Karnataka Election 2023: ಹಾಸನ ಜೆಡಿಎಸ್‌ ಟಿಕೆಟ್‌ಗಾಗಿ ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಎಚ್.ಕೆ. ಮಹೇಶ್‌ - Vistara News

ಕರ್ನಾಟಕ

Karnataka Election 2023: ಹಾಸನ ಜೆಡಿಎಸ್‌ ಟಿಕೆಟ್‌ಗಾಗಿ ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಎಚ್.ಕೆ. ಮಹೇಶ್‌

Hasana Politics: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದರೂ ಕಳೆದ ಎರಡು ತಿಂಗಳಿನಿಂದ ಗೊಂದಲದಲ್ಲಿರುವ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಗದ್ದಲ ಇನ್ನೂ ಬಗೆಹರಿದಿಲ್ಲ. ಭವಾನಿಗೆ ಟಿಕೆಟ್‌ ಕೊಡದಿದ್ದರೆ ಸ್ವರೂಪ್‌ಗೂ ಬೇಡ ಎಂದಿರುವ ರೇವಣ್ಣ ಹೊಸ ಅಭ್ಯರ್ಥಿಯಾಗಿ ಎಚ್‌.ಕೆ. ಮಹೇಶ್‌ ಹೆಸರನ್ನು ಪ್ರಸ್ತಾಪ ಮಾಡಿದ್ದರು. ಆದರೆ, ಈ ಬಗ್ಗೆ ಸ್ವತಃ ಮಹೇಶ್‌ ಸ್ಪಷ್ಟನೆ ನೀಡಿ ತಮ್ಮನ್ನು ಯಾರೂ ಆಹ್ವಾನಿಸಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

No one has approached me for Hassan JDS ticket HK Mahesh Karnataka Election 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಪ್ರಸಕ್ತ ಸಾಲಿನ ವಿಧಾನಸಭಾ ಚುನಾವಣೆಗೆ (Karnataka Election 2023) ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಗದ್ದಲ ಇನ್ನೂ ಮುಗಿದಿಲ್ಲ. ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಹೋದರ, ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸ್ವರೂಪ್‌ರನ್ನು ಕಣಕ್ಕಿಳಿಸಲು ಎಚ್‌ಡಿಕೆ ಒಲವು ತೋರಿದ್ದರೆ, ಪತ್ನಿ ಭವಾನಿಯೇ ಸ್ಪರ್ಧೆ ಮಾಡಬೇಕೆಂದು ರೇವಣ್ಣ ಪಟ್ಟು ಹಿಡಿದಿದ್ದಾರೆ. ಆದರೆ, ಈ ಗದ್ದಲದ ನಡುವೆ ಈಗ ರೇವಣ್ಣ ಕಾಂಗ್ರೆಸ್ ಮುಖಂಡ ಎಚ್.ಕೆ. ಮಹೇಶ್ ಅವರ ಹೆಸರನ್ನು ಪ್ರಸ್ತಾಪ ಮಾಡಿದ್ದರು ಎಂಬ ಸುದ್ದಿ ಹಬ್ಬಿತ್ತು. ಈಗ ಈ ಬಗ್ಗೆ ಸ್ವತಃ ಎಚ್.ಕೆ. ಮಹೇಶ್‌ ಸ್ಪಷ್ಟನೆ ನೀಡಿದ್ದು, ತಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಹಾಸನ ತಾಲೂಕಿನ ಕಟ್ಟಾಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ನಿಂದ ಸ್ಪರ್ಧೆ ಮಾಡುವ ವಿಚಾರವಾಗಿ ನನ್ನನ್ನು ಈವರೆಗೆ ಯಾರೂ ಸಂಪರ್ಕ ಮಾಡಿಲ್ಲ. ಅವರ ಜತೆ ನನಗೆ ವಿಶ್ವಾಸವಿದೆ. ಪಾರ್ಲಿಮೆಂಟ್ ಚುನಾವಣೆಗೆ ಜತೆಯಲ್ಲಿ ಕೆಲಸ ಮಾಡಿದ್ದೆವು. ಅದನ್ನು ಬಿಟ್ಟರೆ ನಿನ್ನನ್ನು ಚುನಾವಣೆಯಲ್ಲಿ ಅಭ್ಯರ್ಥಿ ಮಾಡುತ್ತೇವೆ ಎಂದು ಅವರು ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ಜತೆಗೆ ನನ್ನನ್ನು ಅಭ್ಯರ್ಥಿ ಮಾಡಿ ಎಂದು ನಾನೂ ಸಹ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಯಾರ ಜತೆಯೂ ಸಂಪರ್ಕದಲ್ಲಿಲ್ಲ. ಖಂಡಿತಾ ಸಂಪರ್ಕವನ್ನೂ ಮಾಡಿಲ್ಲ. ಇನ್ನು ನಾನು ಬೆಂಗಳೂರಿನಲ್ಲಿ ಎಲ್ಲಿ ಭೇಟಿ ಮಾಡುತ್ತೇನೆ. ಖಂಡಿತ ಯಾರ ಬಳಿಯೂ ನಾನು ಏನೂ ಹೇಳಿಲ್ಲ. ಇವತ್ತು ಬೆಳಗ್ಗೆ ನಾನು ತಿಳಿದಂತೆ ಎಲ್ಲರೂ ಕೂಡ ಭವಾನಿ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಕು ಎಂಬ ಆಗ್ರಹ ಆ ಪಕ್ಷದಲ್ಲಿದೆ ಎಂದರು.

