Site icon Vistara News

Ramanagara Election Results : ಜೆಡಿಎಸ್‌ ಭದ್ರಕೋಟೆ ರಾಮನಗರದಲ್ಲೇ ನಿಖಿಲ್‌ ಕುಮಾರಸ್ವಾಮಿಗೆ ಸೋಲು!

Ramanagara Assembly Election Results winner iqbal hussain

#image_title

ರಾಮನಗರ: ವಿಧಾನಸಭಾ ಚುನಾವಣೆಯ (Ramanagara Election Results) ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್‌ ಭದ್ರಕೋಟೆ ರಾಮನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಎ.ಇಕ್ಬಾಲ್‌ ಹುಸೇನ್‌ ಗೆಲುವು ಕಂಡಿದ್ದಾರೆ. ಇವರು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ವಿರುದ್ಧ 10,715 ಮತಗಳ ಅಂತರದಿಂದ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಎ.ಇಕ್ಬಾಲ್‌ ಹುಸೇನ್‌ 87,690 ಮತ, ನಿಖಿಲ್‌ ಕುಮಾರಸ್ವಾಮಿ 76,975 ಮತ, ಬಿಜೆಪಿ ಅಭ್ಯರ್ಥಿ ಗೌತಮ್‌ ಮರಿಲಿಂಗೇಗೌಡ 12,912 ಮತಗಳನ್ನು ಪಡೆದಿದ್ದಾರೆ.

2018ರಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಜಯಗಳಿಸಿದ್ದರು, ಆದರೆ, ಅವರು ರಾಮನಗರ ಕ್ಷೇತ್ರ ತೊರೆದ ಹಿನ್ನೆಲೆಯಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಉಪಚುನಾವಣೆಯಲ್ಲಿ ಗೆದ್ದರು. ಅನಿತಾ ಕುಮಾರಸ್ವಾಮಿ ಅವರು 1,25,043 ಮತಗಳನ್ನು ಪಡೆದು, 1,09,137 ಮತಗಳ ಅಂತರದಿಂದ ಸಮೀಪದ ಸ್ಪರ್ಧಿ ಬಿಜೆಪಿಯ ಚಂದ್ರಶೇಖರ್ (15,906 ಮತ) ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ | Chikkaballapur Election Results : ಚಿಕ್ಕಬಳ್ಳಾಪುರದಲ್ಲಿ ಡಾ. ಕೆ ಸುಧಾಕರ್‌ರನ್ನು ಹೀನಾಯವಾಗಿ ಸೋಲಿಸಿದ ಪ್ರದೀಪ್‌ ಈಶ್ವರ್‌

2019 ಲೋಕಾಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ವಿರುದ್ಧ ಮಾಜಿ ಸಿಎಂ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಆದರೆ, ಚೊಚ್ಚಲ ಚುನಾವಣೆಯಲ್ಲೇ ಅವರು ಸೋತಿದ್ದರಿಂದ ಜೆಡಿಎಸ್‌ ಭದ್ರಕೋಟೆ ಮಂಡ್ಯದಲ್ಲಿ ದಳಪತಿಗಳಿಗೆ ತೀವ್ರ ಮುಖಭಂಗವಾಗಿತ್ತು. ಆದರೆ, ಈ ಬಾರಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರಿಂದ ರಾಮನಗರದಿಂದ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕಿಳಿದಿದ್ದರು. ಆದರೆ, ಈ ಬಾರಿಯೂ ಅವರಿಗೆ ಸೋಲಾಗಿದೆ.

Exit mobile version