NEP 2020 : ರಾಷ್ಟ್ರೀಯ ಶಿಕ್ಷಣ ನೀತಿಗೆ ಕರ್ನಾಟಕದಲ್ಲಿ ಕೊನೇ ಮೊಳೆ? ಬೇಡವೇ ಬೇಡವೆಂದ ತಜ್ಞರು! - Vistara News

ಕರ್ನಾಟಕ

NEP 2020 : ರಾಷ್ಟ್ರೀಯ ಶಿಕ್ಷಣ ನೀತಿಗೆ ಕರ್ನಾಟಕದಲ್ಲಿ ಕೊನೇ ಮೊಳೆ? ಬೇಡವೇ ಬೇಡವೆಂದ ತಜ್ಞರು!

NEP 2020 : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿ 2020ರಿಂದ ಜಾರಿಗೆ ಬಂದಿದೆ. ಈ ಹಿಂದೆ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಇದನ್ನು ಜಾರಿಗೆ ತಂದಿತ್ತು. ಆ ಮೂಲಕ ಇದನ್ನು ಜಾರಿ ಮಾಡಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಶೈಕ್ಷಣಿಕ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗಲಿವೆ ಎಂದು ಹೇಳಲಾಗಿತ್ತು. ಆದರೆ, ಇದನ್ನು ಮೊದಲಿನಿಂದಲೂ ವಿರೋಧ ಮಾಡುತ್ತಾ ಬಂದಿರುವ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ. ಹೀಗಾಗಿ ಈ ನೀತಿಗೆ ಬಹುತೇಕ ಎಳ್ಳುನೀರು ಬಿಡಲಾಗುತ್ತಿದೆ. ಇದಕ್ಕೆ ಶಿಕ್ಷಣ ವಲಯದ ತಜ್ಞರು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

NEP 2020 Madhu bangarappa and PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP 2020) ಕೊನೇ ಮೊಳೆ ಹೊಡೆಯಲು ರಾಜ್ಯ ಸರ್ಕಾರ (Karnataka Government) ಸಿದ್ಧತೆ ನಡೆಸಿದ್ದು, ಈ ನಿರ್ಧಾರಕ್ಕೆ ಶಿಕ್ಷಣ ತಜ್ಞರು (Educational experts) ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೆ, “ರಾಜ್ಯ ಶಿಕ್ಷಣ ನೀತಿ”ಗೆ (SEP) ಮಹತ್ವದ ಸಲಹೆಗಳನ್ನೂ ನೀಡಿದ್ದಾರೆ. ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶವು ನಗರದ ಗಾಂಧಿಭವನದಲ್ಲಿ ಶುಕ್ರವಾರ (ಜು. 28) ನಡೆದಿದ್ದು, ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಸಹ ರಾಜ್ಯದಲ್ಲಿ ಎನ್‌ಇಪಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಗುಡುಗಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ- 2020 (ಎನ್ಇಪಿ- National Education Policy 2020) ಜಾರಿಯಾಗಿ 3 ವರ್ಷಗಳೇ ಉರುಳಿದರೂ ಈ ಕುರಿತ ವಾದ- ವಿವಾದಗಳು ಮಾತ್ರ ಇನ್ನೂ ಮುಂದುವರಿದಿವೆ. ರಾಜ್ಯದಲ್ಲಿ ಎನ್‌ಇಪಿ ನಿಷೇಧ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದ್ದು, ಬಜೆಟ್‌ನಲ್ಲಿ (Karnataka State Budget 2023) ಸಹ ಘೋಷಣೆ ಮಾಡಿದೆ. ಇದರ ಮುಂದುವರಿದ ಭಾಗವಾಗಿ ಮಹತ್ವದ ಬೆಳವಣಿಗೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ಶಿಕ್ಷಣ ತಜ್ಞರು ಅಖಿಲ ಭಾರತ ಶಿಕ್ಷಣ (Education news) ಉಳಿಸಿ ಸಮಿತಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಮಾವೇಶದಲ್ಲಿ ಭಾಗಿಯಾಗಿ ಎನ್‌ಇಪಿ ರದ್ದು ಮಾಡುವುದರ ಜತೆಗೆ ಗುಣಮಟ್ಟದ ಪರ್ಯಾಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

