ಉಡುಪಿ: ನಮ್ಮ ಹೆಣ್ಣು ಮಕ್ಕಳನ್ನು ರಕ್ಷಿಸುವ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ಇಲ್ಲಿ ಎಲ್ಲರೂ ಒಂದಾಗಿರಬೇಕು. ಹಿಂದೂಗಳನ್ನು ಆಪತ್ತಿನಿಂದ ರಕ್ಷಿಸಲು ಹಿಂದೂ ಸಂಘಟನೆಗಳೇ ಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ (Gururaj Gantihole) ಹೇಳಿದರು.
ಇಲ್ಲಿನ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ (Nethrajyothi Paramedical College) ನಡೆದ ಘಟನೆಯನ್ನು ಖಂಡಿಸಿ ಉಡುಪಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೇರಳದಲ್ಲಿ ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಕಾರ್ಯಕರ್ತರನ್ನು ರಕ್ಷಿಸುವುದು ಕೂಡ ಹಿಂದೂ ಸಂಘಟನೆಗಳ ಕಾರ್ಯಕರ್ತರು. ಮುಂದಿನ ತಲೆಮಾರಿನ ಹಿಂದೂಗಳಿಗೆ ಭಾರಿ ಅಪಾಯ ಇದೆ. ಹಾಗಾಗಿ ನಾವು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದರು.