Shivamogga terror | ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ಗೆ ಮೇಜರ್‌ ಟ್ವಿಸ್ಟ್‌: NIAಯಿಂದ ಮತ್ತಿಬ್ಬರು ಅರೆಸ್ಟ್‌, ಐಸಿಸ್‌ ಜತೆ ಸಂಪರ್ಕ? - Vistara News

ಉಡುಪಿ

Shivamogga terror | ಶಿವಮೊಗ್ಗ ಟ್ರಯಲ್‌ ಬ್ಲಾಸ್ಟ್‌ಗೆ ಮೇಜರ್‌ ಟ್ವಿಸ್ಟ್‌: NIAಯಿಂದ ಮತ್ತಿಬ್ಬರು ಅರೆಸ್ಟ್‌, ಐಸಿಸ್‌ ಜತೆ ಸಂಪರ್ಕ?

ಶಿವಮೊಗ್ಗದ ತುಂಗಾ ತೀರದಲ್ಲಿ ನಡೆಸಿದ ಟ್ರಯಲ್‌ ಬ್ಲಾಸ್ಟ್‌ ನ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇಬ್ಬರು ಯುವಕರನ್ನು(Shivamogga terror) ಅರೆಸ್ಟ್‌ ಮಾಡಿದ್ದಾರೆ. ಅವರಿಗೆ ಐಸಿಸ್‌ ಲಿಂಕ್‌ ಇರುವುದು ಪತ್ತೆಯಾಗಿದೆ.

VISTARANEWS.COM


on

ISIS varamballi
ಬ್ರಹ್ಮಾವರ ತಾಲೂಕಿನ ವಾರಂಬಳ್ಳಿಯಲ್ಲಿರುವ ರೇಷಾನ್‌ ವಾಸಿಸುತ್ತಿದ್ದ ಫ್ಲ್ಯಾಟ್‌ಗೆ ಎನ್‌ಐಎ ದಾಳಿ ನಡೆಸಿತ್ತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು/ಮಂಗಳೂರು/ಉಡುಪಿ/ಶಿವಮೊಗ್ಗ: ಶಿವಮೊಗ್ಗದಲ್ಲಿ ಕಳೆದ ಸೆಪ್ಟೆಂಬರ್‌ ೧೯ರಂದು ಬೆಳಕಿಗೆ ಬಂದ ಉಗ್ರಗಾಮಿ ಚಟುವಟಿಕೆಗಳಿಗೆ (Shivamogga terror) ಸಂಬಂಧಿಸಿ ತೀವ್ರ ತನಿಖೆಯನ್ನು ನಡೆಸುತ್ತಿರುವ ಎನ್‌ಐಎ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಗುರುವಾರ ಮಂಗಳೂರಿನ ಪಿಎ ಎಂಜಿನಿಯರಿಂಗ್‌ ಕಾಲೇಜಿಗೆ ದಾಳಿ ನಡೆಸಿ ಉಡುಪಿ ಮೂಲದ ವಿದ್ಯಾರ್ಥಿ ರೇಶಾನ್‌ ತಾಜುದ್ದೀನ್‌ ಶೇಖ್‌ನನ್ನು ಬಂಧಿಸಿದ್ದ ಎನ್‌ಐಎ, ಶಿವಮೊಗ್ಗದಲ್ಲಿ ಹುಜೇರ್‌ ಫರಾನ್‌ ಬೇಗ್‌ ಎಂಬಾತನನ್ನು ವಶಕ್ಕೆ ಪಡೆದಿದೆ.

