Site icon Vistara News

New Year 2023 | ಹೊಸ ವರ್ಷಾಚರಣೆಯಂದು ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

new year 2023 ದೇವರಾಯನದುರ್ಗ

ತುಮಕೂರು: ಹೊಸ ವರ್ಷಾಚರಣೆ (New Year 2023) ಹಿನ್ನೆಲೆ ಜಿಲ್ಲೆಯ ಕೆಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ತುಮಕೂರು ಜಿಲ್ಲಾಡಳಿತವು ಮಾರ್ಗಸೂಚಿ ಹೊರಡಿಸಿದ್ದು, ಪ್ರವಾಸಿ ತಾಣಗಳಾದ ದೇವರಾಯನದುರ್ಗ, ನಾಮದಚಿಲುಮೆ, ಬಸದಿಬೆಟ್ಟದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹಾಕಲಾಗಿದೆ.

ಡಿಸೆಂಬರ್‌ 31ರಂದು ಬೆಳಗ್ಗೆ 8 ಗಂಟೆಯಿಂದ ಜನವರಿ 2ರ ಬೆಳಗ್ಗೆ 8 ಗಂಟೆವರೆಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಜನರು ಗುಂಪು ಗುಂಪಾಗಿ ಸೇರುವುದರಿಂದ ವನ್ಯಜೀವಿಗಳಿಗೆ ತೊಂದರೆಯಾಗಲಿದೆ.‌

ಜತೆಗೆ ದೇವರಾಯನದುರ್ಗದಲ್ಲಿ ತಿರುವಿನ ರಸ್ತೆಗಳು ಹೆಚ್ಚಾಗಿ ಇರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆ ಇದೆ. ಮಾತ್ರವಲ್ಲದೆ ಹೊಸ ವರ್ಷಾಚರಣೆ ನೆಪದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುವ ಸಾಧ್ಯತೆಯೂ ಇದೆ. ಕೆಲವರು ಮದ್ಯಪಾನ ಮಾಡಿ ಜಾಲಿರೈಡ್‌ ನೆಪದಲ್ಲಿ ವಾಹನ ಚಲಾಯಿಸುವುದರಿಂದ ನಾಗರಿಕರಿಗೆ, ಉಳಿದ ಸಂಚಾರಿಗಳಿಗೆ ತೊಂದರೆಯಾಗುವುದಲ್ಲದೆ, ಅಪಘಾತವಾಗಿ ಸಮಸ್ಯೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತ ಈ ಜಾಗಗಳಲ್ಲಿ ಸೆಲೆಬ್ರೇಷನ್‌ ನಡೆಸಲು ಬ್ರೇಕ್ ಹಾಕಿದೆ.

ಇದನ್ನೂ ಓದಿ | New year 2023: ಹೊಸವರ್ಷದ ಹರುಷಕ್ಕೆ ಹತ್ತು ಸರಳ ಸೂತ್ರಗಳು!

Exit mobile version