಕೀಯಕ್ಕೆ ಬಂದ ದಿನದಿಂದ ಭಾರತ್ ಜೋಡೋ ಯಾತ್ರೆಯವರೆಗಿನ ಅವರ ಏಳು ಬೀಳುಗಳನ್ನು ವಾಸ್ತವಿಕವಾಗಿ ʼಸ್ಟ್ರೇಂಜ್ ಬರ್ಡನ್ಸ್ ಕೃತಿ ಕಟ್ಟಿಕೊಟ್ಟಿದೆ ಎಂದು ಇತಿಹಾಸಜ್ಞ ಸಂಜೀವ್ ಜೈನ್ ಹೇಳಿದರು.
ಇಂದಿರಾ ಗಾಂಧಿಯವರಿಂದ ಇಂದಿನವರೆಗೆ ಬದಲಾಗುತ್ತ ಬಂದಿರುವ ರಾಜಕೀಯ ಚಿತ್ರಣವನ್ನು ಈ ಕೃತಿ ಮಾಡಿಕೊಡುತ್ತಿದೆ. ಇದು ಬರೀ ರಾಹುಲ್ ಗಾಂಧಿ ಅವರ ಜೀವನಚಿತ್ರಣವಲ್ಲ. ಇದು ಈಗಿನ ಸಾಮಾಜಿಕ, ರಾಜಕೀಯ ವಿಶ್ಲೇಷಣೆಯ ದಾಖಲೆಯಾಗಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಚಿರಂಜೀವಿ ಸಿಂಗ್ ನುಡಿದರು.
ಕೃತಿ ರಚನೆಯ ಸಂದರ್ಭ ದೇಶದ ರಾಜಕೀಯ ಬೆಳವಣಿಗೆಗಳನ್ನು ಮತ್ತಷ್ಟು ಆಳವಾಗಿ ಅರಿಯಲು, ವಿಶ್ಲೇಷಿಸಲು ಹಾದಿ ಮಾಡಿಕೊಟ್ಟಿತು ಎಂದು ಕೃತಿಕಾರ ಸುಗತ ಶ್ರೀನಿವಾಸರಾಜು ನುಡಿದರು. ನಟಿ ಪದ್ಮಾವತಿ ರಾವ್ ಸಮಾರಂಭದಲ್ಲಿ ಇದ್ದರು. ಕೃತಿಯನ್ನು ಪೆಂಗ್ವಿನ್ ಇಂಡಿಯಾ ಪ್ರಕಟಿಸಿದೆ.
ಇದನ್ನೂ ಓದಿ: Book Release : ಹಿರಿಯ ಪತ್ರಕರ್ತ ಸುಗತ ಶ್ರೀನಿವಾಸರಾಜು ರಚಿತ ‘ರಾಹುಲ್ ಗಾಂಧಿ’ ಕುರಿತ ಕೃತಿ ಸೆ.12ರಂದು ಬಿಡುಗಡೆ
ತುಮಕೂರು
Tumkur News: ಶಿರಾ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ; ಜನತೆ ಹೈರಾಣು
Tumkur News: ಶಿರಾ ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳ ಮಿತಿಮೀರಿದ್ದು, ಇದರಿಂದ ಸಾರ್ವಜನಿಕರು, ಮಹಿಳೆಯರು, ಚಿಕ್ಕ ಮಕ್ಕಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಶಿರಾ: ನಗರದ ನಾನಾ ಕಡೆ ಬೀದಿ ನಾಯಿಗಳ (Stray Dogs) ಹಾವಳಿ ಮಿತಿಮೀರಿದ್ದು, ಜನಸಾಮಾನ್ಯರು (Publics) ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಉಪಟಳದಿಂದಾಗಿ ಸಾರ್ವಜನಿಕರು, ಮಹಿಳೆಯರು, ಚಿಕ್ಕ ಮಕ್ಕಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಹಿಂಡು ಹಿಂಡಾಗಿ ಬೀದಿ ನಾಯಿಗಳು ರಸ್ತೆಯಲ್ಲಿ ಓಡಾಡುತ್ತಾ, ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿ, ಗಾಯಗೊಳಿಸುತ್ತಿವೆ. ನಗರದ ವಿವಿಧ ಬಡಾವಣೆಗಳಲ್ಲಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತಿವೆ. ಇದರಿಂದ ಸ್ಥಳೀಯ ನಿವಾಸಿಗಳಲ್ಲಿ ಅತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!