NEP 2020 meeting in bangalore

ಇದನ್ನೂ ಓದಿ:Karnataka Politics : ಸಚಿವರಿಂದ 6 ಪರ್ಸೆಂಟ್ ವರ್ಗಾವಣೆ‌, ಬಾಕಿಯದ್ದು ಸಿಎಂಗೆ: ಸತೀಶ್‌ ಜಾರಕಿಹೊಳಿ

ಸಮಾಜ ಕಲ್ಯಾಣ ಸಚಿವ ಎಚ್‌‌.ಸಿ. ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್‌, ಯುಜಿಸಿ ಮಾಜಿ ಅಧ್ಯಕ್ಷ ಸುಖ್‌ ದೇವ್‌ ತಾರೋಟ್‌ ಸೇರಿ ಹಲವರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಶಿಕ್ಷಣ ತಜ್ಞರ ಅನಿಸಿಕೆ, ಅಭಿಪ್ರಾಯಗಳನ್ನು ಆಲಿಸಿದ ಸಚಿವರು ಎನ್‌ಇಪಿ ರದ್ದು ಮಾಡುವ ಕುರಿತ ತಮ್ಮ ಬದ್ಧತೆಯನ್ನು ಪ್ರದರ್ಶನ ಮಾಡಿದರು. ಅಲ್ಲದೆ ಈ ಕುರಿತು ಪ್ರಕ್ರಿಯೆ ನಡೆಯುತ್ತಿದ್ದು, ನೂತನ ರಾಜ್ಯ ಶಿಕ್ಷಣ ನೀತಿಗೆ ನಿಮ್ಮೆಲ್ಲರ ಸಲಹೆಗಳನ್ನು ಪರಿಗಣಿಸುವ ಭರವಸೆ ನೀಡಿದರು.

ಆಗಸ್ಟ್‌ 2ರ ಬಳಿಕ ಸಿಎಂ ನೇತೃತ್ವದಲ್ಲಿ ಸಭೆ

ಆಗಸ್ಟ್‌ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಹೊರತಾಗಿ ಪ್ರತ್ಯೇಕ ನೀತಿಯನ್ನು ಅಳವಡಿಸಲು ಸಭೆ ಕರೆಯಲಾಗಿತ್ತು. ಆದರೆ, ಸಿಎಂ ದೆಹಲಿಗೆ ಹೋಗಬೇಕಿರುವ ಕಾರಣ ಸಭೆ ಮುಂದಕ್ಕೆ ಹೋಗಿದೆ. ಬಳಿಕ ದಿನಾಂಕ ನಿಗದಿ ಮಾಡಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಹೊರ ದೇಶದ ಶಿಕ್ಷಣ ಸಂಸ್ಥೆಗಳ ಹಿಡಿತದ ಭಯ- ಸುಖ್ ದೇವ್ ತೋರಟ್

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಯುಜಿಸಿ ಮಾಜಿ ಅಧ್ಯಕ್ಷ ಸುಖ್ ದೇವ್ ತೋರಟ್ (Sukhadeo Thorat) ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮಗ್ರವಾಗಿ ಚರ್ಚೆ ಮಾಡದೆ ಅನುಷ್ಠಾನ ಮಾಡಲಾಗುತ್ತಿದೆ. ಹೊರ ದೇಶದ ಶಿಕ್ಷಣ ಸಂಸ್ಥೆಗಳು ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ಹಿಡಿತ ಸಾಧಿಸಲು ಬಿಡಬಾರದು. ಏಕೆಂದರೆ ಮುಂದಿನ ದಿನಗಳಲ್ಲಿ ಅವುಗಳು ಹಿಡಿತಕ್ಕೆ ಸಿಗುವುದಿಲ್ಲ. ವಿಶ್ವ ವಿದ್ಯಾಲಯಗಳ ಬೆಳವಣಿಗೆಗೆ ಬಾಹ್ಯ ರೂಪದಲ್ಲಿ ಹೊರದೇಶಗಳ ಬೆಂಬಲವನ್ನು ಪಡೆದುಕೊಳ್ಳಬೇಕು. ಸದ್ಯ ದೇಶದಿಂದ ಹೆಸರು ಮಾಡಿರುವ ಐಐಟಿ, ಐಐಎಸ್‌ಸಿ (IISC) ಎಲ್ಲವೂ ಸಹ ಇದೇ ಮಾದರಿಯಲ್ಲಿ ಅಭಿವೃದ್ಧಿ ಆಗಿದೆ. ಎನ್‌ಇಪಿ ಅಡಿಯಲ್ಲಿ ಸಂಸ್ಕೃತ ಭಾಷೆಯನ್ನು (Sanskrit language) ಹಿಂದಿಗೆ ಪರ್ಯಾಯವಾಗಿ ಹೇರಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಪ ದೋಷಗಳಿಗೆ ಅವಕಾಶ ನೀಡುವುದಿಲ್ಲ- ಡಾ. ಎಂ.ಸಿ. ಸುಧಾಕರ್