ಇದನ್ನೂ ಓದಿ: Karnataka Elections : ಸೆಲ್ಫಿ ವಿತ್‌ ಫಲಾನುಭವಿ; ಮಹಿಳಾ ಮೋರ್ಚಾದಿಂದ ದೇಶಾದ್ಯಂತ ಅಭಿಯಾನ, 1 ಕ್ಷೇತ್ರದಲ್ಲಿ 1000 ಚಿತ್ರ!

ರೇವಣ್ಣ-ಎಚ್‌ಡಿಕೆ ಗುದ್ದಾಟ

ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಭವಾನಿಗೇ ಟಿಕೆಟ್‌ ನೀಡಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರು ಈ ವಿಚಾರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅಲ್ಲದೆ, ನನ್ನ ಕುಟುಂಬಕ್ಕೆ ಟಿಕೆಟ್‌ ಕೊಡದೇ ಇದ್ದರೆ, ಇದಕ್ಕೆ ಅಡ್ಡಗಾಲಾಗಿರುವ ಎಚ್.ಪಿ. ಸ್ವರೂಪ್‌ಗೂ ಬೇಡ ಎಂಬ ವಾದವನ್ನು ಮುಂದಿಟ್ಟಿದ್ದಾರೆ. ಇದಕ್ಕಾಗಿ ಹೊಸ ಅಭ್ಯರ್ಥಿ ಎಚ್.ಕೆ. ಮಹೇಶ್‌ ಅವರ ಹೆಸರನ್ನು ಎಳೆದು ತಂದಿದ್ದಾರೆ. ಇಷ್ಟಾದರೂ ಕೇಳದ ಎಚ್‌.ಡಿ. ಕುಮಾರಸ್ವಾಮಿ, ಹಾಸನದಿಂದ ಸೂಕ್ತ ಅಭ್ಯರ್ಥಿ ಇದ್ದಾರೆ. ಭವಾನಿ ಅವಶ್ಯಕತೆ ಸದ್ಯಕ್ಕೆ ಇಲ್ಲ. ಸ್ವರೂಪ್ ಅವರನ್ನೇ ಕಣಕ್ಕೆ ಇಳಿಸೋಣ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡುವುದಿಲ್ಲ. ಅಲ್ಲದೆ, ಭವಾನಿ ಸೂಚಿಸಿದ್ದ ಕೆ.ಎಂ. ರಾಜೇಗೌಡ ಸಹ ಕಣಕ್ಕಿಳಿಯುವುದು ಬೇಡ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಆದರೆ, ಇದಕ್ಕೆ ಒಪ್ಪದ ರೇವಣ್ಣ ಅವರು ಕುಮಾರಸ್ವಾಮಿಗೆ ಟಕ್ಕರ್ ಕೊಡುವ ಸಂಬಂಧ ಎಚ್‌.ಕೆ. ಮಹೇಶ್‌ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಏಕೆ ಮಹೇಶ್‌ಗೆ ಟಿಕೆಟ್‌?

ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಚ್.ಕೆ. ಮಹೇಶ್‌ಗೆ ರೇವಣ್ಣ ಗಾಳ ಹಾಕಿದ್ದಾರೆ. 2013ರಲ್ಲಿ ಕೇವಲ 4196 ಅಂತರದಲ್ಲಿ ಪರಾಜಯಗೊಂಡಿದ್ದ ಅವರು ಈ ಬಾರಿ ಸ್ಪರ್ಧೆ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿರುವ ರೇವಣ್ಣ, ಸ್ವರೂಪ್‌ಗೆ ಟಿಕೆಟ್ ಬೇಡವೇ ಬೇಡ ಎಂದು ಪಟ್ಟುಹಿಡಿದಿದ್ದಾರೆ.

ಇದನ್ನೂ ಓದಿ: Harsh Summer: ಹೆಚ್ಚಾಗಲಿದೆ ಬಿಸಿಲು, 3 ತಿಂಗಳು ದಾಟದಿರಿ ಮನೆಯ ಹೊಸ್ತಿಲು; ಹವಾಮಾನ ವರದಿ ಇಲ್ಲಿದೆ

ಎಚ್.ಕೆ. ಮಹೇಶ್‌ಗೆ ಟಿಕೆಟ್ ಕೊಟ್ಟರೆ ಎರಡು ಬಾರಿ ಸೋತಿರುವ ಸಿಂಪತಿ ವರ್ಕೌಟ್ ಆಗಲಿದೆ. ಹಾಲಿ ಶಾಸಕ ಪ್ರೀತಂಗೌಡ ವಿರುದ್ಧ ಕಣಕ್ಕಿಳಿಯಲು ಬಲಿಷ್ಠ ಅಭ್ಯರ್ಥಿ ಸಿಕ್ಕಂತೆ ಆಗುತ್ತದೆ ಎಂದು ಹೇಳಿರುವ ರೇವಣ್ಣ, ತಮ್ಮನ್ನು ಎದುರು ಹಾಕಿಕೊಂಡು ಟಿಕೆಟ್ ಪಡೆಯಲು ಮುಂದಾಗಿರುವ ಸ್ವರೂಪ್‌ಗೆ ಟಿಕೆಟ್ ತಪ್ಪಿಸುವ ಲೆಕ್ಕಾಚಾರವನ್ನು ಹೊಂದಿದ್ದಾರೆ ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Assault Case: ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

VISTARANEWS.COM


on

assault case bjp worker
Koo

ಮಂಗಳೂರು: ಬಿಜೆಪಿ ಕಾರ್ಯಕರ್ತನೊಬ್ಬ (BJP Worker) ಬಟ್ಟೆ ಅಂಗಡಿಗೆ ನುಗ್ಗಿ ವಿವಾಹಿತ ಮಹಿಳೆ (Married Woman) ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕೃತ್ಯ ನಡೆದಿದೆ. ಬಿಜೆಪಿ ಕಾರ್ಯಕರ್ತ, ಹೂವಿನ ವ್ಯಾಪಾರಿ ನವೀನ್ ಕನ್ಯಾಡಿ ಎಂಬಾತನಿಂದ ಈ ಕೃತ್ಯ ನಡೆದಿದೆ.

ಹಲ್ಲೆಗೊಳಗಾದ ಮಹಿಳೆ ಧರ್ಮಸ್ಥಳದ ರೂಪಾ ಎಂಬವರು. ಇವರು ಉಜಿರೆಯಲ್ಲಿ ಬಟ್ಟೆ ಅಂಗಡಿ ಹೊಂದಿದ್ದಾರೆ. ಇವರು ನವೀನ್‌ಗೆ 7 ಲಕ್ಷ ರೂಪಾಯಿ ಸಾಲ ನೀಡಿದ್ದರು. ಅದನ್ನು ವಾಪಸ್ ಕೇಳಿದ್ದಕ್ಕೆ ನವೀನ್‌ ಹಲ್ಲೆ ನಡೆಸಿದ್ದಾನೆ. ಕಳೆದ ಎರಡು ದಿನದ ಹಿಂದೆ ಉಜಿರೆಯಲ್ಲಿರುವ ಮಹಿಳೆಯ ಬಟ್ಟೆ ಅಂಗಡಿಯಲ್ಲಿ ಘಟನೆ ನಡೆದಿದೆ.

