Site icon Vistara News

Indira Canteen: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಹೆಚ್ಚಳ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

CM Siddaramaiah

ಬೆಂಗಳೂರು: ಇಂದಿರಾ ಕ್ಯಾಂಟೀನ್ (Indira Canteen) ಊಟದ ದರದಲ್ಲಿ ಹೆಚ್ಚಳ ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಇದಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಎಂದು ತಿಳಿಸಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ ಮಾತ್ರ 5 ರೂ. ಹೆಚ್ಚಳವಾಗಿದೆ ಅಷ್ಟೇ. ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂ.ಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | Power point with HPK : ಗ್ಯಾರಂಟಿಗಳಿಂದ ಸರ್ಕಾರಕ್ಕೆ ಯಾವುದೇ ನಷ್ಟವಿಲ್ಲ; ಕೆ.ಜೆ. ಜಾರ್ಜ್‌ ಪ್ರತಿಪಾದನೆ

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ಅವರ ಕಚೇರಿ, ಇಂದಿರಾ ಕ್ಯಾಂಟೀನ್ ಊಟದ ಬೆಲೆ 62 ರೂ. ಆಗಿದೆ. ಇದು ಪ್ರತಿ ದಿನದ ವೆಚ್ಚವೇ ಹೊರತು ಒಂದು ಊಟದ್ದಲ್ಲ. ಸಾರ್ವಜನಿಕರಿಂದ ಸಂಗ್ರಹಿಸುವ 25 ರೂ.ಗಳು, ಉಪಹಾರ ಮತ್ತು ಎರಡು ಊಟದ ಒಟ್ಟು ವೆಚ್ಚವಾಗಿರುತ್ತದೆ ಎಂದು ತಿಳಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸಚಿವ ಎಚ್‌.ಕೆ.ಪಾಟೀಲ್‌ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಇಂದಿರಾ ಕ್ಯಾಂಟೀನ್‌ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ ಊಟದ ದರದಲ್ಲಿ ಯಾವುದೇ ಹೆಚ್ಚಳ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.

Exit mobile version