ಸೆಪ್ಟೆಂಬರ್‌ ೧೯ರಂದು ಬೆಳಕಿಗೆ ಬಂದ ಶಿವಮೊಗ್ಗ ಟೆರರ್‌ ಚಟುವಟಿಕೆಗೆ ಸಂಬಂಧಿಸಿ ಮಂಗಳೂರಿನ ಎಂಜಿನಿಯರಿಂಗ್‌ ಪದವೀಧರ ಮಾಜ್‌ ಮುನೀರ್‌ ಮತ್ತು ಶಿವಮೊಗ್ಗದ ಸೈಯದ್‌ ಯಾಸಿನ್‌ನ್ನು ಬಂಧಿಸಲಾಗಿತ್ತು. ಅಂದು ಇವರೆಲ್ಲರ ಹಿಂದಿನ ಷಡ್ಯಂತ್ರಗಾರ ತೀರ್ಥಹಳ್ಳಿ ನಿವಾಸಿ ಮೊಹಮ್ಮದ್‌ ಶಾರಿಕ್‌ ತಪ್ಪಿಸಿಕೊಂಡಿದ್ದ. ಮುಂದೆ ನವೆಂಬರ್‌ ೧೯ರಂದು ಸಂಜೆ ಮಂಗಳೂರಿನ ನಾಗುರಿ ಬಳಿ ಕುಕ್ಕರ್‌ ಬ್ಲಾಸ್ಟ್‌ ಮಾಡಲು ಹೋಗುತ್ತಿದ್ದಾಗ ಅದು ರಿಕ್ಷಾದಲ್ಲೇ ಸ್ಫೋಟಿಸಿ ಮೊಹಮ್ಮದ್‌ ಶಾರಿಕ್‌ ಸಿಕ್ಕಿಬಿದ್ದಿದ್ದ. ಈಗ ಆತ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಎನ್‌ಐಎ ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಅಂದು ಶಿವಮೊಗ್ಗ ಟೆರರ್‌ ಪ್ರಕರಣ ಬೆಳಕಿಗೆ ಬಂದಾಗ ಶಾರಿಕ್‌, ಮಾಜ್‌ ಮುನೀರ್‌ ಮತ್ತು ಸೈಯದ್‌ ಯಾಸಿನ್‌ ತಂಡ ಶಿವಮೊಗ್ಗ ಗುರುಪುರದಲ್ಲಿರುವ ತುಂಗಾ ತೀರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ನಾವೂರು ಬಳಿ ನೇತ್ರಾವತಿ ತೀರದಲ್ಲಿ ಟ್ರಯಲ್‌ ಬಾಂಬ್‌ ಬ್ಲಾಸ್ಟ್‌ ನಡೆಸಿದ್ದ ಬಗ್ಗೆ ಕುರುಹುಗಳು ಸಿಕ್ಕಿದ್ದವು.

ನಾಲ್ಕು ಕಡೆಗಳಲ್ಲಿ ದಾಳಿ
ಈ ಪ್ರಕರಣದ ಬೆನ್ನು ಹತ್ತಿದ್ದ ಎನ್‌ಐಎ ಅಧಿಕಾರಿಗಳಿಗೆ ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರುವುದು ತಿಳಿದುಬಂದಿದ್ದು, ಅದರಂತೆ ಶುಕ್ರವಾರ ಮಂಗಳೂರು, ಉಡುಪಿ, ಶಿವಮೊಗ್ಗ, ಬೆಂಗಳೂರುಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು. ಇಬ್ಬರನ್ನು ಬಂಧಿಸಿದರು.

ಬಂಧನದಲ್ಲಿರುವ ಮಂಗಳೂರು ಮೂಲದ ಮಾಜ್‌ ಮುನೀರ್‌ನ ವಿಚಾರಣೆ ವೇಳೆ ಉಡುಪಿಯ ರೇಶಾನ್ ತಾಜೂದ್ದೀನ್ ಶೇಕ್ ಮತ್ತು ಶಿವಮೊಗ್ಗ ಜಿಲ್ಲೆಯ ಹುಝೇರ್ಬೇ ಫರ್ಹಾನ್‌ ಗ್ ಮಾಹಿತಿ ದೊರಕಿತ್ತು. ಇವರಿಬ್ಬರೂ ಐಸಿಎಸ್‌ನ ಸಕ್ರಿಯ ಕಾರ್ಯಕರ್ತರು ಎನ್ನುವ ಪ್ರಾಥಮಿಕ ಮಾಹಿತಿಯೂ ಎನ್‌ಐಎ ಅಧಿಕಾರಿಗಳಿಗೆ ಸಿಕ್ಕಿದ್ದು, ಹೆಚ್ಚಿನ ವಿಚಾರಣೆ ನಡೆಯಬೇಕಾಗಿದೆ.

ಇವರಿಬ್ಬರ ಪಾಲುದಾರಿಕೆ ಏನು?
ಮಂಗಳೂರಿನ ಪಿಎ ಕಾಲೇಜಿನಲ್ಲಿ ಅಂತಿಮ ವರ್ಷದ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ವಿದ್ಯಾರ್ಥಿಯಾಗಿರುವ ಉಡುಪಿ ವಾರಂಬಳ್ಳಿಯ ರೇಷಾನ್‌ ತಾಜುದ್ದೀನ್‌ ಮತ್ತು ಶಿವಮೊಗ್ಗದ ಫರ್ಹಾನ್‌ ಬೇಗ್‌ ಇಬ್ಬರೂ ಐಸಿಸ್ ಹ್ಯಾಂಡ್ಲರ್ಸ್ ಜತೆ ಸಂಪರ್ಕ ಹೊಂದಿದ್ದು, ಅವರಿಂದ ಕ್ರಿಫ್ಟೋ ವ್ಯಾಲೆಟ್ ಗೆ ಹಣ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ.