ಮಹಿಳೆಯ ಕಪಾಳಕ್ಕೆ ಹೊಡೆಯುವುದು ಸೇರಿ ಇತರೆಡೆ ಮಾರಣಾಂತಿಕ ಹಲ್ಲೆಯನ್ನು ನವೀನ್ ಕನ್ಯಾಡಿ ಮಾಡಿದ್ದಾನೆ. ಹಲ್ಲೆಗೊಳಗಾದ ಮಹಿಳೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಮಾಡುವ ದೃಶ್ಯ ಅಂಗಡಿಯ ಸಿಸಿಕ್ಯಾಮರದಲ್ಲಿ ಸೆರೆಯಾಗಿದೆ. ಬೆಳ್ತಂಗಡಿ ಪೊಲೀಸರಿಂದ ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ!

ಬೆಂಗಳೂರು: ಇಂದು ಮಾಡಿದ ತಪ್ಪಿನ ಶಿಕ್ಷೆ ಮುಂದಿನ ಜನ್ಮದಲ್ಲಿ ಸಿಗುತ್ತದೆ ಎಂದು ನಮ್ಮ ಹಿರಿಯರು ಹೇಳುತ್ತಾರೆ. ಆದರೆ ಅದು ಸುಳ್ಳು, ಇಂದು ಮಾಡಿದ ತಪ್ಪಿಗೆ ಶಿಕ್ಷೆ ಇದೇ ಕಾಲದಲ್ಲಿ ಸಿಗುತ್ತದೆ. ಆದರೆ ಕೆಲವರಿಗೆ ತಡವಾಗಿ ಸಿಕ್ಕರೆ, ಕೆಲವರಿಗೆ ಅಂದೇ ಸಿಗುತ್ತದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಕಳ್ಳನೊಬ್ಬ ಮಹಿಳೆಯೊಬ್ಬರ ಮೊಬೈಲ್ ಕದ್ದು ಓಡುತ್ತಿದ್ದಾಗ ಕಾರಿಗೆ ಡಿಕ್ಕಿ ಹೊಡೆದು ಸಾವನಪ್ಪಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ (Viral Video )ಆಗಿದೆ.

ಈ ವಿಡಿಯೊವನ್ನು @Desam_officialz ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದು ‘ಇದು ಭೂಮಿಯ ಮೇಲೆ ದೇವರ ತಕ್ಷಣದ ತೀರ್ಪು. ದೇವರು ಕರುಣೆ ತೋರಲಿ’ ಎಂದು ಬರೆದಿದ್ದಾರೆ. ಈ ವಿಡಿಯೊದಲ್ಲಿ ಕಳ್ಳ ಮಹಿಳೆಯಿಂದ ಕದ್ದ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ತಪ್ಪಿಸಿಕೊಳ್ಳಲು ಜೋರಾಗಿ ಓಡುತ್ತಾ ರಸ್ತೆ ದಾಟುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಕಾರೊಂದು ಆತನಿಗೆ ಡಿಕ್ಕಿ ಹೊಡೆದಿದೆ.