ಇತ್ತೀಚೆಗೆ ನಗರದ ರಸ್ತೆಯಲ್ಲಿ ರಾತ್ರಿ ವೇಳೆ ದಂಪತಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಅವರ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿದ್ದು, ದಂಪತಿ ರಸ್ತೆಯ ವಿಭಜಕದ ಮೇಲೆ ಬಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಗೆ ತೀವ್ರ ಸ್ವರೂಪದ ಗಾಯಗಳಾದ ಘಟನೆಯನ್ನು ನಗರದ ಜನತೆ ಇನ್ನೂ ಮರೆತಿಲ್ಲ.
ನಗರದಲ್ಲಿ ಬೀದಿ ನಾಯಿಗಳು ಚಿಕ್ಕ ಮಕ್ಕಳ ಮೇಲೂ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆಗಳೂ ನಡೆದಿವೆ. ಇದರಿಂದ ಮಕ್ಕಳು ಹೊರಹೋಗಲು ಭಯಪಡುವ ವಾತಾವರಣ ಸೃಷ್ಟಿಯಾಗಿದೆ. ನಗರದ ಹಳೇ ಆಸ್ಪತ್ರೆ ರಸ್ತೆ, ಮಧುಗಿರಿ ರಸ್ತೆ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗಲು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಆದರೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮೌನವಹಿಸಿರುವುದು ಸರಿಯಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರಸಭೆ ನಿರ್ಲಕ್ಷ್ಯ
ನಗರದಲ್ಲಿ ಬೀದಿ ನಾಯಿಗಳ ಉಪಟಳವನ್ನು ನಿಯಂತ್ರಿಸಲು ಸೂಕ್ತ ಕ್ರಮಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ: Viral Video: ಪಂದ್ಯ ಮುಗಿದರೂ ತಡರಾತ್ರಿವರೆಗೂ ಬ್ಯಾಟಿಂಗ್ ಅಭ್ಯಾಸ ನಡೆಸಿದ ಟೀಮ್ ಇಂಡಿಯಾ ಆಟಗಾರ
ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳು ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ನಿರ್ಭೀತಿಯಿಂದ ಹೋಗಿ ಬರುವ ವಾತಾವರಣ ಸೃಷ್ಟಿಯಾಗಬೇಕಿದೆ ಎಂದು ನಗರದ ನಿವಾಸಿಗಳು ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ
Uttara Kannada News: ರೇಬೀಸ್ ನಿಯಂತ್ರಣಕ್ಕೆ ಮುಂಜಾಗ್ರತೆ ಅಗತ್ಯ; ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ
Uttara Kannada News: ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರವಾರ: ಜಿಲ್ಲೆಯಲ್ಲಿ ನಾಯಿ ಕಡಿತ (Dog Bite) ಮತ್ತು ರೇಬೀಸ್ ರೋಗದ (Rabies Disease) ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ (Precautions) ಕ್ರಮಗಳನ್ನು ಕೈಗೊಳ್ಳುವಂತೆ ಪಶುಪಾಲನಾ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೇಬೀಸ್ ರೋಗವು ಒಂದು ಮಾರಣಾಂತಿಕ ರೋಗವಾಗಿದ್ದು, ಈ ರೋಗದ ಹರಡುವಿಕೆ, ಚಿಕಿತ್ಸೆ ಮತ್ತು ಅದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಮತ್ತು ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ರೇಬೀಸ್ ರೋಗ ನಿಯಂತ್ರಣದ ಕುರಿತು ಮಾಹಿತಿ ತಲುಪಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮ ಮತ್ತು ಎಲ್ಲಾ ನಗರಗಳ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ, ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀದಿನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ನಡೆಸಬೇಕು. ಸಾಕು ಪ್ರಾಣಿಗಳನ್ನು ಸಾಕುವ ಕುಟುಂಬದವರಿಗೂ ಕೂಡಾ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವುದು ಅತ್ಯಗತ್ಯ ಎಂದರು.
