ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ! ಸಂಪುಟ ಸಭೆಯಲ್ಲಿ ಚರ್ಚೆಯೇ ಆಗಿಲ್ಲ - Vistara News

ಕರ್ನಾಟಕ

ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ! ಸಂಪುಟ ಸಭೆಯಲ್ಲಿ ಚರ್ಚೆಯೇ ಆಗಿಲ್ಲ

Tipu Jayanti: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.

VISTARANEWS.COM


on

No Tipu jayanti celebration by government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದವತಿಯಿಂದ ಟಿಪ್ಪು ಜಯಂತಿ (Tipu Jayanti) ಆಚರಿಸುವ ಸಂಬಂಧ ಯಾವುದೇ ಚರ್ಚೆಯಾಗಿಲ್ಲ (No Discussion in Cabinet Meeting) ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ (Minister H K Patil) ಅವರು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.

ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿತ್ತು. 2019ರಲ್ಲಿ ಆಚರಣೆಯ ಆದೇಶವನ್ನು ವಾಪಸ್ ಪಡೆಯಲಾಗಿತ್ತು. ಬಳಿಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಈ ಆದೇಶವನ್ನು ರದ್ದುಗೊಳಿಸಿಲ್ಲ. ಹಾಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ಸ್ಪಷ್ಟಪಡಿಸಿದ್ದಾರೆ.

2013ರಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಾಗ ವ್ಯಾಪಕ ವಿರೋಧದ ಮಧ್ಯೆಯೇ ಟಿಪ್ಪು ಜಯಂತಿ ಆಚರಣೆಯನ್ನು ಸರ್ಕಾರದ ವತಿಯಿಂದಲೇ ಆಚರಿಸಲು ಶುರು ಮಾಡಲಾಯಿತು. ಆದರೆ, 2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಆಚರಣೆ ಆದೇಶವನ್ನು ವಾಪಸ್ ಪಡೆದುಕೊಂಡಿತ್ತು. 2023ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಆ ಬಗ್ಗೆ ಯಾವುದೇ ನಿರ್ಧಾರವನ್ನು ಮಾಡಿಲ್ಲ. ಈಗ ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿಪ್ಪು ಜಯಂತಿ ಕುರಿತು ಚರ್ಚೆ ನಡೆದಿಲ್ಲ.

ಈ ಮಧ್ಯೆ, ಟಿಪ್ಪು ಜಯಂತಿಯ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತವು ಈ ಕ್ರಮವನ್ನು ಕೈಗೊಂಡಿದೆ ಎಂದು ತಾಲೂಕು ಆಡಳಿತವು ತಿಳಿಸಿದೆ.

ಕ್ಯಾಬಿನೆಟ್ ನಿರ್ಣಯಗಳು

  • ಕನಕಪುರ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು 10.38 ಕೋಟಿ ರೂ. ಅನುಮೋದನೆ
  • ಇನ್ಫೋಸಿಸ್ ಕಂಪನಿ ವತಿಯಿಂದ ಸಿಎಸ್ಆರ್ ಫಂಡ್ ನಿಂದ ನಿರ್ಮಿಸಿರುವ ಕನಕಪುರದ ತಾಯಿ ಆಸ್ಪತ್ರೆ
  • ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ – 2023 ನಿಯಮಗಳಿಗೆ ತಿದ್ದುಪಡಿಗೆ ಕ್ಯಾಬಿನೇಟ್ ಒಪ್ಪಿಗೆ
  • ಪೋಷಣ್ ಅಭಿಯಾನಕ್ಕೆ ೨೬.೬೦ ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳ ಖರೀದಿ.
  • ಗ್ರೋತ್ ಮಾನಿಟರಿಂಗ್ ಡಿವೈಸಸ್ ಖರೀದಿಗೆ ಅನುಮೋದನೆ

ಈ ಸುದ್ದಿಯನ್ನೂ ಓದಿ: Kannada and Culture Dept: ರಾಜ್ಯ ಸರ್ಕಾರದಿಂದ 31 ಜಯಂತಿ ಆಚರಣೆ ವೇಳಾಪಟ್ಟಿ, ಟಿಪ್ಪು ಜಯಂತಿ ಇಲ್ಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Petrol Diesel Price: ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಚುನಾವಣೆ ಮುಗಿದ ಕಾರಣ ಬೆಲೆಯೇರಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Petrol Diesel Price
Koo

ಬೆಂಗಳೂರು: ರಾಜ್ಯದ ಜನರಿಗೆ ಐದು ಉಚಿತ ಗ್ಯಾರಂಟಿಗಳನ್ನು ನೀಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಮದ್ಯದ ಬೆಲೆ ಹಾಗೂ ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಿಸಿ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಿತ್ತು. ಈಗ ರಾಜ್ಯದ ಜನರಿಗೆ ಮತ್ತೊಂದು ಬೆಲೆಯೇರಿಕೆಯ ಬರೆಯನ್ನು ಕರ್ನಾಟಕ ಸರ್ಕಾರ ಎಳೆದಿದೆ. ಹೌದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ (Petrol Diesel Price) ಮಾಡಿ ರಾಜ್ಯ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಬೇಕಾದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಲಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ.

Rs 8 to 10 price cut in Petrol and Diesel, PM Modi to announce on year end

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆ ಏರಿಕೆ ಕುರಿತು ಕಳೆದ ಮಾರ್ಚ್‌ನಲ್ಲಿಯೇ ಆರ್ಥಿಕ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಬೆಲೆಯೇರಿಕೆ ಮಾಡಿದರೆ ರಾಜ್ಯ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಾರೆ, ಮತಗಳು ಸಿಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಕಡತ ವಾಪಸ್‌ ಕಳುಹಿಸಿದ್ದರು. ಈಗ ಮತ್ತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆತೀಕ್‌ ಅವರು ಸಿದ್ದರಾಮಯ್ಯ ಅವರ ಎದುರು ಕಡತ ಮುಂದಿರಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಅಂಕಿತ ಹಾಕಿದ್ದಾರೆ.

ಸಿದ್ದರಾಮಯ್ಯ ಅವರು ಸಹಿ ಹಾಕಿದ ಮರುದಿನವೇ ಅಂದರೆ, ಜೂನ್‌ 15ರಂದು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲಾಗಿದೆ. ಇದರಿಂದಾಗಿ ತಕ್ಷಣದಿಂದಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆ ಆಗಿದೆ. ಮದ್ಯದ ಬೆಲೆಯೇರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರವು ಖಜಾನೆಗೆ ಹಣ ತುಂಬಿಸಿಕೊಳ್ಳುತ್ತಿದೆ. ಆಸ್ತಿ ನೋಂದಣಿ ಶುಲ್ಕವನ್ನೂ ಏರಿಕೆ ಮಾಡಿದೆ. ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ

ಇದನ್ನೂ ಓದಿ: Modi 3.0: ಶೀಘ್ರ ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್‌, ಡೀಸೆಲ್‌? ಕೇಂದ್ರ ಸಚಿವರು ಹೇಳಿದ್ದೇನು?

Continue Reading

ಉತ್ತರ ಕನ್ನಡ

Self Harming : ಪೊಲೀಸ್‌ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Self harming : ವಿನಾಕಾರಣ‌ ತನಗೆ ಪೊಲೀಸರು ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ವ್ಯಕ್ತಿಯೊಬ್ಬ ಠಾಣೆ ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

VISTARANEWS.COM


on

By

Self harming
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಮೃತ ದುರ್ದೈವಿ.

ಈ ಹಿಂದೆ‌‌ ಜೂಜಾಟ ಪ್ರಕರಣ‌ ಸಂಬಂಧ ಭಾಸ್ಕರ್ ಮೇಲೆ ಪ್ರಕರಣ ದಾಖಲು ಮಾಡಲಾಗಿತ್ತು. ಈ ನಡುವೆ ಕಳೆದ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದ. ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದರು.

ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಬೆಂಕಿ ನಂದಿಸಿ ಗಂಭೀರವಾದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇನ್ನೂ ಆಸ್ಪತ್ರೆಗೆ ಹೋಗುವಾಗ ವಿಡಿಯೋ ಮಾಡಿ‌ ಪೊಲೀಸ್ ಕಿರುಕುಳ ಬಗ್ಗೆ ತಿಳಿಸಿದ್ದ. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಭಾಸ್ಕರ್‌ ಶನಿವಾರ ಮೃತಪಟ್ಟಿದ್ದಾರೆ.