ದೊಡ್ಡ ಮಟ್ಟದ ದುಷ್ಕೃತ್ಯ ಮತ್ತು ಚಟುವಟಿಕೆ ನಡೆಸುವವರಿಗೆ ಹಣ ಒದಗಿಸಿದ ಆರೋಪ ಇವರ ಮೇಲಿದೆ. ಇವರಿಬ್ಬರ ಮನೆಗೆ ದಾಳಿ ಮಾಡಿದ ಸಂದರ್ಭದಲ್ಲಿ ಡಿಜಿಟಲ್ ಡಿವೈಸಸ್ ಮತ್ತು ಹಲವು ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ಇವರ ಟಾರ್ಗೆಟ್‌ ಯಾವುದು?
ದೊಡ್ಡ ದೊಡ್ಡ ಲಿಕ್ಕರ್ ಶಾಪ್, ಗೋಡಾನ್ ಗಳು ಹಾಗೂ ಟ್ರಾನ್ಸ್‌ಫಾರ್ಮರ್‌ಗಳಿಗೆ ಬೆಂಕಿ ಹಚ್ಚಲು ಇವರು ಟಾರ್ಗೆಟ್ ಮಾಡಿದ್ದರು. ದೇಶದ ಏಕತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಧಕ್ಕೆ ಉಂಟು ಮಾಡಲು ಸಂಚು ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ | ಮಂಗಳೂರು ಸ್ಫೋಟ | ಬ್ರಹ್ಮಾವರದ ವಾರಂಬಳ್ಳಿಯಲ್ಲಿ ಶಂಕಿತ ವಿದ್ಯಾರ್ಥಿ ರೇಶಾನ್‌ ಶೇಖ್‌ ಮನೆಯ ಮಹಜರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

Karnataka Weather Forecast : ಮತ್ತೆ ವಿಪರೀತ ತಾಪಮಾನವು ಜನರ ತಲೆಕೆಡಿಸಿದೆ. ಕೆಲವಡೆ ಮಳೆಯು ಅಬ್ಬರಿಸಿದ್ದರೂ, ಅದರ ದುಪ್ಪಟ್ಟು ಎಂಬಂತೆ ಬಿಸಿಲ ಧಗೆಯು ಹೆಚ್ಚಾಗಿದೆ. ಕರ್ನಾಟಕದಲ್ಲಿ ಹೀಟ್‌ ವೇವ್‌ ಹೆಚ್ಚುತ್ತಿದ್ದು ಹವಾಮಾನ ತಜ್ಞರು ಯೆಲ್ಲೋ ಅಲರ್ಟ್‌ ಘೋಷಿಸಿದ್ದಾರೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರವು (rain News) ಕಡಿಮೆ ಆಗಿದ್ದು, ಶುಷ್ಕ ವಾತಾವರಣವು (Dry Weather) ಮುಂದುವರಿದಿದೆ. ಏ.26ರಂದು ಶುಕ್ರವಾರ ಬೆಳಗಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಇರಲಿದೆ. ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಿಸಿಲ ಧಗೆಯು ಹೆಚ್ಚಾಗಿ ಇರಲಿದೆ.

ತಾಪಮಾನ ಎಚ್ಚರಿಕೆ

ಕರ್ನಾಟಕದ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಗರಿಷ್ಠ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಿರಲಿದೆ. ಏ. 26 ರಂದು ಕರಾವಳಿ ಕರ್ನಾಟಕದ ಪ್ರತ್ಯೇಕ ಪ್ರದೇಶಗಳಲ್ಲಿ ಹೀಟ್‌ ವೇವ್‌ ಇರಲಿದೆ. ಏ. 28 ರವರೆಗೆ ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹವಾಮಾನ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: Summer Nail Art : ಸಮ್ಮರ್ ಸೀಸನ್​ನಲ್ಲಿ ಟ್ರೆಂಡಿಯಾದ ಕಲ್ಲಂಗಡಿ ಹಣ್ಣಿನ ನೇಲ್ಆರ್ಟ್

