ನವದೆಹಲಿ: ತಮಿಳುನಾಡು, ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ನಂತರ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಹೇಚ್ಚಾಗಬಹುದು ಎಂಬ ಮಾಧ್ಯಮಗಳ ವರದಿಗಳನ್ನು ಕೇಂದ್ರ ಸರ್ಕಾರ ನಿರಾಕರಿಸಿದೆ.
ಈ ಸಂಬಂಧ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ X ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ಸ್ಪಷ್ಟೀಕರಣ ನೀಡಿದೆ.
ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳನ್ನು ಹೆಚ್ಚಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಐದು ರಾಜ್ಯಗಳ ಪೈಕಿ ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾನ ನಡೆಯುತ್ತಿದ್ದು, ಏಪ್ರಿಲ್ 29 ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಏಪ್ರಿಲ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಂತರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಯಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಕೇಂದ್ರದ ಈ ಸ್ಪಷ್ಟನೆ ವಾಹನ ಸವಾರರೂ ಸೇರಿದಂತೆ ದೇಶದ ಜನತೆ ನಿಟ್ಟುಸಿರು ಬಿಡುವಂತಾಗಿದೆ.