ಇದರ ಪರಿಣಾಮ ಆತ ಹಾರಿ ಹೋಗಿ ತುಂಬಾ ದೂರ ರಸ್ತೆಯ ಮೇಲೆ ಬಿದ್ದಿದ್ದಾನೆ. ಆದರೆ ಕಾರು ತನ್ನ ವೇಗವನ್ನು ನಿಯಂತ್ರಿಸಲಾಗದೆ ಕೆಳಗೆ ಬಿದ್ದ ಆತನ ಮೆಲೆ ಹರಿದು ನಂತರ ನಿಂತಿದೆ. ಇದರಿಂದ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ.
ಈ ಘಟನೆ ನಡೆದ ಸ್ಥಳ ಮತ್ತು ದಿನಾಂಕ ತಿಳಿದುಬಂದಿಲ್ಲ. ಆದರೆ ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅನೇಕರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವರು ಇದು ದೇವರ ತೀರ್ಪು ಎಂದು ಹೇಳಿದರೆ. ಕೆಲವರು ‘ಬಡವರ ವಿಷಯದಲ್ಲಿ ದೇವರು ತಕ್ಷಣ ತೀರ್ಪುಗಳನ್ನು ನೀಡುತ್ತಾನೆ? ಆದರೆ ಶ್ರೀಮಂತರು ಮತ್ತು ಶಕ್ತಿವಂತರಿಗೆ ಏಕೆ ದೇವರು ತಕ್ಷಣದ ತೀರ್ಪುಗಳನ್ನು ನೀಡುತ್ತಿಲ್ಲ? ಪ್ರತಿದಿನ ಇಂತಹ ಲಕ್ಷಾಂತರ ದರೋಡೆಗಳು, ರಸ್ತೆಗಳಲ್ಲಿ ಕೊಲೆಗಳು ನಡೆಯುತ್ತಿವೆ, ಯಾವುದೇ ತಕ್ಷಣದ ತೀರ್ಪುಗಳನ್ನು ನೋಡಿಲ್ಲ, ಏಕೆ? ಎಂದು ಪ್ರಶ್ನಿಸಿದ್ದಾರೆ.

ಸೆಪ್ಟೆಂಬರ್ 2023 ರಲ್ಲಿ ಗುಜರಾತ್‌ ನಲ್ಲಿಯೂ ಇಂತಹದ್ದೇ ಒಂದು ಘಟನೆ ನಡೆದಿತ್ತು. ಗುಜರಾತ್‌ನ ಮೊದಸಾದಲ್ಲಿ ಶೋರೂಂನಿಂದ ಕದಿಯಲು ಪ್ರಯತ್ನಿಸುತ್ತಿದ್ದ ಕಳ್ಳನಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಈ ಘಟನೆಯು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ: ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

Continue Reading

ಕರ್ನಾಟಕ

Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Dengue Fever: ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಣ್ಣೂರು ಗ್ರಾಮದ 6 ವರ್ಷದ ಮಗುವಿಗೆ ಡೆಂಗ್ಯೂ ದೃಢಪಟ್ಟಿದೆ. ಸದ್ಯ ಬೆಂಗಳೂರಿನ ಜೆಮ್ಸ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.

VISTARANEWS.COM


on

Dengue Fever
Koo

ರಾಯಚೂರು: ಜಿಲ್ಲೆಯಲ್ಲಿ 6 ವರ್ಷದ ಮಗುವಿನಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಸಿಂಧನೂರು ತಾಲೂಕಿನ ಕಣ್ಣೂರು ಗ್ರಾಮದ 6 ವರ್ಷದ ಸಾಕ್ಷಿ ಎಂಬ ಮಗುವಿನಲ್ಲಿ ಡೆಂಗ್ಯೂ ಜ್ವರದ (Dengue Fever) ಲಕ್ಷಣ ಕಂಡುಬಂದಿದ್ದು, ಮಗುವಿನ ರಕ್ತದ ಮಾದರಿ ಸಂಗ್ರಹ ಮಾಡಿದ್ದು, ಸದ್ಯ ಬೆಂಗಳೂರಿನ ಜೆಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಗುವಿಗೆ ಡೆಂಗ್ಯೂ ದೃಢವಾದ ಹಿನ್ನೆಲೆಯಲ್ಲಿ ಕಣ್ಣೂರು ಗ್ರಾಮಕ್ಕೆ ವೈದ್ಯರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಜನವರಿಯಿಂದ ಈವರೆಗೆ ಜಿಲ್ಲೆಯಲ್ಲಿ 36 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಈವರೆಗೂ ಜಿಲ್ಲೆಯಲ್ಲಿ 1060 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ 142 ಡೆಂಗ್ಯೂ ಪ್ರಕರಣಗಳು ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ದಿನೇದಿನೆ ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರುತ್ತಿದೆ. ಜಿಲ್ಲೆಯಲ್ಲಿ 1904 ಪ್ರಕರಣಗಳು ಗುರುತಿಸಲಾಗಿತ್ತು. ಇದೀಗ 1380 ಮಂದಿಗೆ ಟೆಸ್ಟ್ ಮಾಡಿದಾಗ ಮತ್ತೆ 142 ಮಂದಿಗೆ ಡೆಂಗ್ಯೂ ದೃಢಪಟ್ಟಿದೆ. ರೋಗಿಗಳಿಗೆ ಜಿಲ್ಲೆ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈವರೆಗೆ ಯಾವುದೇ ಸಾವು ದಾಖಲಾಗಿಲ್ಲ.