ಹೀಟ್‌ವೇವ್‌ ವಾರ್ನಿಂಗ್‌

ಹೀಟ್‌ ವೇವ್ಸ್‌ ಅಥವಾ ಶಾಖದ ಅಲೆಯ ಸಮಯದಲ್ಲಿ ಮಾಡಬೇಕಾದದ್ದು ಮತ್ತು ಮಾಡಬಾರದ ಕೆಲಸಗಳ ಕುರಿತು ಹವಾಮಾನ ತಜ್ಞರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಹೀಟ್‌ ವೇವ್ಸ್‌ನಿಂದಾಗಿ ಅತಿಯಾದ ಒತ್ತಡ ಉಂಟಾಗಿ ಇದು ಸಾವಿಗೆ ಕಾರಣವಾಗಬಹುದು.

1.ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.

2.ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.

3.ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.

4.ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.

5.ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

6.ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗಿನ ಕೆಲಸ ಮಾಡುವುದನ್ನು ತಪ್ಪಿಸಿ.

7.ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬೇಡಿ.

8.ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.

9.ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.

10.ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ

11.ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.

12.ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ಇದು ದೇಹವನ್ನು ತಂಪಾಗಿ ಇರಲು ಸಹಾಯ ಮಾಡುತ್ತದೆ.

13. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.

14. ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.

15. ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.

ಸನ್‌ಸ್ಟ್ರೋಕ್‌ ಚಿಕಿತ್ಸೆಗಾಗಿ ಸಲಹೆಗಳು

-ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆಯಿರಿ. ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಿರಿ. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು ಮುಖ್ಯ ವಿಷಯ.
-ವ್ಯಕ್ತಿಗೆ ORS ಕುಡಿಯಲು ಅಥವಾ ನಿಂಬೆ ಸರಬತ್/ತೋರಣಿ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡಿ.
-ತಕ್ಷಣ ವ್ಯಕ್ತಿಯನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ, ಏಕೆಂದರೆ ಶಾಖದ ಹೊಡೆತಗಳು ಮಾರಣಾಂತಿಕವಾಗಬಹುದು.

ರೈತರು/ಕೃಷಿ ಕಾರ್ಮಿಕರು

ಹೊಲದಲ್ಲಿ ಕೆಲಸ ಮಾಡುವವರು ಟೋಪಿ ಅಥವಾ ಛತ್ರಿ ಬಳಸಿ. ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ. ಇನ್ನೂ ಪ್ರಯಾಣಿಸುವಾಗ ನಿಮ್ಮೊಂದಿಗೆ ನೀರನ್ನು ಒಯ್ಯಿರಿ. ಕ್ರೀಡಾಪಟು ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಾಳೆ ಬೆಳಗಾವಿ, ಚಾಮರಾಜನಗರದಲ್ಲಿ ಮಳೆ ; ಉಳಿದೆಡೆ ಬಿಸಿಲ ಶಾಕ್‌

ರಾಜ್ಯಾದ್ಯಂತ ಮತ್ತೆ ಬಿಸಿಲ ಧಗೆ ಹೆಚ್ಚಾಗುತ್ತಿದೆ. ಇದರ ನಡುವೆಯೂ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ (Rain News) ಸೂಚನೆ ಇದೆ. ಈ ಬಗ್ಗೆ ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ (Dry Weather) ಮುಂದುವರಿದಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಏ.26 ರಿಂದ ಮೂರು ದಿನಗಳ ಕಾಲ ರಾಜ್ಯಾದ್ಯಂತ ಒಣಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಈ ನಡುವೆ ನಾಳೆ ಶುಕ್ರವಾರ ಬೆಳಗಾವಿ ಹಾಗೂ ಚಾಮರಾಜನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.ಉಳಿದಂತೆ ಎಲ್ಲ ಕಡೆ ತಾಪಮಾನ ಹೆಚ್ಚಳವಾಗಲಿದೆ.

ಶಾಖದ ಅಲೆ ತೀವ್ರತೆ ಹೆಚ್ಚಳ!