ಇದನ್ನೂ ಓದಿ: Money Guide: ಅಕ್ಟೋಬರ್ 1ರ ಮೊದಲೇ ಇದೆಲ್ಲ ಮಾಡಿಕೊಳ್ಳಿ… ಇಲ್ಲದಿದ್ದರೆ ಹಣ ಕಳೆದುಕೊಳ್ಳುವಿರಿ!
ಬೀದಿ ನಾಯಿಗಳು ಮತ್ತು ಸಾಕು ನಾಯಿಗಳು ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಪ್ರಥಮ ಚಿಕಿತ್ಸಾ ವಿಧಾನಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಹಾಗೂ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಸ್ತೆ ಬದಿಯಲ್ಲಿ ಮತ್ತು ಶಾಲೆಗಳ ಸಮೀಪ ಆಹಾರ ತ್ಯಾಜ್ಯಗಳ ಶೇಖರಣೆ ಕಂಡುಬಾರದಂತೆ ಸೂಕ್ತ ರೀತಿಯಲ್ಲಿ ಸ್ವಚ್ಛತೆ ಕೈಗೊಳ್ಳಬೇಕು. ಸಾಕು ನಾಯಿಗಳ ಮಾಲೀಕರು ಅವುಗಳಿಗೆ ರೇಬೀಸ್ ನಿರೋಧಕ ಲಸಿಕೆ ಕೊಡಿಸಬೇಕು. ಸಾರ್ವಜನಿಕರು ನಾಯಿ ಕಚ್ಚಿದಲ್ಲಿ ಕೂಡಲೇ ಸಮೀಪದ ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಬಿ.ವಿ. ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ರೇಬೀಸ್ ನಿರೋಧಕ ಚುಚ್ಚುಮದ್ದು ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಇದ್ದು, ಸಾರ್ವಜನಿಕರಿಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಅರ್ಚನಾ ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಇದುವರೆಗೆ 6224 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.
ಇದನ್ನೂ ಓದಿ: India Canada Row: ಭಾರತದಿಂದಲೇ G20 ಶೃಂಗಸಭೆ ಯಶಸ್ವಿ ಎಂದ ಬ್ರೆಜಿಲ್; ಕೆನಡಾ ಪಿಎಂ ಆರೋಪಕ್ಕೆ ಏನೆಂದಿತು?
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ರಾಕೇಶ ಬಂಗಲೆ ಮಾತನಾಡಿ, ಇಲಾಖೆ ವತಿಯಿಂದ ಬೀದಿ ನಾಯಿಗಳಿಗೆ ಸುರಕ್ಷಿತ ಸಂತಾನಹರಣ ಚಿಕಿತ್ಸೆ ಮತ್ತು ಲಸಿಕೆ ನೀಡಲು ಎಲ್ಲಾ ಸೌಲಭ್ಯಗಳಿದ್ದು, ರೇಬೀಸ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಆರೋಗ್ಯ ಇಲಾಖೆ, ಪಶುಪಾಲನಾ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.
ಬೆಂಗಳೂರು
Cylinder blast : ಸಿಲಿಂಡರ್ ಸ್ಫೋಟ; 7 ದಿನಗಳು ನರಳಾಡಿ ಪ್ರಾಣಬಿಟ್ಟ ಮಹಿಳೆ
Cylinder blast : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದರು. ಅದರಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದವರು ಏಳು ದಿನಗಳು ಜೀವನ್ಮರಣ ಹೋರಾಟ ನಡೆಸಿ ಅಸುನೀಗಿದ್ದಾರೆ.
ಬೆಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder blast) ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಶುಕ್ರವಾರ (ಸೆ.23) ಮೃತಪಟ್ಟಿದ್ದಾರೆ. ಸುಧಾ ಬಾಯಿ (34) ಮೃತ ದುರ್ದೈವಿ.
