ಬೆಂಗಳೂರು: ಮುಂದಿನ ನಾಲ್ಕು ದಿನ, ಅಂದರೆ ಸೆಪ್ಟೆಂಬರ್ 9, ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸೆ. 7ರಿಂದ 9ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಿಗೆ ಕೂಡ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ತೋರಿಸಲಾಗಿದೆ. ಇವು ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಾಗಿವೆ. ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ | ಬೆಂಗಳೂರು ಮಹಾಮಳೆಗೆ ಯುವತಿ ಬಲಿ | ಬೆಸ್ಕಾಂ, ಬಿಬಿಎಂಪಿ ನಿರ್ಲಕ್ಷ್ಯದಿಂದ ಹೋಯ್ತು ಜೀವ