ಎನ್‌ಇಪಿ ಜಾರಿಯಾಗಿ ಈಗಾಗಲೇ 2 ವರ್ಷ ಕಳೆದು ಹೋಗಿದೆ. ನಾವು ಮತ್ತೆ ಯಾವುದೇ ಲೋಪ ದೋಷಗಳಿಗೆ ಅವಕಾಶ ನೀಡುವುದಿಲ್ಲ. ಸಿನಿಮಾ ಬಿಡುಗಡೆ ರೀತಿಯಲ್ಲಿ ನಾವು ಹೊಸ ನೀತಿ ಘೋಷಣೆ ಮಾಡೋಕೆ ಆಗಲ್ಲ. ನಿಮ್ಮೆಲ್ಲ ಸಲಹೆ ಮಾರ್ಗದರ್ಶನ ನಮಗೆ ಬೇಕಾಗಿದೆ. ನಮ್ಮ ಸರ್ಕಾರದ ಬಜೆಟ್‌ನಲ್ಲಿ ಸಹ ಹೊಸ ನೀತಿ ಬಗ್ಗೆ ಭರವಸೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: Tahsildar Transfer : ಕಂದಾಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ; 46 ತಹಸೀಲ್ದಾರ್‌ ವರ್ಗಾವಣೆ

NEP 2020 Meeting Madhu Bangarappa and HC Mahadevappa

ಗುಮಾಸ್ತರಾಗಲು ಅಲ್ಲ ಶಿಕ್ಷಣ- ಎಚ್‌.ಸಿ. ಮಹದೇವಪ್ಪ

ನಾನು ಅಧಿಕಾರದಲ್ಲಿ ಇಲ್ಲದೆ ಇರುವಾಗ ಸಹ ಎನ್‌ಇಪಿಯನ್ನು ವಿರೋಧ ಮಾಡಿದ್ದೇನೆ. ಒಂದು ಶಾಸನ ಜಾರಿ ಆಗಬೇಕಾದರೆ, ಅದು ಜನರಿಗೆ ಎಷ್ಟು ಅನುಕೂಲ ಆಗುತ್ತದೆ ಎಂಬುದು ತಿಳಿದಿರಬೇಕು. ಸುಬ್ರಹ್ಮಣ್ಯನ್ ಹಾಗೂ ಪಟಿಯಾಲಾ ಸಮಿತಿ ವರದಿ ಅನ್ವಯ ದೇಶದಲ್ಲಿ ಶೈಕ್ಷಣಿಕ ಸುಧಾರಣೆ ಆಯಿತು. ಆದರೆ, ಈ ಎನ್‌ಇಪಿ ಕುರಿತಾಗಿ ಯಾವುದೇ ಚರ್ಚೆ ಆಗಿಲ್ಲ. ಸಂಸತ್‌ನಲ್ಲಿ ಇದರ ಪ್ರಸ್ತಾಪವೂ ಆಗಲಿಲ್ಲ. ಜ್ಯೋತಿ ಬಾ ಪುಲೆ ಅವರು ಪ್ರತಿಯೊಬ್ಬರಿಗೂ ಶಿಕ್ಷಣ ನೀಡಲು ಹೋರಾಟ ಮಾಡಿದರು. ನಾವು ಬರೀ ಗುಮಾಸ್ತರಾಗಿ ಕೆಲಸ ಮಾಡೋಕೆ ಶಿಕ್ಷಣ ಪಡೆಯುವುದಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ. ಮಹದೇವಪ್ಪ (Minister HC Mahadevappa) ಕಿಡಿಕಾರಿದ್ದಾರೆ.