ಏ. 26ರಿಂದ 29ರವರೆಗೆ ಶಾಖದ ಅಲೆ ತೀವ್ರತೆ ಹೆಚ್ಚಳವಾಗಲಿದೆ. ಮುಖ್ಯವಾಗಿ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ತಾಪ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 29 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಏ.29ರ ನಂತರ ಮಳೆ ಮುನ್ಸೂಚನೆ

ಏ. 29 ಮತ್ತು30 ರಂದು ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್‌ 29ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಏ.30 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ:DK Shivakumar: ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಆಮಿಷ ಪ್ರಕರಣ; ಡಿ.ಕೆ. ಶಿವಕುಮಾರ್‌ಗೆ ರಿಲೀಫ್

ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

ಈ ಬೇಸಿಗೆಯಲ್ಲಿ ಸೊಳ್ಳೆಗಳ ಹಾವಳಿ (World Malaria Day) ಹೆಚ್ಚಿನ ಕಡೆಗಳಲ್ಲಿ ತೀವ್ರವಾಗಿ ಕಾಣುತ್ತಿದೆ. ಮುಂಗಾರು ಬರುವ ಮೊದಲೇ ಸೊಳ್ಳೆಗಳು ದಾಂಗುಡಿಯಿಟ್ಟಿವೆ. ಬೇಸಿಗೆ ರಜೆಯೆಂಬ ನೆವದಲ್ಲಿ ಪ್ರಯಾಣ ಮಾಡುವಾಗ ಸೊಳ್ಳೆಗಳ ಕಾಟವಿರುವ ಊರು ಎದುರಾದರೆ ಆತಂಕವಾಗುವುದು ಸಹಜ. ಸೊಳ್ಳೆಯಿಂದ ಬರುವಂಥ ರೋಗಗಳೆಲ್ಲ ಒಂದೇ ರೀತಿಯವು ಎನ್ನುವಂತಿಲ್ಲ. ಪ್ರತಿಯೊಂದು ರೋಗಕ್ಕೂ ಅದರದ್ದೇ ಆದ ಭಿನ್ನ ಸ್ವರೂಪವಿದೆ, ಲಕ್ಷಣಗಳಿವೆ, ಹಾಗಾಗಿ ಚಿಕಿತ್ಸೆಯೂ ಬೇರೆ ಆಗಬೇಕು. ಹಾಗಾಗಿ ಈ ಬಗ್ಗೆ ಸರಿಯಾದ ಮಾಹಿತಿಯ ಕೊರತೆಯಿದ್ದರೆ, ಸಮಸ್ಯೆ ಬಿಗಡಾಯಿಸುತ್ತದೆ. ಈ ನಿಟ್ಟಿನಲ್ಲಿ, ಸೊಳ್ಳೆಗಳಿಂದಲೇ ಪ್ರಸರಣವಾಗುವ ಮಲೇರಿಯ ಮತ್ತು ಡೆಂಗು ರೋಗಗಳಿಗೆ ವ್ಯತ್ಯಾಸವೇನು ಎಂಬ ಅರಿವಿನ ಲೇಖನವಿದು.

World Malaria Day

ಪ್ರಸರಣ ಹೇಗೆ?

ಮಲೇರಿಯ

ಅನಾಫಿಲಿಸ್‌ ಸೊಳ್ಳೆಯಿಂದ ದೇಹ ಪ್ರವೇಶಿಸುವ ಪ್ಲಾಸ್ಮೋಡಿಯಂ ಎಂಬ ಏಕಕೋಶ ಜೀವಿಯಿಂದ ಬರುವ ರೋಗವಿದು. ಮಲೇರಿಯ ಹೆಚ್ಚಿರುವ ಪ್ರದೇಶಗಳಿಗೆ ಹೋದಾಗ ಇದಕ್ಕೆ ತುತ್ತಾಗುವ ಸಂಭವ ಹೆಚ್ಚು.

ಡೆಂಗ್ಯು

ಈಡಿಸ್‌ ಸೊಳ್ಳೆಯು ದೇಹಕ್ಕೆ ಚುಚ್ಚುವ ಡೆಂಗ್ಯು ವೈರಸ್‌ನಿಂದ ಬರುವ ರೋಗವಿದು. ಅಂದರೆ ಮಲೇರಿಯ ಬರುವುದು ಪರಾವಲಂಬಿ ಜೀವಿಯಿಂದಾದರೆ, ಡೆಂಗ್ಯು ಬರುವುದು ವೈರಸ್‌ನಿಂದ. ಯಾವುದೇ ಪ್ರದೇಶದಲ್ಲೂ ಡೆಂಗು ಸೊಳ್ಳೆಗಳು ಕಾಣಬಹುದು, ಸೊಳ್ಳೆ ಕಚ್ಚಿದಾಗ ಬರಬಹುದು.

ಲಕ್ಷಣಗಳೇನು?