ಮಾರತಹಳ್ಳಿಯ ಮುನೇನಕೊಳಲು ವಸಂತ ಲೇಔಟ್‌ನಲ್ಲಿ ಸೆ.17ರ ಬೆಳಗ್ಗೆ ಮನೆಯಲ್ಲಿದ್ದ ಸಿಲಿಂಡರ್ ಲೀಕ್ ಆಗಿ ಅಗ್ನಿಅವಘಡ ಸಂಭವಿಸಿತ್ತು. ರಾತ್ರಿ ಗ್ಯಾಸ್ ಲೀಕ್ ಆಗಿದ್ದು, ಬೆಳಗ್ಗೆ ಅಡುಗೆ ಮನೆಯ ಲೈಟ್ ಸ್ವಿಚ್ ಆನ್ ಮಾಡಿದಾಗ ಸ್ಫೋಟಗೊಂಡಿತ್ತು.
ಇದನ್ನೂ ಓದಿ: Electric shock : ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾದ ಕಾರ್ಮಿಕ
ಅವಘಡದಲ್ಲಿ ಪತಿ ಸೇಲ್ವಾ ನಾಯಕ್ (54), ಪತ್ನಿ ಸುಧಾ ಬಾಯಿ (34) ಮಕ್ಕಳಾದ ನಂದಿತಾ (15),ಮನೋಜ್ (12) ಗಾಯಗೊಂಡಿದ್ದರು. ಕೂಡಲೇ ನಾಲ್ವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ 7 ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸ್ಫೋಟದ ತೀವ್ರತೆಗೆ ಶೇ. 80ರಷ್ಟು ಭಾಗ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸುಧಾ ಬಾಯಿ ಮೃತಪಟ್ಟಿದ್ದಾರೆ.
ಸದ್ಯ ಮಕ್ಕಳಿಬ್ಬರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಸೆಲ್ವಾ ನಾಯಕ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸುಧಾ ಬಾಯಿ ಸಾವು ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹವನ್ನು ಇರಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Cauvery Dispute: ಕಾವೇರಿ ಸಮಸ್ಯೆ ಪರಿಹಾರಕ್ಕೆ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಲಿ ಎಂದ ಬೊಮ್ಮಾಯಿ
Cauvery Dispute: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಹಲವರನ್ನು ಪೊಲಿಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಬೆಂಗಳೂರು: ಕಾವೇರಿ ನೀರು (Cauvery Dispute) ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾವೇರಿ ನೀರು ಹಂಚಿಕೆ ಸಮಸ್ಯೆಯನ್ನು ಬಗೆಹರಿಸಲು ಇಂಡಿಯಾ ಒಕ್ಕೂಟದ ಮುಖ್ಯಸ್ಥರಾಗಿರುವ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಬಿಜೆಪಿ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕರಾಳ ಆಡಳಿತ ಇದೆ. ಸರ್ಕಾರಕ್ಕೆ ಜನತೆಗೆ ನೀರು ಕೊಡಲು ಯೋಗ್ಯತೆ ಇಲ್ಲ. ಅಭಿವೃದ್ಧಿ ಸಂಪೂರ್ಣ ನಿಂತಿದೆ. ನೆಲ, ಜಲ ಹಿತ ಕಾಯಲು ಸರ್ಕಾರ ಸಂಪೂರ್ಣ ವಿಫಲವಾವಗಿದೆ. ಕಾವೇರಿ ವಿಚಾರದಲ್ಲಿ ಆರಂಭದಿಂದಲೂ ಎಡವಿದೆ. ಬರುವ ದಿನಗಳಲ್ಲಿ ಕಾವೇರಿ ಕೊಳ್ಳದ ಜನರಿಗೆ ನೀರಿನ ಸಮಸ್ಯೆ ಎದುರಾದರೆ ಸಿದ್ದರಾಮಯ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದರು.
