ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಮೊಬೈಲ್ ನಂಬರ್‌ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಪ್ರಾಣ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಂಡಿದ್ದು, ಹಿಂಡಲಗಾ ಜೈಲಿನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅಲ್ಲದೆ, ಮಹಾರಾಷ್ಟ್ರ ಪೊಲೀಸರೂ ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿಯಿಂದಲೇ ನಿತಿನ್ ಗಡ್ಕರಿಗೆ ಜೀವ ಬೆದರಿಕೆಯನ್ನು ಒಡ್ಡಲಾಗಿದೆ ಎಂಬುದು ತಿಳಿಯುತ್ತಿದ್ದಂತೆ ಆರೋಪಿ ಪತ್ತೆಗಾಗಿ ಶನಿವಾರವೇ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಎರಡನೇ ದಿನವಾದ ಭಾನುವಾರವೂ (ಜ.೧೫) ಶೋಧ ಕಾರ್ಯವನ್ನು ಮುಂದುವರಿಸಲಾಗಿದೆ. ಹಿಂಡಲಗಾಕ್ಕೆ ಮಹಾರಾಷ್ಟ್ರ ಪೊಲೀಸರು ಆಗಮಿಸಿದ್ದು, ಅವರಿಂದಲೂ ತೀವ್ರ ವಿಚಾರಣೆ ನಡೆಯುತ್ತಿದೆ.
ಮಹಾರಾಷ್ಟ್ರದ ನಾಗ್ಪುರ, ಪುಣೆ, ಸಾಂಗ್ಲಿ, ಕೊಲ್ಲಾಪುರ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಈ ಹಿಂದೆ ಎಡಿಜಿಪಿ ಅಲೋಕ್ ಕುಮಾರ್‌ಗೆ ಸಹ ಕೈದಿಗಳು ಜೀವ ಬೆದರಿಕೆ ಹಾಕಿದ್ದರು. ಹಲವು ಬಾರಿ ದಿಢೀರ್ ದಾಳಿ ನಡೆಸಲಾಗಿದ್ದರೂ ಸಹ ಕೈದಿಗಳಿಗೆ ಮೊಬೈಲ್ ಪೂರೈಕೆಯಾಗುತ್ತಿರುವುದು, ಬಳಕೆ ಮಾಡುತ್ತಿರುವುದು ಮಾತ್ರ ನಿಂತಿಲ್ಲ.
ಇದನ್ನೂ ಓದಿ | Vishnuvardhan | ಬಾಲಣ್ಣ ಕುಟುಂಬಸ್ಥರು ಅವಮಾನ ಮಾಡಿದ್ದಾರೆ: ನಟ ಅನಿರುದ್ಧ