Site icon Vistara News

IT Raid: ರಾಜಕೀಯ ಉದ್ದೇಶವಿಲ್ಲದೆ ಯಾವುದೇ ಐಟಿ ದಾಳಿ ನಡೆಯಲ್ಲ: ಡಿ.ಕೆ. ಶಿವಕುಮಾರ್

DCM DK Shivakumar

ಬೆಂಗಳೂರು: ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ದೇಶದ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿಗಳು (IT Raid) ಆಗುತ್ತಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಐಟಿ ದಾಳಿ ಹಿಂದೆ ರಾಜಕೀಯ ಇದೆಯೇ ಎಂಬ ಪ್ರಶ್ನೆಗೆ ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಅವರು ಪ್ರತಿಕ್ರಿಯಿಸಿದರು. ಇದೇ ವೇಳೆ ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಎಂಬ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ಆರೋಪಕ್ಕೆ ಪ್ರತಿಕ್ರಿಯಿಸಿ, ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ ಎಂದು ಕಿಡಿಕಾರಿದರು.

ಬಿಬಿಎಂಪಿಯಿಂದ ಬಿಡುಗಡೆ ಆದ 650 ಕೋಟಿ ರೂ. ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳಿಸುತ್ತಿದ್ದರು ಎಂಬ ಆರೋಪದ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಕೆಂಪಣ್ಣ ಆಂತಕ ಪಡಬೇಕಿಲ್ಲ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ‘ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ. ತನಿಖೆ ಪಕ್ಕಕ್ಕಿಟ್ಟು ಬಿಲ್ ಪಾವತಿ ಮಾಡಲಿ’ ಎಂದು ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಅವರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ಪುಕ್ಕಟೆ ವಿದ್ಯುತ್ ಗಿಮಿಕ್‌ನಿಂದಾಗಿ ರಾಜ್ಯವೇ ಕಗ್ಗತ್ತಲೆಯಲ್ಲಿ ಮುಳುಗದಿರಲಿ!

ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ ಶೇ. 60-70 ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್‌ಟಿ ಕೂಡ ಪಾವತಿ ಮಾಡಬೇಕು. ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಕೆಂಪಣ್ಣ ಸಚಿವರ ವಿರುದ್ಧ ಆರೋಪ ಮಾಡುತ್ತಿಲ್ಲ. ಕೇವಲ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಸರಿಯಾದ ತನಿಖೆ ನಡೆಯುವವರೆಗೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಡಿ.ಕೆ.‌ ಶಿವಕುಮಾರ್ ತಿಳಿಸಿದರು.

ಇದನ್ನೂ ಓದಿ | Bangalore IT Raid : ಅಂಬಿಕಾಪತಿ ಬಳಿ ಸಿಕ್ಕ 42 ಕೋಟಿ ರೂ. ಗುತ್ತಿಗೆದಾರರ ಕಮಿಷನ್‌ ಹಣವೇ?: ಯತ್ನಾಳ್‌ ತರಾಟೆ

ಲೋಡ್ ಶೆಡ್ಡಿಂಗ್ ವಿಚಾರವಾಗಿ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ನಾವು ಅಧಿಕಾದಲ್ಲಿ ಇದ್ದಾಗ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು, ಬಿಜೆಪಿ ಅವರ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಆಗಿದೆ ಎಂಬ ಮಾಹಿತಿ ನನ್ನ ಬಳಿ ಇದೆ. ಮುಖ್ಯಮಂತ್ರಿಗಳ ಸಭೆ ಬಳಿಕ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.

Exit mobile version