ಮಡಿಕೇರಿ: ಕೊಡಗು ಜಿಲ್ಲೆ ಮದೆ ಗ್ರಾಮದ ಕರ್ತೋಜಿ ಬಳಿ ಗುಡ್ಡ ಬಿರುಕು ಬಿಟ್ಟು ಭೂಕುಸಿತದ ಆತಂಕ ಉಂಟಾಗಿರುವ ಹಿನ್ನೆಲೆಯಲ್ಲಿ ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಆ.10 ಹಾಗೂ 11ರಂದು ರಾತ್ರಿ 8.30ರಿಂದ ಬೆಳಗ್ಗೆ 6.30 ರವರೆಗೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರ್ತೋಜಿ ಬಳಿ 70 ರಿಂದ 80 ಅಡಿ ಎತ್ತರಲ್ಲಿ ರಸ್ತೆ ಪಕ್ಕದ ಗುಡ್ಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು ರಸ್ತೆಯೇ ಕುಸಿದು ಬೀಳುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಕೂಡ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಆದರೆ ಈ ಬಗ್ಗೆ ಮಾಹಿತಿ ಇಲ್ಲದೆ ಹೆದ್ದಾರಿಯಲ್ಲಿ ನೂರಾರು ವಾಹನಗಳು ಆಗಮಿಸಿದ್ದರಿಂದ ಮಡಿಕೇರಿ ಸಮೀಪ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಬೇಕಾಯಿತು. ಇದೀಗ ಮತ್ತೆ ಹೆದ್ದಾರಿಯಲ್ಲಿ ರಾತ್ರಿ ವೇಳೆ ಸಂಚಾರ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಇದನ್ನೂ ಓದಿ | Heavy Rain | ತುಂಗಾಭದ್ರಾ, ಘಟಪ್ರಭಾ ಪ್ರವಾಹ; ಸೇತುವೆಗಳು ಜಲಾವೃತ