ಇದನ್ನೂ ಓದಿ | International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

ಇನ್ನು ಕಳೆದ ಬಾರಿಗಿಂತ ಈ ಬಾರಿ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಅಧಿಕವಾಗಿವೆ. ಡೆಂಗ್ಯೂ ಪ್ರಕರಣ ಪತ್ತೆಗೆ ಪ್ರಾಥಮಿಕ, ತಾಲೂಕು, ಜಿಲ್ಲಾ ಅರೋಗ್ಯ ಕೇಂದ್ರಗಳ ಮಟ್ಟದಲ್ಲಿ ತಂಡ ರಚನೆ ಮಾಡಲಾಗಿದ್ದು, ಮನೆ ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಲಾರ್ವಾ ಸಮೀಕ್ಷೆ ಮಾಡಿ ಶುಚಿತ್ವದ ಕುರಿತು ತಿಳುವಳಿಕೆ ನೀಡುತ್ತಿದ್ದಾರೆ.

ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Dengue Fever

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ (Dengue Fever) ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸಾನಿಯಾ (6) ಮೃತ ದುರ್ದೈವಿ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.

ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಆಸಿಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಹಾಗೂ ಸರ್ಕಾರಕ್ಕೆ ಛೀಮಾರಿ ಹಾಕಿದರು.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

Continue Reading

ಮಳೆ

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

Karnataka Weather Forecast : ಮುಂಗಾರು ಮಳೆ ಅವಾಂತರವನ್ನೇ ಸೃಷ್ಟಿಸಿದ್ದು, ಚಿಕ್ಕಮಗಳೂರಲ್ಲಿ ಸ್ಕಿಡ್‌ ಆಗಿ ಕಾರೊಂದು ಹೇಮಾವತಿ ನದಿಗೆ ಹಾರಿದೆ. ಭಾನುವಾರವೂ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನಲ್ಲಿ ಗಾಳಿ-ಮಳೆ (karnataka Weather Forecast) ಅಬ್ಬರ ಮುಂದುವರಿದಿದ್ದು, ಹೇಮಾವತಿ ನದಿಗೆ ಮತ್ತೊಂದು ಕಾರು ಬಿದ್ದಿದೆ. ಭಾರಿ ಮಳೆಯಿಂದ (Rain News) ಚಾಲಕನ ನಿಯಂತ್ರಣ ತಪ್ಪಿ ನದಿಗೆ ಹಾರಿದೆ. ನಿನ್ನೆ ಶುಕ್ರವಾರ ಕೂಡ ಇದೇ ಜಾಗದಲ್ಲಿ, ಇದೇ ಶೈಲಿಯಲ್ಲಿ ಕಾರು ಬಿದ್ದಿತ್ತು. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳೀಯ ಸಹಾಯದಿಂದ ಕಾರನ್ನು ಮೇಲೆ ಎತ್ತಲಾಗಿದೆ.

ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿತ್ತು. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿತ್ತು. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೆರಡು ಅಪಘಾತ ಸಂಭವಿಸಿದೆ.

ಇದನ್ನೂ ಓದಿ: Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

ಕರಾವಳಿಯಲ್ಲಿ ವಿಪರೀತ ಮಳೆ

ಜೂನ್‌ 30ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.‌ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ

ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಕ್ರಮವಾಗಿ 30-21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Road Accident: ಮುಧೋಳ ಬಳಿ ಶಾಲಾ ಬಸ್‌ ಹರಿದು 4 ವರ್ಷದ ಬಾಲಕ ಸಾವು

Road Accident: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಅಪಘಾತ ನಡೆದಿದೆ. ಶಾಲೆಗೆ ಹೋಗಬೇಕಿದ್ದ ಪುಟ್ಟ ಕಂದಮ್ಮ, ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ ದುರಂತ ಸಾವು ಕಂಡಿದೆ.

