Site icon Vistara News

NIA raid | ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ದಾಳಿ, 100ಕ್ಕೂ ಹೆಚ್ಚು ಮಂದಿ ವಶಕ್ಕೆ

nia raids

ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ಬೆಳ್ಳಂಬೆಳಗ್ಗೆಯೇ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ಪ್ರತಿರೋಧ ತೋರಿದ ಹಲವಾರು ಮಂದಿಯನ್ನು ವಶಪಡಿಸಿಕೊಳ್ಳಲಾಗಿದೆ.

ದೇಶದ ನಾನಾ ಕಡೆಗಳಲ್ಲಿರುವ ಎಸ್‌ಡಿಪಿಐ ಮತ್ತು ಪಿಎಫ್‌ಐ ಕಚೇರಿಗಳ ಮೇಲೆ ಎನ್‌ಐಎ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ಕರ್ನಾಟಕ ಸೇರಿ ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಲ್ಲೂ ಪಿಎಫ್‌ಐ, ಎಸ್‌ಡಿಪಿಐ ಕಚೇರಿಗಳ ಮೇಲೆ ತನಿಖಾ ದಾಳಿ ನಡೆದಿದೆ. ನೂರಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ | Praveen Nettaru | ಎಸ್‌ಡಿಪಿಐ ರಾಷ್ಟ್ರೀಯ ನಾಯಕನ ಮನೆಗೆ ಎನ್‌ಐಎ ದಾಳಿ

ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್‌ಐ, ಎಸ್‌ಡಿಪಿಐ ಕಚೇರಿ ಹಾಗೂ ಜಿಲ್ಲಾದ್ಯಕ್ಷ ಅಬ್ಬುಬಕರ್ ಕುಳಾಯಿ ನಿವಾಸಗಳ ಮೇಲೂ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ನೂರಾರು ಸ್ಥಳೀಯ ಮುಸ್ಲಿಂ ಯುವಕರು ಸ್ಥಳದಲ್ಲಿ ಜಮಾಯಿಸಿ ʼಎನ್‌ಐಎ ಗೋ ಬ್ಯಾಕ್ʼ ಎಂದು ಘೋಷಣೆ ಕೂಗಿದ್ದಾರೆ. ಹತ್ತು ದಿನಗಳ ಹಿಂದೆ ಎಸ್‌ಡಿಪಿಐ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ಮನೆಗೆ ದಾಳಿ ನಡೆದಿತ್ತು. ಆ ಸಂದರ್ಭದಲ್ಲೂ ಪ್ರತಿರೋಧ ಎದುರಾಗಿತ್ತು ಎಂಬುದನ್ನು ಸ್ಮರಿಸಬಹುದು.

ಇದನ್ನೂ ಓದಿ | Praveen Nettaru | ಪ್ರವೀಣ್‌ ಹತ್ಯೆಯಲ್ಲಿ ಪಿಎಫ್‌ಐ ಕೈವಾಡದ ಕಡೆಗೆ ಬೊಟ್ಟು ಮಾಡಿದ ಎನ್‌ಐಎ

Exit mobile version