ಇದನ್ನೂ ಓದಿ | BJP-JDS Alliance: ಅವ್ರು ಗೆಲ್ಲಲ್ಲ; ತುಮಕೂರಿನಲ್ಲಿ ದೇವೇಗೌಡ್ರ ಸ್ಪರ್ಧೆಗೆ ಹಾಲಿ ಬಿಜೆಪಿ ಸಂಸದ ಬಸವರಾಜ್ ತೀವ್ರ ವಿರೋಧ
ತಮಿಳುನಾಡಿಗಾಗಿ ರಾಜ್ಯದ ಹಿತ ಬಲಿ
ಮೊದಲನೇ ಸಿಡಬ್ಲುಎಂಎ ಸಭೆಯಲ್ಲಿ ನಮ್ಮ ಅಧಿಕಾರಿಗಳು ಮಾತನಾಡಲಿಲ್ಲ. ಆಗ ಸುಪ್ರೀಂ ಕೋರ್ಟ್‌ಗೆ ಹೋಗಲಿಲ್ಲ. ಎರಡನೇ ಆದೇಶ ಬಂದಾಗ ಸರ್ವಪಕ್ಷ ಸಭೆ ಕರೆದರು. ಆಗ ಸುಪ್ರೀಂ ಕೋರ್ಟ್‌ಗೆ ಐಎ ಅರ್ಜಿ ಹಾಕುವಂತೆ ನಾವು ಹೇಳಿದ್ದೆವು. ಆದರೆ, ಇವರು ಅರ್ಜಿ ಹಾಕದೆ ತಮಿಳುನಾಡಿನ ಐಎಗೆ ಆಕ್ಷೇಪ ಹಾಕಿದರು. ತಮಿಳುನಾಡು ಅಕ್ರಮವಾಗಿ ನೀರು ಬಳಕೆ ಮಾಡಿದ್ದಾರೆ. ಅವರಿಗೆ ಕಾನೂನು ಪ್ರಕಾರ 1.8 ಲಕ್ಷ ಎಕರೆ ಮಾತ್ರ ಬೆಳೆ ಬೆಳೆಯಲು ಅವಕಾಶವಿದ್ದು, ಅಕ್ರಮವಾಗಿ 4 ಲಕ್ಷ ಎಕರೆ ಬೆಳೆ ಬೆಳೆದಿದ್ದಾರೆ. ಇದನ್ನು ನಮ್ಮ ಅಧಿಕಾರಿಗಳು ಸಿಡಬ್ಲುಎಂಎ ಸಭೆಯಲ್ಲಿ ಪ್ರಸ್ತಾಪಿಸಲಿಲ್ಲ. ಆದ್ದರಿಂದ ನಮಗೆ ಈ ರೀತಿಯ ಆದೇಶಗಳು ಬರುತ್ತಿವೆ ಎಂದು ಕಿಡಿಕಾರಿದರು.
ತಮಿಳುನಾಡಿನ ರೈತರ ಹಿತ ಕಾಯಬೇಕು ಅಂತ ನಮ್ಮ ನೀರಾವರಿ ಸಚಿವರು ಹೇಳುತ್ತಾರೆ. ಈ ರೀತಿಯ ಮಾತು ಇತಿಹಾಸದಲ್ಲಿ ಯಾರೂ ಹೇಳಿರಲಿಲ್ಲ. ಬೆಂಗಳೂರು ಅಂತಾರಾಷ್ಟ್ರೀಯ ನಗರ, ಇಲ್ಲಿಗೆ ವಿಶ್ವದೆಲ್ಲೆಡೆಯಿಂದ ಜನ ಬರುತ್ತಾರೆ. ಇಲ್ಲಿ ನೀರು ಕೊಡಲಿಲ್ಲ ಅಂದರೆ ಸರ್ಕಾರಕ್ಕೆ ಮರ್ಯಾದೆ ಇಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬ್ರ್ಯಾಡ್ ಬೆಂಗಳೂರು ಅಂತ ಹೇಳುತ್ತಾರೆ. ಆದರೆ, ಅವರಿಗೆ ಬೆಂಗಳೂರಿಗೆ ನೀರು ಕೊಡಲು ಆಗುತ್ತಿಲ್ಲ ಎಂದು ಆರೋಪಿಸಿದರು.
ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ನಡುವೆ ಹೊಂದಾಣಿಕೆ ಇಲ್ಲ. ಇಂಡಿಯಾ ಒಕ್ಕೂಟ ಉಳಿಸಿಕೊಳ್ಳಲು ನೀರು ಬಿಡುತ್ತಿದ್ದಾರೆ. ತಮಿಳುನಾಡಿನ ಹಿತ ಕಾಯಲು ರಾಜ್ಯದ ಹಿತ ಬಲಿಕೊಡುತ್ತಿದ್ದಾರೆ. ತಮಿಳುನಾಡು ಸಿಎಂ ಸ್ಟಾಲನ್‌ಗೆ ಪತ್ರ ಬರೆಯಿರಿ, ಎಂದರೆ ಅದನ್ನು ಮಾಡಲು ಸಿದ್ಧರಿಲ್ಲ. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಮಧ್ಯಸ್ಥಿಕೆ ವಹಿಸಬೇಕು. ಎರಡು ರಾಜ್ಯಗಳ ಸಿಎಂ ಕರೆಯಿಸಿ ಮಾತುಕತೆ ನಡೆಸಿ ಬಗೆ ಹರಿಸಬೇಕು. ಸೋನಿಯಾ ಗಾಂಧಿ ಇಂಡಿಯಾ ಒಕ್ಕೂಟದ ಮುಖ್ಯಸ್ಥರಾಗಿರುವುದರಿಂದ ರಾಜಕಿಯ ಅಧಿಕಾರ ಇದೆ ಎಂದು ಹೇಳಿದರು.
ಇದನ್ನೂ ಓದಿ | Cauvery Protest : ಕಾಂಗ್ರೆಸ್ ಪಕ್ಷ ತಮಿಳುನಾಡಿನ ಏಜೆಂಟ್ ಎಂದ ಬಿಎಸ್‌ವೈ, ಬಿಜೆಪಿಯಿಂದ ಬೀದಿಗಿಳಿದು ಹೋರಾಟ
ಸರ್ಕಾರದ ವಿರುದ್ಧ ಈ ಪ್ರತಿಭಟನೆ ಅಗತ್ಯವಿತ್ತು. ಬೆಂಗಳೂರಿನಲ್ಲಿ ನಮ್ಮವರು ಹೆಚ್ಚು ಶಾಸಕರಿದ್ದಾರೆ. ನಾವು ಇಲ್ಲಿ ಪ್ರತಿಪಕ್ಷವಲ್ಲ, ಒಂದು ರಾಷ್ಟ್ರೀಯ ಪಕ್ಷವಾಗಿ ನಮ್ಮ ಜವಾಬ್ದಾರಿ ಇದೆ. ಮಂಡ್ಯ, ಮೈಸೂರು ಭಾಗದ ರೈತರಿಗೆ ನೀರು ಬಿಡದೆ ಬೆಳೆ ಒಣಗಿದೆ. ಅವರಿಗೆ ಪ್ರತಿ ಎಕರೆಗೆ 25 ಸಾವಿರ ರೂ ಪರಿಹಾರ ನೀಡಬೇಕು. ತಕ್ಷಣ ನೀರು ಹರಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಕಾವೇರಿ ಹೋರಾಟ ಉಗ್ರವಾಗಿ ನಡೆಯಲಿದೆ ಎಂದು ಎಚ್ಚರಿಕೆ ನೀಡಿದ ಅವರು, ಕಾವೇರಿ ನೀರಿಗಾಗಿ ರೈತರು ಮತ್ತು ಸಂಘಟನೆಗಳು ನಡೆಸುವ ಹೋರಾಟಗಳಿಗೆ ಬಿಜೆಪಿಯ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.
ಪ್ರತಿಭಟನಾ ನಿರತ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿ ಹಲವರು ನಾಯಕರನ್ನು ಪೊಲಿಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
-
ಪ್ರಮುಖ ಸುದ್ದಿ23 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಸುವಚನ13 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ19 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಉಡುಪಿ22 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ
-
ದೇಶ22 hours ago
Chandrayaan 3: ನಿದ್ದೆಯಿಂದ ಎಚ್ಚರವಾಗಲು ಒಲ್ಲೆ ಎನ್ನುತ್ತಿರುವ ಲ್ಯಾಂಡರ್, ಪ್ರಜ್ಞಾನ್! ನಾಳೆ ಮತ್ತೆ ಇಸ್ರೋ ಪ್ರಯತ್ನ
-
ಉಡುಪಿ24 hours ago
Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ
-
ಫ್ಯಾಷನ್23 hours ago
Party Fashion: ಬಿಹೈವ್ ಹೈ ಪಾರ್ಟಿ ಫ್ಯಾಷನ್ ಶೋನಲ್ಲಿ ಬಾಲಿವುಡ್ ನಟಿ ನೇಹಾ ದುಪಿಯಾ
-
ದೇಶ9 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್