ಎನ್‌ಇಪಿ ಜಾರಿ ಇಲ್ಲವೇ ಇಲ್ಲ; ಎಸ್‌ಇಪಿ ನಮ್ಮ ಗುರಿ: ಮಧು ಬಂಗಾರಪ್ಪ

ಈಗಾಗಲೇ ನಾವು ಹೊಸ ಶಿಕ್ಷಣ ನೀತಿ ಬಗ್ಗೆ ತಯಾರಿ ಆರಂಭ ಮಾಡಿದ್ದೇವೆ. ನಮ್ಮ ಸರ್ಕಾರ ಒಂದು ಒಳ್ಳೆಯ ರೀತಿಯಲ್ಲಿ ನೀತಿಯನ್ನು ರೂಪಿಸುತ್ತೇವೆ. ಶಿಕ್ಷಣ ಕ್ಷೇತ್ರದ ಎಲ್ಲ ನುರಿತ ತಜ್ಞರಿಂದ ಸಲಹೆ ಪಡೆದು ಮುಂದೆ ಸಾಗುತ್ತೇವೆ. ನಮಗೆ ಮಕ್ಕಳ ಭವಿಷ್ಯ ತುಂಬಾ ಮುಖ್ಯ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನಮಗೆ ಎಲ್ಲ ರೀತಿಯಿಂದ ಸಹಕಾರ ನೀಡುತ್ತಿದ್ದಾರೆ. ಇಲ್ಲಿ ಸೇರಿರುವ ಎಲ್ಲ ಗಣ್ಯರಿಂದ ಮಾಹಿತಿ ಪಡೆಯುತ್ತೇನೆ. ನನ್ನ ಶಿಕ್ಷಣದ ಬಗ್ಗೆ ತುಂಬಾ ಜನ ಕಮೆಂಟ್ ಮಾಡಿದ್ದಾರೆ. ನನ್ನ ಶಿಕ್ಷಣದ ಬಗ್ಗೆ ಮಾತನಾಡಿದವರಿಗೆ ಒಳ್ಳೆಯದಾಗಲಿ. ಮಕ್ಕಳ ಒಳ್ಳೆಯದಕ್ಕೆ, ಭವಿಷ್ಯಕ್ಕೆ ನಾವು ಏನು ಬೇಕಿದ್ದರೂ ಮಾಡುತ್ತೇವೆ. ಮಕ್ಕಳ ಭವಿಷ್ಯದ ಜೊತೆ ನಮ್ಮ ಸರ್ಕಾರ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Madhu banagaappa and Bhavya Narasihma murthy in NEP 2020 Meeting

ಎನ್‌ಇಪಿಯನ್ನು ನಾವು ಆರಂಭದಿಂದಲೂ ವಿರೋಧಿಸುತ್ತಾ ಬಂದಿದ್ದೇವೆ. ನಾವು ಹೊಸ ಎಸ್‌ಇಪಿ ಬಗ್ಗೆ ಚಿಂತನೆ ಮಾಡುತ್ತೇವೆ. ಎನ್‌ಇಪಿ ರದ್ದು ಮಾಡುವ ಬಗ್ಗೆ ನಾವು ಪ್ರಣಾಳಿಕೆಯಲ್ಲಿಯೇ ಹೇಳಿದ್ದೇವೆ. ತಜ್ಞರ ಸಲಹೆ ಹಾಗೂ ಸೂಚನೆಗಳನ್ನು ಪಡೆಯುತ್ತೇವೆ. ಎರಡು ಕೋಟಿ ಪೋಷಕರಿಗೆ ನಮ್ಮ ಸರ್ಕಾರದಿಂದ ಒಳ್ಳೆಯ ಕೆಲಸ ಆಗುತ್ತಿದೆ. ಪಠ್ಯ ಪುಸ್ತಕ ಪರಿಷ್ಕರಣೆಯೂ ನಮಗೆ ಆರಂಭದಲ್ಲಿ ಇತ್ತು. ಮಕ್ಕಳ ಕೈಗೆ ಪಠ್ಯ ಹೋಗಿರುವುದರಿಂದ ಈ ವರ್ಷ ಸಂಪೂರ್ಣ ಬದಲಾವಣೆ ಮಾಡಲು ಆಗಿಲ್ಲ. ಕೇವಲ ಕೆಲವು ಅಧ್ಯಾಯಗಳನ್ನಷ್ಟೇ ಬದಲಾವಣೆ ಮಾಡಿದ್ದೇವೆ. ನನ್ನ ಮೊದಲ ಸಹಿಯೇ ಪಠ್ಯ ಪರಿಷ್ಕರಣೆ ಆಗಿತ್ತು. ಮುಂದಿನ ವರ್ಷ ಮತ್ತೆ ಪಠ್ಯ ಪರಿಷ್ಕರಣೆ ಮಾಡುತ್ತೇವೆ. ಈಗಾಗಲೇ ರಾಜ್ಯ ಪಠ್ಯಕ್ರಮ ತರಲು ಕೆಲಸ ಶುರುವಾಗಿದೆ. ಪದೇ ಪದೆ ಪಠ್ಯಕ್ರಮ ಬದಲಾವಣೆಯಾಗದಂತೆ ತಜ್ಞರ ಜತೆ ಚರ್ಚಿಸಿ ಕ್ರಮ ವಹಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: Moral policing : ಪೊಲೀಸ್ ಸಿಬ್ಬಂದಿ ಪತ್ನಿ ಮೇಲೆ ಮಾನಭಂಗ ಯತ್ನ, ನೈತಿಕ ಪೊಲೀಸ್ ಗಿರಿ?