VISTARANEWS.COM


on

Road Accident
Koo

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಕ್ರಾಸ್ ಬಳಿ ಶಾಲಾ ವಾಹನ ಹರಿದು 4 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಶಾಲೆಗೆ ಹೋಗಬೇಕಿದ್ದ ಪುಟ್ಟ ಕಂದಮ್ಮ, ಶಾಲಾ ಬಸ್‌ ಚಕ್ರಕ್ಕೆ ಸಿಲುಕಿ ದುರಂತ ಸಾವು ಕಂಡಿದೆ. ಸಂಗಪ್ಪ ಹೊಸೂರ್ ಎಂಬುವವರ ಪುತ್ರ ಅಭಿನಂದನ್ ಹೊಸೂರ್ (4) ಮೃತ ಬಾಲಕ.

ಶಾಲಾ ವಾಹನ ಹರಿದು ತಲೆಗೆ ಗಂಭೀರ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿದ್ದರಿಂದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ | Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

ರಾಜಹಂಸ-ಐರಾವತ ಬಸ್ ಡಿಕ್ಕಿ; ಅಪಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಟೆಂಪೋ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿಘಾಟ್ ಶನಿವಾರ ಸರಣಿ ಅಪಘಾತ ನಡೆದಿದೆ. ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಈ ವೇಳೆ ಅಪಘಾತ ತಪ್ಪಿಸಲು ಹೋಗಿ ಟೆಂಪೋ ಚರಂಡಿಗೆ ಬಿದ್ದಿದೆ. ಹೀಗಾಗಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದಾರೆ. ಅಪಘಾತದಿಂದ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ಬಸ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

ಹೇಮಾವತಿ ನದಿಗೆ ಬಿದ್ದ ಮತ್ತೊಂದು ಕಾರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಗಾಳಿ-ಮಳೆ ಅಬ್ಬರ ಮುಂದುವರಿದಿದ್ದು, ಈ ನಡುವೆ ಹೇಮಾವತಿ ನದಿಗೆ ಶನಿವಾರ ಮತ್ತೊಂದು ಕಾರು ಬಿದ್ದಿದೆ. ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಆಲ್ಟೋ ಕಾರು ನದಿಗೆ ಬಿದ್ದಿದೆ. ನೆನ್ನೆ ಅದೇ ಜಾಗದಲ್ಲಿ ಅದೇ ಶೈಲಿಯಲ್ಲಿ ಸ್ವಿಫ್ಟ್ ಕಾರು ಬಿದ್ದಿತ್ತು.

ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ತಂಗಡಿಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆ ಹಾರಿ ನದಿಗೆ ಬಿದ್ದಿದೆ.

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ

Road Accident

ಮಂಡ್ಯ: ಶನಿವಾರ ಒಂದೇ ದಿನ ಹಲವೆಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದೆ. ಮಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಿಂದ ಡಿವೈಡರ್ ದಾಟಿ ಸರ್ವಿಸ್ ರಸ್ತೆಯ ಹಳ್ಳಕ್ಕೆ ಉರುಳಿದ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್‌ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್‌ ವೇಗವಾಗಿ ಬಂದು ನೋಡನೋಡುತ್ತಿದ್ದಂತೆ ರಸ್ತೆ ಮಧ್ಯದಲ್ಲಿದ್ದ ಡಿವೈಡರ್ ಮೇಲೆ ಹತ್ತಿದೆ. ಬಳಿಕ ಸರ್ವಿಸ್ ರಸ್ತೆಗೆ ಬಂದು ಹಳ್ಳಕ್ಕೆ ಬಿದ್ದಿದೆ. ಬಿದ್ದ ರಭಸಕ್ಕೆ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ.