ಕೊಪ್ಪಳದಲ್ಲಿ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು

ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ್ ಚನ್ನಪ್ಪ ಬಂಡಾರಿ (50) ಮೃತ ದುರ್ದೈವಿ. ಲೈನ್‌ಮ್ಯಾನ್‌ವೊಬ್ಬ ವಿದ್ಯುತ್ ದುರಸ್ಥಿಗಾಗಿ ಕಲಬುರಗಿ ತಾಲೂಕಿನ ಲಿಂಗನಬಂಡಿ ಗ್ರಾಮದ ನಿವಾಸಿಯಾಗಿರುವ ಚನ್ನಪ್ಪನನ್ನು ಜತೆಗೆ ಕರೆದುಕೊಂಡು ಬಂದಿದ್ದ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಲೈನ್‌ಮ್ಯಾನ್‌ ನಾಪತ್ತೆ ಆಗಿದ್ದಾನೆ. ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಕೃಷ್ಣ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

Sanke Bite.. Drowned in water
ನಾಪತ್ತೆಯಾಗಿರುವ ಬಾವುಸಾಬ್‌ಗಾಗಿ ಹುಡುಕಾಟ

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Renuka Swamy Murder: ರೇಣುಕಾಸ್ವಾಮಿ ಶವ ಸಾಗಿಸಲು ಆರೋಪಿಗಳಿಗೆ ನೆರವು; ಪಿಎಸ್‌ಐ ಬಂಧನ ಸಾಧ್ಯತೆ

Renuka Swamy Murder: ರೇಣುಕಾಸ್ವಾಮಿ ಕೊಲೆ ಬಳಿಕ ಆರೋಪಿಗಳಿಗೆ ಶರಣಾಗುವಂತೆ ಸಬ್‌ ಇನ್ಸ್‌ಪೆಕ್ಟರ್‌ ಸೂಚಿಸಿದ್ದರು ಎನ್ನಲಾಗಿದೆ. ನಂತರ ಶವ ಸಾಗಿಸುವ ಬಗ್ಗೆಯೂ ಸಲಹೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Renuka Swamy Murder
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ಸಾಕ್ಷ್ಯ ನಾಶ ಮಾಡಲು ಆರೋಪಿಗಳಿಗೆ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ನೆರವು ನೀಡಿದ ಆರೋಪ ಕೇಳಿಬಂದಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಸಬ್‌ ಇನ್ಸ್‌ಪೆಕ್ಟರ್ ವಶಕ್ಕೆ ಪಡೆದು ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಕೇರಳ ಪ್ರವಾಸದಲ್ಲಿದ್ದ ಪಶ್ಚಿಮ ವಿಭಾಗದ ಸಬ್ ಇನ್ಸ್ ಪೆಕ್ಟರ್‌ಗೆ ಆರೋಪಿಗಳು ಕೊಲೆ ಮಾಡಿರುವ ಮಾಹಿತಿ ನೀಡಿದ್ದಾರೆ. ಸಬ್ ಇನ್ಸ್‌ಪೆಕ್ಟರ್‌ಗೆ ಸ್ಟೋನಿ ಬ್ರೂಕ್ಸ್ ರೆಸ್ಟೋರೆಂಟ್ ಮಾಲೀಕ ವಿನಯ್‌ ಆಪ್ತನಾಗಿದ್ದ. ಹೀಗಾಗಿ ಆರೋಪಿಗಳು ಕೊಲೆ ಮಾಡಿರುವುದಾಗಿ ಹೇಳಿದಾಗ ಶರಣಾಗುವಂತೆ ಸಬ್ ಇನ್ಸ್‌ಪೆಕ್ಟರ್ ಸೂಚಿಸಿದ್ದರು ಎನ್ನಲಾಗಿದೆ. ನಂತರದ ಬೆಳವಣಿಗೆಗಳಲ್ಲಿ ಶವ ಸಾಗಿಸುವ ಬಗ್ಗೆಯೂ ಸಲಹೆ ನೀಡಿರುವ ಆರೋಪವಿದೆ.

ಆರೋಪ ಕೇಳಿಬಂದಿದ್ದರಿಂದ ಹಿರಿಯ ಪೊಲೀಸ್ ಅಧಿಕಾರಿಗಳ‌ ಸೂಚನೆ ಮೇರೆಗೆ ಸಬ್ ಇನ್ಸ್‌ಪೆಕ್ಟರ್ ಅನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ | Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Actor Darshan

ಯಾದಗಿರಿ: ನಟ ದರ್ಶನ್‌ (Actor Darshan) ಅಭಿಮಾನಿಯೊಬ್ಬ ಪಂಚರ್‌ ಅಂಗಡಿ ಯುವಕನಿಗೆ ಕೊಲೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಯಾದಗಿರಿಯ ಅಭಿ ಎಂಬಾತನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಜೀವ ಬೆದರಿಕೆ ಹಾಕಿದ್ದಾನೆ.