ಅಲ್ಲಮ ಪ್ರಭು ಬೆಟ್ಟದೂರು, ಡಾ. ಮೈಕೆಲ್ ವಿಲಿಯಮ್ಸ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳು ಭಾಗಿಯಾಗಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

VISTARANEWS.COM


on

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದ ಮೇರೆಗೆ ಇಂದು ಅಂಚೆ ಮತಗಳ ಮರು ಎಣಿಕೆ ಮಾಡಲಾಯಿತು. ಹಾಲಿ ಮತ್ತು ಮಾಜಿ ಶಾಸಕರ ನಡುವೆ ಮರು ಎಣಿಕೆ ಫೈಟ್ ಜೋರಾಗಿತ್ತು. ಸಾಕಷ್ಟು ಕುತೂಹಲದ ಮಧ್ಯೆ ಇದೀಗ ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್​ ಶಾಸಕ ಟಿ.ಡಿ.ರಾಜೇಗೌಡ ಗೆಲುವು ಸಾಧಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರ ತೀವ್ರ ಕುತೂಹಲ ಮೂಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರು, ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ವಿರುದ್ಧ ಕೇವಲ 201 ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಚಲಾವಣೆಯಾದ 1822 ಅಂಚೆ ಮತಗಳ ಪೈಕಿ 279 ಮತಗಳನ್ನು ತಿರಸ್ಕೃತಗೊಳಿಸಲಾಗಿತ್ತು. ಈ ಫಲಿತಾಂಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜೀವರಾಜ್ ಅವರು ಮರು ಎಣಿಕೆಗೆ ಮನವಿ ಮಾಡಿದ್ದರು.
ಆದರೆ ಅಂದಿನ ಜಿಲ್ಲಾ ಚುನಾವಣಾಧಿಕಾರಿಗಳು ಆ ಮನವಿಯನ್ನು ಪರಿಗಣಿಸದೆ ರಾಜೇಗೌಡರನ್ನು ವಿಜೇತರೆಂದು ಘೋಷಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಇಂದು ಅಂಚೆ ಮತಗಳ ಮರು ಎಣಿಕೆಗೆ ಆದೇಶ ಹೊರಡಿಸಿತ್ತು. ಅದರಂತೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರು ಎಣಿಕೆಯಲ್ಲೂ ಟಿ.ಡಿ.ರಾಜೇಗೌಡ ಅವರು ಜಯಭೇರಿ ಬಾರಿಸಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

Latest

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

VISTARANEWS.COM


on

ಬೆಂಗಳೂರು ನಗರ ಸೇರಿದಂತೆ 18 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ರಾಜ್ಯದ 18 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಇಂದು (ಏಪ್ರಿಲ್ 30) ಹಾಗೂ ನಾಳೆ (ಮೇ 1) ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಧಾರವಾಡ, ಗದಗ, ಕೊಪ್ಪಳ, ಹಾವೇರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಭಾರಿ ಮಳೆಯಾಗುವ ಸಾಧ್ಯತೆಯ ಹಿನ್ನೆಲೆ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Continue Reading
Advertisement
Latest14 hours ago

ಮರು ಮತ ಎಣಿಕೆಯಲ್ಲೂ ಜಯ ಸಾಧಿಸಿದ ಶಾಸಕ ಟಿ.ಡಿ ರಾಜೇಗೌಡ

Latest19 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

Latest20 hours ago

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

Latest2 days ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest3 days ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest3 days ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest3 days ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest3 days ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest3 days ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest3 days ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