ಮಲೇರಿಯ

ಜ್ವರ, ನಡುಕ, ಬೆವರು, ತಲೆನೋವು, ಮೈಕೈ ನೋವು, ಹೊಟ್ಟೆ ತೊಳೆಸುವುದು, ವಾಂತಿ.

ಡೆಂಗ್ಯು

ಇದ್ದಕ್ಕಿದ್ದಂತೆ ತೀವ್ರವಾದ ಜ್ವರ, ತೀಕ್ಷ್ಣ ತಲೆನೋವು, ಕಣ್ಣು ನೋವು, ಮೈಮೇಲೆಲ್ಲ ದದ್ದುಗಳು, ಕೀಲು, ಸ್ನಾಯುಗಳಲ್ಲಿ ತೀವ್ರ ನೋವು. ಜೊತೆಗೆ ಪ್ಲೇಟ್‌ಲೆಟ್‌ ಸಂಖ್ಯೆ ಕುಸಿಯುತ್ತದೆ. ಅಂದರೆ ಮಲೇರಿಯ ಫ್ಲೂ ಮಾದರಿಯ ಲಕ್ಷಣಗಳನ್ನು ತೋರಿಸಿದರೆ, ಡೆಂಗು ಜ್ವರದಲ್ಲಿ ತಲೆನೋವು ಮತ್ತು ಕೀಲು-ಸ್ನಾಯುಗಳ ನೋವು ತೀವ್ರವಾಗಿರುತ್ತದೆ.

dengue flue

ಪತ್ತೆ ಹೇಗೆ?

ಎರಡೂ ಮಾದರಿಯ ಜ್ವರಗಳಿಗೆ ರಕ್ತ ಪರೀಕ್ಷೆಯೇ ಪತ್ತೆ ಮಾಡುವುದಕ್ಕೆ ನಿಖರವಾದ ಆಧಾರ.

ಚಿಕಿತ್ಸೆ ಏನು?

ಮಲೇರಿಯ

ಕ್ಲೊರೊಕ್ವಿನ್‌ನಂಥ ಔಷಧಿಗಳು ಇದಕ್ಕಾಗಿಯೇ ಇವೆ. ಪ್ಲಾಸ್ಮೋಡಿಯಂನಂಥ ಪರಾವಲಂಬಿಗಳ ಹತೋಟಿಗೆ ಔಷಧಿ ನೀಡಲಾಗುತ್ತದೆ. ಉಳಿದಂತೆ, ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ಬೇಕಾಗುತ್ತದೆ.

ಡೆಂಗ್ಯು

ಈ ವೈರಸ್‌ಗೆ ಪ್ರತ್ಯೇಕವಾದ ಆಂಟಿವೈರಸ್‌ ಚಿಕಿತ್ಸೆ ಲಭ್ಯವಿಲ್ಲ. ರೋಗಿಯ ಲಕ್ಷಣಗಳನ್ನು ಆಧರಿಸಿ ಅದಕ್ಕೆ ಔಷಧಿಯನ್ನು ನೀಡಲಾಗುತ್ತದೆ. ಪ್ಲೇಟ್‌ಲೆಟ್‌ ಕುಸಿದಂಥ ಸಂದರ್ಭಗಳಲ್ಲಿ ರೋಗಿಯ ಆಹಾರ ಪದ್ಧತಿ ಅತ್ಯಂತ ಮಹತ್ವದ್ದು.

Malaria

ಸಾವಿನ ಪ್ರಮಾಣ

ಮಲೇರಿಯ

ಸೂಕ್ತ ಸಮಯಲ್ಲೆ ಸರಿಯಾದ ಚಿಕಿತ್ಸೆ ದೊರೆಯದಿದ್ದರೆ, ಮಲೇರಿಯ ಪ್ರಾಣಕ್ಕೆ ಎರವಾಗುತ್ತದೆ. ವಿಶ್ವದಲ್ಲಿ ಇಂದಿಗೂ ಮಲೇರಿಯಕ್ಕೆ ತುತ್ತಾಗು ಜೀವ ಕಳೆದುಕೊಳ್ಳುತ್ತಿರುವವರ ಸಾವಿನ ಸಂಖ್ಯೆ ಬಹಳಷ್ಟಿದೆ.

ಡೆಂಗ್ಯು

ಈ ಜ್ವರವೂ ಪ್ರಾಣಾಪಾಯ ತರಬಹುದಾದರೂ, ಮಲೇರಿಯಕ್ಕೆ ಹೋಲಿಸಿದರೆ ಸಾವಿನ ಪ್ರಮಾಣ ಇದರಲ್ಲಿ ಕಡಿಮೆ.

