Site icon Vistara News

Kolar News: ಮುಂದಿನ ಸಭೆವರೆಗೆ ಅರಣ್ಯ ಭೂಮಿ ಒತ್ತುವರಿ ತೆರವು ಬೇಡ: ಸಿಎಂ ಸಿದ್ದರಾಮಯ್ಯ

CM Meeting

ಕೋಲಾರ: ಕಂದಾಯ ಮತ್ತು ಅರಣ್ಯ ಭೂಮಿ ಗುರುತಿಸುವ ವಿಚಾರದಲ್ಲಿ ಆಗುತ್ತಿರುವ ತೊಂದರೆ, ಗೊಂದಲಗಳನ್ನು ಪರಿಹರಿಸಲು ಎರಡೂ ಇಲಾಖೆಯ ಜಂಟಿ ಸರ್ವೆ ಮಾಡಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದರು.

ನಗರದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ (Kolar News) ಮಾತನಾಡಿದ ಅವರು, ಈ ಸಮಸ್ಯೆ ರಾಜ್ಯ ಮಟ್ಟದಲ್ಲೂ ಇರುವುದರಿಂದ ವಿಧಾನಸೌಧದಲ್ಲಿ ಪ್ರತ್ಯೇಕ ಉನ್ನತ ಮಟ್ಟದ ಸಭೆ ಕರೆಯುತ್ತೇನೆ. ಅಲ್ಲಿಯವರೆಗೂ ಜಿಲ್ಲೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಎಂದು ಯಾರನ್ನೂ ತೆರವುಗೊಳಿಸಬಾರದು ಎಂದು ಸಿಎಂ ಮತ್ತು ಜಿಲ್ಲಾ ಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಬರಗಾಲದ ಸಮಸ್ಯೆ ಜಿಲ್ಲೆಯಲ್ಲಿ ಯಾವ ಪ್ರಮಾಣದಲ್ಲಿದೆ? ಎಷ್ಟು ಗ್ರಾಮಗಳಲ್ಲಿ ಟ್ಯಾಂಕರ್ ನೀರು ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಪ್ರಶ್ನಿಸಿ, ಇತರೆ ಯಾವುದೇ ನೀರಿನ ಮೂಲಗಳು ಇಲ್ಲದಿದ್ದಾಗ ಅಪರೂಪದ ಸಂದರ್ಭಗಳಲ್ಲಿ ಮಾತ್ರ ಬೋರ್ ವೆಲ್ ಕೊರೆಸಲು ಅವಕಾಶ ಮಾಡಿಕೊಳ್ಳಬಹುದು. *ರೀಡ್ರಿಲ್ ಮಾಡುವುದಕ್ಕಿಂತ ಹೊಸ ಬೋರ್ ಕೊರೆಯುವುದೇ ಖರ್ಚು ಕಡಿಮೆ. ರೀಡ್ರಿಲ್‌ಗೆ ಸಿಕ್ಕಾಪಟ್ಟೆ ಖರ್ಚು ಬರುತ್ತದೆ. ಹಣದ ಹೊರೆ ಆಗುತ್ತದೆ ಎನ್ನುವ ಅಭಿಪ್ರಾಯ ಶಾಸಕರುಗಳಿಂದ ವ್ಯಕ್ತವಾಯಿತು.

ಇದನ್ನೂ ಓದಿ | Gruhalakshmi Scheme : ಯಾರೊಬ್ಬರೂ ಗೃಹಲಕ್ಷ್ಮಿಯಿಂದ ವಂಚಿತ ಆಗಲು ಬಿಡಲ್ಲ ಎಂದ ಹೆಬ್ಬಾಳ್ಕರ್‌

ಮಲ ಗುಂಡಿಗೆ ಮಕ್ಕಳನ್ನು ಇಳಿಸಿ ಶುಚಿಗೊಳಿಸಿದ ಪ್ರಕರಣದಲ್ಲಿ ಮೂವರನ್ನು ಮಾತ್ರ ಜೈಲಿಗೆ ಕಳುಹಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನೂ ಇಬ್ಬರು ಆರೋಪಿಗಳನ್ನು ಏಕೆ ಬಂಧಿಸಿಲ್ಲ ಎಂದು ಪೊಲೀಸ್ ಅಧಿಕಾರಿಗಳನ್ನು ಪ್ರಶ್ನಿಸಿದ ಸಿಎಂ ಅವರನ್ನು ತಕ್ಷಣ ಬಂಧಿಸಿ ಎಂದು ಸೂಚಿಸಿದರು.

ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಪಡೆದ ಸಿಎಂ ಇದೊಂದು ಕ್ರೂರ ಕೃತ್ಯ. ಇಂಥದ್ದನ್ನು ನಾವು ಅಪ್ಪಿತಪ್ಪಿಯೂ ಸಹಿಸುವುದಿಲ್ಲ ಎಂದು ಎಚ್ಚರಿಸಿದ ಸಿಎಂ ಎರಡು ದಿನಗಳಲ್ಲಿ ಉಳಿದಿಬ್ಬರನ್ನು ಬಂಧಿಸಿ. ಈ ಘಟನೆ ಇಡೀ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಒಂದು ಪಾಠ. ಯಾವುದೇ ಕಾರಣಕ್ಕೂ ಇದು ಮರುಕಳಿಸಬಾರದು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಎಲ್ಲಾ ಹೋಬಳಿಗಳಲ್ಲೂ ಇರುವ ವಸತಿ ಶಾಲೆಗಳಲ್ಲಿ ಆಯಾ ಹೋಬಳಿಗಳಲ್ಲೇ ಇರುವ ವಸತಿ ಶಾಲೆಗಳಿಗೆ ಸೇರುವಂತೆ, ಈ ವಿಚಾರದಲ್ಲಿ ಇರುವ ಗೊಂದಲ ಬಗೆಹರಿಸುವಂತೆ ಸೂಚಿಸಿದ ಅವರು, ವಸತಿ ಶಾಲೆಗಳ ಒಳಗೆ ಪೋಷಕರು ಪ್ರವೇಶಿಸಲು ಅವಕಾಶ ನೀಡಬೇಕು. ಇದರಿಂದ ಪೋಷಕರಿಗೆ ವಸತಿ ಶಾಲೆಗಳ ಗುಣಮಟ್ಟ ಗೊತ್ತಾಗುತ್ತದೆ. ಹೀಗೆ ಮಾಡುವುದರಿಂದ ವಸತಿ ಶಾಲೆಗಳು ಜೈಲುಗಳು ಎನ್ನುವ ಭಾವನೆ ಹೋಗುತ್ತದೆ ಎನ್ನುವ ಸಲಹೆ ಜಿಲ್ಲಾ ಸಚಿವರಾದ ಬೈರತಿ ಸುರೇಶ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಮತ್ತು ಶಾಸಕರುಗಳಿಂದ ವ್ಯಕ್ತವಾಯಿತು. ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲಿಸುವ ಭರವಸೆ ನೀಡಿದರು

ಸರಾಯಿ ಬೇಡ-ವಸತಿ ಶಾಲೆ ಬೇಕು: DSS ಘೋಷಣೆ ನೆನಪಿಸಿದ ಸಿಎಂ

ನನಗೆ ದಲಿತ ಚಳವಳಿಗಳ ಜತೆ ಒಡನಾಟ ಮೊದಲೂ ಇತ್ತು, ಈಗಲೂ ಇದೆ, ಸಾಯುವವರೆಗೂ ಇರುತ್ತದೆ. ಹಿಂದೆ “ಸರಾಯಿ ಬೇಡ-ವಸತಿ ಶಾಲೆ ಬೇಕು” ಎನ್ನುವುದು ದಲಿತ ಚಳವಳಿಯ ಘೋಷಣೆಯಾಗಿತ್ತು. ಅದಕ್ಕಾಗೇ ನಾನು ಹೋಬಳಿಗೊಂದು ವಸತಿ ಶಾಲೆ ಆರಂಭಿಸಿದೆ. ಈ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಿಸಬೇಕು. ಶಿಕ್ಷಕರಿಗೆ ತರಬೇತಿ ನೀಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲ ಜಾತಿ-ಧರ್ಮದವರಿಗೂ ಆದ್ಯತೆ ನೀಡಬೇಕು

ದೇವಸ್ಥಾನದ ಮತ್ತು ವಕ಼್ಫ್ ಬೋರ್ಡ್ಗೆ ಸಂಬಂಧಪಟ್ಟ ಸ್ಥಳಗಳು, ಜಮೀನು ಆಯಾ ಆಯಾ ಸಂಸ್ಥೆಗೆ ಹೋಗಬೇಕು. ಇವರ ಜಾಗ ಅವರಿಗೆ ಅವರ ಜಾಗ ಇವರಿಗೆ ಹೋಗದಂತೆ, ತಾಂತ್ರಿಕ ದಾಖಲಾತಿಗಳ ಗೊಂದಲ ಉಂಟಾಗದಂತೆ ಸಮಗ್ರವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ವಿಶ್ವಕರ್ಮ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳಲ್ಲೂ ನಿಯಮಾನುಸಾರ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಡ ಸೂಚನೆಯನ್ನು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಕೋಲಾರ ಅಪರಾಧ ಮುಕ್ತವಾಗಬೇಕು

ಕೋಲಾರ ಜಿಲ್ಲೆಯಲ್ಲಿ ಅಪರಾಧಗಳ ಹೆಚ್ಚಳ ಆದರೆ ನಾನು ಸಹಿಸಲ್ಲ. ಕೋಲಾರ ಅಪರಾಧ ಮುಕ್ತ ಆಗಬೇಕು. ಚಾಳಿಬಿದ್ದ ಆರೋಪಿಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಇತರೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಇದನ್ನೂ ಓದಿ | CM Siddaramaiah: ಅಪ್ರಾಪ್ತ ಹೆಣ್ಣುಮಕ್ಕಳ ಮದುವೆ ಹೆಚ್ಚಳ; ಅಧಿಕಾರಿಗಳಿಗೆ ಸಿಎಂ ತರಾಟೆ

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಪ್ರಮುಖ ಅಂಶಗಳು

Exit mobile version