Vinay Kulkarni: ವಿನಯ್‌ ಕುಲಕರ್ಣಿಗೆ ಧಾರವಾಡ ಜಿಲ್ಲೆ ಪ್ರವೇಶ ಮತ್ತೆ ನಿರಾಕರಿಸಿದ ಕೋರ್ಟ್‌

ಗಂಭೀರವಾಗಿ ಗಾಯಗೊಂಡವರನ್ನು ಮಂಡ್ಯ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಣ್ಣ-ಪುಟ್ಟ ಗಾಯಗೊಂಡವರು ಬೇರೆ ಬಸ್‌ ಮುಖಾಂತರ ತೆರಳಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Rohit Sharma
ಪ್ರಮುಖ ಸುದ್ದಿ48 seconds ago

Rohit Sharma : ಒಂದು ಸಿಕ್ಸರ್ ಬಾರಿಸಿದರೆ ಕೊಹ್ಲಿಯ ದಾಖಲೆ ಮುರಿಯುತ್ತಾರೆ ರೋಹಿತ್​ ಶರ್ಮಾ

Shirt Dress Fashion
ಫ್ಯಾಷನ್22 mins ago

Shirt Dress Fashion: ಶರ್ಟ್ ಡ್ರೆಸ್‌ ನ್ಯೂ ಲುಕ್‌ಗೆ 3 ಸಿಂಪಲ್‌ ಐಡಿಯಾ

assault case bjp worker
ಕ್ರೈಂ28 mins ago

Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

T20 World cup
ಪ್ರಮುಖ ಸುದ್ದಿ29 mins ago

T20 World Cup 2024 : ಭಾರತ ತಂಡವೇ ವಿಶ್ವ ಕಪ್​​ ಗೆಲ್ಲುತ್ತದೆ; ಕುಲ್ದೀಪ್​ ಯಾದವ್ ಬಾಲ್ಯದ ಕೋಚ್​ ವಿಶ್ವಾಸ

Arvind Kejriwal
ಪ್ರಮುಖ ಸುದ್ದಿ38 mins ago

Arvind Kejriwal: ಅರವಿಂದ ಕೇಜ್ರಿವಾಲ್‌ ಬಿಡುಗಡೆ ಕನಸು ಭಗ್ನ; ಮತ್ತೆ 14 ದಿನ ನ್ಯಾಯಾಂಗ ಬಂಧನ

Dengue Fever
ಕರ್ನಾಟಕ49 mins ago

Dengue Fever: ರಾಯಚೂರಲ್ಲಿ 6 ವರ್ಷದ ಮಗುವಿಗೆ ಡೆಂಗ್ಯೂ; ದಾವಣಗೆರೆ ಜಿಲ್ಲೆಯಲ್ಲಿ 142 ಪ್ರಕರಣಗಳು ಪತ್ತೆ!

Arshdeep Singh
ಕ್ರೀಡೆ55 mins ago

Arshdeep Singh : ಫೈನಲ್​ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ಗೆ ಇದೆ ದಾಖಲೆ ಬರೆಯುವ ಅವಕಾಶ

International Mud Day
ಫ್ಯಾಷನ್1 hour ago

International Mud Day: ಆರೋಗ್ಯ, ಸೌಂದರ್ಯದ ಪಾಲಿಗೆ ಹೊನ್ನು ಈ ಮಣ್ಣು!

Physical relationship
ವಿದೇಶ1 hour ago

Physical relationship: ಕೈದಿ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ್ದ ಮಹಿಳಾ ಜೈಲಾಧಿಕಾರಿ ಬಗ್ಗೆ ಶಾಕಿಂಗ್‌ ವಿಚಾರ ಬಯಲು

Actor Darshan does not need counseling says by shamitha malnad
ಸ್ಯಾಂಡಲ್ ವುಡ್1 hour ago

Actor Darshan: ದಚ್ಚು ಪರಿಸ್ಥಿತಿಗೆ ಪವಿತ್ರಾ ಕಾರಣ ಅನ್ನೋಕಾಗಲ್ಲ; ದರ್ಶನ್‌ಗೆ ಕೌನ್ಸೆಲಿಂಗ್‌ ಅಗತ್ಯ ಇಲ್ಲ ಎಂದ ಖ್ಯಾತ ಗಾಯಕಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ8 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ1 day ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

ಟ್ರೆಂಡಿಂಗ್‌