World Malaria Day, Mosquito eradication is essential to prevent the disease

ತಡೆ ಹೇಗೆ?

ಈ ಎರಡೂ ರೋಗಗಳಲ್ಲಿ ಸೊಳ್ಳೆ ನಿರ್ಮೂಲನೆಯೇ ಮುಖ್ಯವಾಗಿದ್ದು. ಎಲ್ಲಾದರೂ ನೀರು ನಿಂತಿದ್ದರೆ ಅಲ್ಲೆಲ್ಲ ಕೀಟನಾಶಕ ಸಿಂಪಡಿಸಿ ತುರ್ತಾಗಿ ಸೊಳ್ಳೆಗಳ ಹೆಚ್ಚಳ ನಿಲ್ಲಿಸಬೇಕು. ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕು. ಸೊಳ್ಳೆಗಳು ಕಚ್ಚದಂತೆ ರೆಪೆಲ್ಲೆಂಟ್‌ಗಳನ್ನು ಬಳಸುವುದು ಅಗತ್ಯ. ಕಿಟಕಿಗಳಿಗೆ ಸೊಳ್ಳೆ ಪ್ರವೇಶಿಸದಂಥ ಪರದೆಗಳು ಮತ್ತು ರಾತ್ರಿ ಮಲಗುವಾಗಲೂ ಪರದೆ ಬಳಸುವುದು ಸೂಕ್ತ. ತುಂಬು ಬಟ್ಟೆಗಳನ್ನು ಧರಿಸುವುದು ಸರಿಯಾದ ಕ್ರಮ. ಸೊಳ್ಳೆಗಳು ಹೆಚ್ಚು ಚಟುವಟಿಕೆಯಲ್ಲಿರುವ ಹೊತ್ತಿನಲ್ಲಿ ಮನೆಯೊಳಗೇ ಇರಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶ್ರದ್ಧಾಂಜಲಿ

Subramanya Dhareshwar: ಜೇನುದನಿಯ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

VISTARANEWS.COM


on

Subramanya Dhareshwar
Koo

ಉಡುಪಿ: ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಯಕ್ಷಗಾನದ (Yakshagana) ಬಡಗುತಿಟ್ಟಿನ ಶ್ರೇಷ್ಠ ಭಾಗವತ (Bhagavatha) ಸುಬ್ರಹ್ಮಣ್ಯ ಧಾರೇಶ್ವರ (Subramanya Dhareshwar) ಇನ್ನಿಲ್ಲ. ಅವರು ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದರು.

ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು. ಸುಮಾರು 400ಕ್ಕಿಂತಲೂ ಅಧಿಕ ಯಕ್ಷಗಾನದ ಆಡಿಯೋ ಕ್ಯಾಸೆಟ್ ಗಳಲ್ಲಿ ಧಾರೇಶ್ವರರ ಧ್ವನಿ ಇದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಸೂಪರ್ ಹಿಟ್ ಆಗಿವೆ.

ಇದನ್ನೂ ಓದಿ: Hariprakash Konemane: ಯಕ್ಷಗಾನ ಅಕಾಡೆಮಿಯಲ್ಲಿ ಉತ್ತರ ಕನ್ನಡ ಕಡೆಗಣನೆ; ಹರಿಪ್ರಕಾಶ್‌ ಕೋಣೆಮನೆ ಖಂಡನೆ

Continue Reading

Lok Sabha Election 2024

Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ

Lok Sabha Election 2024: ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

VISTARANEWS.COM


on

Lok Sabha Election 2024 General holiday for first phase of polling on April 26
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ (Voting in Karnataka) ನಡೆಯಲಿದೆ. ಅಂದು ಎಲ್ಲ ಕಾರ್ಮಿಕರು, ಅರ್ಹ ಮತದಾರರು (Labour Voters) ಮತದಾನ ಮಾಡುವ ಸಲುವಾಗಿ ಸಾರ್ವತ್ರಿಕ ರಜೆ (General holiday for voting) ಘೋಷಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ.

