ಬೆಂಗಳೂರು: ಕಾಂಗ್ರೆಸ್ ಸರ್ಕಾರದ (Congress Guarantee) ಶಕ್ತಿ ಯೋಜನೆಯಿಂದ (Shakti Scheme) ನಷ್ಟವಾದ ಪರಿಣಾಮ ಬೆಂಗಳೂರು ಬಂದ್‌ಗೆ (bengaluru bandh) ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದೆ. ಸೆ.11ರಂದು ಬೆಂಗಳೂರಲ್ಲಿ ಖಾಸಗಿ ಸಾರಿಗೆ ಸೇವೆಗಳ (Private Transport) ಓಡಾಟಕ್ಕೆ ಬ್ರೇಕ್ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ.
ಸರ್ಕಾರದ ವಿರುದ್ಧ ಬಂದ್ ಅಸ್ತ್ರ ಪ್ರಯೋಗಕ್ಕೆ ಒಕ್ಕೂಟ ಸಜ್ಜಾಗಿದ್ದು, ಸೆಪ್ಟೆಂಬರ್ 11ರ ಬೆಂಗಳೂರು ಬಂದ್‌ಗೆ ಸುಮಾರು 32 ಖಾಸಗಿ ಸಾರಿಗೆ ಒಕ್ಕೂಟಗಳು ಸಾಥ್ ನೀಡಿವೆ. ಶಕ್ತಿ ಯೋಜನೆ ಜಾರಿ ಬಳಿಕ ಖಾಸಗಿ ಚಾಲಕರು ಸಂಕಷ್ಟ ಅನುಭವಿಸುವಂತಾಗಿದೆ. ಸಾರಿಗೆ ಸಚಿವರು ಆಗಸ್ಟ್ 31ರೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಸರ್ಕಾರದ ಡೆಡ್ ಲೈನ್ ಮುಗಿದ ಕಾರಣಕ್ಕೆ ಬೆಂಗಳೂರು ಬಂದ್‌ಗೆ ನಿರ್ಧರಿಸಿದ್ದಾರೆ.
ಬಿಎಂಟಿಸಿ ವಜಾಗೊಂಡ ನೌಕರರ ಸಾಥ್!
ಸೆಪ್ಟೆಂಬರ್ 11ರಂದು ಖಾಸಗಿ ಸಾರಿಗೆ ಸೇವೆ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆ ಖಾಸಗಿ ಸಾರಿಗೆ ಸಂಘಟನೆಗಳಿಗೆ ಬೆಂಬಲವಾಗಿ ಬಿಎಂಟಿಸಿ ವಜಾಗೊಂಡ ನೌಕರರು ಸಾಥ್ ನೀಡಿದ್ದಾರೆ. ಸರ್ಕಾರದ ವಿರುದ್ದ ಹೋರಾಟ ಮಾಡಿ ವಜಾಗೊಂಡಿದ್ದ ನೌಕರರು ಬಂದ್‌ಗೆ ಬೆಂಬಲ ನೀಡಿದ್ದಾರೆ. ನಟರಾಜ್ ಶರ್ಮಾ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ವಜಾಗೊಂಡ ಸರ್ಕಾರಿ ನೌಕರರು ಭಾಗಿಯಾಗಲಿದ್ದಾರೆ.
ಬಿಎಂಟಿಸಿಯಲ್ಲಿ ವಜಾಗೊಂಡ ನೌಕರ ಜಯಂತ್ ಮರ್ಗಿ ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಖಾಸಗಿ ಸಾರಿಗೆ ಮಾಲೀಕರು ಹಾಗೂ ಚಾಲಕರ ಹೋರಾಟ ನ್ಯಾಯಯುತವಾಗಿದೆ. ಅವರ ಹೋರಾಟಕ್ಕೆ ಬಿಎಂಟಿಸಿ ವಜಾಗೊಂಡ ನೌಕರರು ಬೆಂಬಲವಾಗಿ ನಿಲ್ಲಲಿದ್ದೇವೆ. ಸರ್ಕಾರದ ವಿರುದ್ಧ ನಾವು ಹೋರಾಟ ಮಾಡಿದಾಗ ನಟರಾಜ್ ಶರ್ಮಾವರು ನಮ್ಮ ಪರವಾಗಿ ನಿಂತಿದ್ದರು. ಕಾನೂನು ಹೋರಾಟದಲ್ಲೂ ಪ್ರಾಮಾಣಿಕವಾಗಿ ನಮ್ಮ ಪರ ಕೆಲಸ ಮಾಡುತ್ತಿದ್ದಾರೆ. ಸೋಮವಾರದ ಬಂದ್‌ಗೆ ನಾವು ಸಂಪೂರ್ಣವಾಗಿ ಬೆಂಬಲ ಸೂಚಿಸಿದ್ದೇವೆ ಎಂದರು.
