Site icon Vistara News

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Bannerghatta Park

ಆನೇಕಲ್: ಕೇರಳದಲ್ಲಿ ನಿಫಾ ವೈರಸ್ (Nipah Virus) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಲಾಗುತ್ತಿದೆ. ಪ್ರಮುಖವಾಗಿ ವಿವಿಧ ಪ್ರಭೇದಗಳ ಪ್ರಾಣಿ-ಪಕ್ಷಿಗಳಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (bannerghatta national park) ಸ್ಯಾನಿಟೈಸ್‌ ಮಾಡಲಾಗುತ್ತಿದೆ.

ಹೊರಗಿನಿಂದ ಬಾವಲಿಗಳು ಪಾರ್ಕ್ ಒಳ ಬಂದಾಗ ಇತರೆ ಪಕ್ಷಿಗಳಿಗೆ ಯಾವುದೇ ಸೋಂಕು ಹರಡದಂತೆ ಕ್ರಮವಹಿಸಲಾಗುತ್ತಿದೆ. ಹೊರ ಮತ್ತು ಒಳ ಭಾಗದಲ್ಲಿ ಪೊಟಾಷಿಯಂ ಪರ್ಮಾಂಗನೇಟ್ ದ್ರಾವಣ ಸಿಂಪಡಣೆ ಮಾಡಲಾಗುತ್ತಿದೆ. ಪ್ರವೇಶ ದ್ವಾರ, ನಿರ್ಗಮನ ದ್ವಾರಗಳಲ್ಲಿ ಸೋಂಕು ನಿವಾರಕ ದ್ರಾವಣ ಹಾಕಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಮಾತ್ರವಲ್ಲದೆ ಪ್ರಾಣಿ-ಪಕ್ಷಿಗಳಿರುವ ಕೊಠಡಿಯನ್ನು ಸ್ವಚ್ಚಗೊಳಿಸಲಾಗುತ್ತಿದೆ.

ಇದನ್ನೂ ಓದಿ: Nipah Virus: ಕೇರಳದಲ್ಲಿ ಮತ್ತೊಂದು ನಿಫಾ ಕೇಸ್, ಸೋಂಕಿತರ ಸಂಖ್ಯೆ 6; ಶಾಲೆಗಳಿಗೆ ರಜೆ ಘೋಷಣೆ

ಪಾರ್ಕ್ ಒಳಗೆ ಹಾಗೂ ಹೊರಭಾಗದ ಇಕ್ಕೆಲಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಗೂ ಸುಣ್ಣದ ಪುಡಿ ಹಾಕಲಾಗುತ್ತಿದೆ. ಬನ್ನೇರುಘಟ್ಟ ಪಾರ್ಕ್‌ಗೆ ಹೊರರಾಜ್ಯದಿಂದ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ಪ್ರವಾಸಿಗರಿಗೂ ಥರ್ಮಲ್ ಸ್ಕ್ರೀನಿಂಗ್‌ ಮಾಡಲು ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ. ಜತೆಗೆ ಸ್ಯಾನಿಟೈಸರ್ ಬಳಸು ಸೂಚನೆ ನೀಡಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version