ಈ ಬಗ್ಗೆ ಕಾರ್ಮಿಕ ಆಯುಕ್ತರು ಆದೇಶವನ್ನು ಹೊರಡಿಸಿದ್ದು, ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆ ದಿನಾಂಕವನ್ನು 2024ರ ಮಾರ್ಚ್‌ 16ರಂದು ಘೋಷಿಸಿದ್ದು, ಅದರಂತೆ ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗದಿಯಾಗಿರುತ್ತದೆ. ಏಪ್ರಿಲ್‌ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಹಾಗೂ ಮೇ 07ರ ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಮಿಕರು ಸಹ ಮತದಾನ ಮಾಡಬೇಕಿದೆ. ಹಾಗಾಗಿ ಅಂದು ಕಾರ್ಮಿಕರಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಆದೇಶದಲ್ಲೇನಿದೆ?

ಸದರಿ ದಿನಾಂಕದಂದು ಮತದಾನ ನಡೆಯಲಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳು 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ, ಮತದಾನ ನಡೆಯಲಿರುವ ಕ್ಷೇತ್ರದಲ್ಲಿ ಅರ್ಹರಿರುವ ಎಲ್ಲ ಕಾರ್ಮಿಕ ಮತದಾರರಿಗೆ ಏಪ್ರಿಲ್‌ 26ರಂದು ವೇತನ ಸಹಿತ ರಜೆ ನೀಡಿ, ಎಲ್ಲ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಅನುವು ಮಾಡಿಕೊಡಲು ಸೂಚಿಸಲಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: VVPAT Verification: ಇವಿಎಂ-ವಿವಿಪ್ಯಾಟ್‌ ತಾಳೆಯ ಪ್ರಕ್ರಿಯೆ ತಿಳಿಸಿ; ಆಯೋಗಕ್ಕೆ ಸುಪ್ರೀಂ ಸೂಚನೆ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

Continue Reading
Advertisement
Karnataka Weather Forecast
ಮಳೆ11 mins ago

Karnataka Weather : ಮಳೆಯಾಟ ಬಂದ್‌; 12 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಟ್ಯಾಕ್‌, ಯೆಲ್ಲೋ ಅಲರ್ಟ್‌

drinking ors
ಆರೋಗ್ಯ41 mins ago

ORS: ಒಆರ್‌ಎಸ್‌ ಜೀವಜಲ; ಯಾರು, ಎಷ್ಟು ಪ್ರಮಾಣದಲ್ಲಿ ಸೇವಿಸಬಹುದು?

Dina bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Lok sabha Election
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

food
ಕರ್ನಾಟಕ7 hours ago

Food Poisoning : ಮದುವೆ ಮನೆ ಊಟ ತಿಂದ ನೂರಾರು ಮಂದಿ ಅಸ್ವಸ್ಥ; ಆಸ್ಪತ್ರೆಯಲ್ಲಿ ಹಾಹಾಕಾರ

PM Narendra Modi will visit Sirsi on April 28
ಉತ್ತರ ಕನ್ನಡ7 hours ago

Lok Sabha Election 2024: ಶಿರಸಿಯಲ್ಲಿ ಏಪ್ರಿಲ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಸಮಾವೇಶ

Bus Driver attacked
ಕರ್ನಾಟಕ7 hours ago

Bus driver Attacked : ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಠಾಣೆ ಮುಂಭಾಗ ಧರಣಿ

IPL 2024
ಪ್ರಮುಖ ಸುದ್ದಿ7 hours ago

IPL 2024 : ಆರ್​​ಸಿಬಿಗೆ ಸಿಕ್ಕಿತು ಕೊನೆಗೂ ಒಂದು ವಿಜಯ; ಎಸ್​ಆರ್​ಎಚ್​ ವಿರುದ್ಧ 35 ರನ್ ಗೆಲುವು

Viral News
ವೈರಲ್ ನ್ಯೂಸ್7 hours ago

Viral News: ವಾಟರ್‌ ಪ್ಯೂರಿಫೈಯರ್‌ನಿಂದ ನೀರು ಕುಡಿದ ಬುದ್ಧಿವಂತ ಮಂಗ; ವಿಡಿಯೊ ನೀವೂ ನೋಡಿ

lok sabha Election
ಪ್ರಮುಖ ಸುದ್ದಿ8 hours ago

lok sabha election : ಒಂದು ವರ್ಷದ ಕೂಸಿನೊಂದಿಗೆ ಚುನಾವಣಾ ಕರ್ತವ್ಯಕ್ಕೆ ಬಂದ ಪೊಲೀಸ್​​!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ14 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ15 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ18 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 202420 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು4 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ4 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು4 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

ಟ್ರೆಂಡಿಂಗ್‌