ಇದನ್ನೂ ಓದಿ: Ramanagara Bundh : ಮೆಡಿಕಲ್ ಕಾಲೇಜು ಶಿಫ್ಟ್ ವಿರುದ್ಧ ಸಿಡಿದ ರಾಮನಗರ; ಅಂಗಡಿಗಳು ಬಂದ್, ಹೆದ್ದಾರಿ ಸಂಚಾರಕ್ಕೂ ಅಡ್ಡಿ
ಸ್ಕೂಲ್ ಬಸ್ ಸೇರಿ ಈ ಸೇವೆಗಳ ಓಡಾಟ ಇರೋಲ್ಲ
ವಿವಿಧ ಬೇಡಿಕೆಗಳನ್ನು ಈಡೇರಿಸದ ಸರ್ಕಾರ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಸಮರಕ್ಕೆ ಮುಂದಾಗಿದೆ. ಸೆಪ್ಟೆಂಬರ್ 10ರ ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಖಾಸಗಿ ಸಾರಿಗೆ ಸೇವೆಗಳು ಬಂದ್ ಆಗಲಿವೆ. ಖಾಸಗಿ ಬಸ್‌ಗಳು, ಮಿನಿ ಲಗೇಜ್ ವಾಹನಗಳು, ಸ್ಕೂಲ್ ಬಸ್, ವ್ಯಾನ್, ಆಟೋ ಸೇರಿದಂತೆ ಟ್ಯಾಕ್ಸಿ ಮ್ಯಾಕ್ಸಿ ಕ್ಯಾಬ್, ಕಂಪೆನಿ ಕ್ಯಾಬ್‌ಗಳ ಓಡಾಟ ಇರುವುದಿಲ್ಲ.
ಸೆ.11ರಂದು ಪ್ರಮುಖ ಜಂಕ್ಷನ್, ಹೆದ್ದಾರಿಯಲ್ಲಿ ವಾಹನಗಳ ತಡೆಗೆ ಯೋಜನೆ ರೂಪಿಸಲಾಗಿದೆ. ಮೆಜೆಸ್ಟಿಕ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ರ‍್ಯಾಲಿ ನಡೆಸಿ, ಮತ್ತೊಂದು ಮನವಿ ಪತ್ರವನ್ನು ಸಲ್ಲಿಸಲಿದ್ದಾರೆ. ಸರ್ಕಾರವು ಲಿಖಿತ ಆದೇಶ ನೀಡುವವರೆಗೂ ಬಂದ್ ಕೈ ಬಿಡದಿರಲು ತೀರ್ಮಾನಿಸಿದ್ದಾರೆ.
ಒಕ್ಕೂಟದ ಬೇಡಿಕೆಗಳೇನು?
-ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ ನೀಡಬೇಕು.
-ಬೈಕ್, ರ‍್ಯಾಪಿಡೋ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ ಮಾಡಬೇಕು.
-ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು.
-ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ಸಾಲ ನೀಡಬೇಕು.
-ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಬ್ರೇಕ್ ಹಾಕಬೇಕು.
-ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು.
-ಓಲಾ, ಉಬರ್ ಆ್ಯಪ್ ಆಧಾರಿತ ಸೇವೆಗಳ ನಿರ್ಬಂಧ ಮಾಡಬೇಕು.
-ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ ನೀಡಬೇಕು.
-ಖಾಸಗಿ ವಾಹನಗಳನ್ನು ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು.
-ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮವಹಿಸಬೇಕು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