ಅಭಿ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದ. ಬಾಸ್ ಬಾಸ್ ಎಂದು ಬಕೇಟ್ ಯಾಕೆ ಹಿಡಿತಿರಿ. ನಿಮ್ಮ ತಂದೆ-ತಾಯಿಗೆ ಬಕೆಟ್‌ ಹಿಡಿಯಿರಿ ಎಂದು ಸ್ಟೇಟಸ್ ಹಾಕಿದ್ದ. ಇದನ್ನೂ ಗಮನಿಸಿದ ರಾಜು, ಅಭಿಗೆ ಫೋನ್‌ ಕಾಲ್ ಮಾಡಿ ಜೀವಂತ ಸುಡುವುದಾಗಿ ಬೆದರಿಸಿದ್ದಾನೆ. ಬಾಸ್ ಬಗ್ಗೆ ಮಾತಾಡಿದರೆ ಖಾಲಿ ಆಗುತ್ಯಾ ನೀನು, ನಿನ್ನ ಮನೆ ಹಾಗೂ ಅಂಗಡಿಗೆ ಬೆಂಕಿ ಹಚ್ಚಬೇಕಾಗುತ್ತದೆ.

ಇದನ್ನೂ ಓದಿ: Actor Darshan : ಸಂಕಷ್ಟ ನಿವಾರಣೆಗಾಗಿ ದೇವರ ಮೊರೆ ಹೋದ ನಟ ದರ್ಶನ್‌ ಕುಟುಂಬಸ್ಥರು

ಕೂಡಲೇ ಬಾಸ್‌ಗೆ ಕ್ಷಮೆ ಕೇಳಿ ವಿಡಿಯೊ ಮಾಡಿ ಹಾಕು, ಈ ಹಿಂದೆ ಮಾಡಿರುವ ವಿಡಿಯೋ ಡಿಲೀಟ್ ಮಾಡು ಎಂದು ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಬೆದರಿಕೆ ಹಾಕಿದ್ದಾನೆ. ಇತ್ತ ಅಭಿ ನಾನೇಕೆ ಕ್ಷಮೆ ಕೇಳಬೇಕು, ನಾನು ಡಿ ಬಾಸ್‌ ಅಂತೇನು ಹಾಕಿಲ್ಲ. ಮತ್ಯಾಕೆ ಡಿಲೀಟ್‌ ಮಾಡಬೇಕು ಎಂದು ಪ್ರಶ್ನೆಸಿದ್ದಾನೆ. ಬಾಸ್‌ ಅಂದ್ರೂ, ಡಿ ಬಾಸ್‌ ಅಂದ್ರೂ ಒಂದೇ, ಕೂಡಲೇ ವಿಡಿಯೊ ಡಿಲೀಟ್‌ ಮಾಡು ಎಂದು ರಾಜು ಒತ್ತಾಯಿಸಿದ್ದಾರೆ. ಬೆದರಿಕೆ ಹಾಕಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ಅಲರ್ಟ್ ಯಾದಗಿರಿ ನಗರ ಠಾಣೆ ಪೊಲೀಸರು ರಾಜು ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

Continue Reading

ಕ್ರೈಂ

Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Self Harming: ರಾಯಚೂರು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ತೆ ಮಗಳು ಪ್ರೀತಿ ನಿರಾಕರಿಸಿದ ಕಾರಣ ಯುವಕ ವಿಷ ಸೇವಿಸಿದ್ದಾನೆ.

VISTARANEWS.COM


on

Self Harming
Koo

ರಾಯಚೂರು: ಯುವತಿ ಪ್ರೀತಿ ‌ನಿರಾಕರಿಸಿದಕ್ಕೆ ಮನನೊಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವುದು ತಾಲೂಕಿನ ಮಲಿಯಾಬಾದ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. ವಿಷ ಸೇವಿಸಿದ ಬಳಿಕ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಯುವಕ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ.

ಗಧಾರ್ ಗ್ರಾಮದ ಹನುಮೇಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ನಗರದ ನವಯುಗ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದಾನೆ. ಈತ ಕೆಲ ವರ್ಷಗಳಿಂದ ಪಿಯುಸಿ ಓದುತ್ತಿದ್ದ ಅತ್ತೆ ಮಗಳನ್ನು ಪ್ರೀತಿ ಮಾಡುತ್ತಿದ್ದ. ಆಕೆಯನ್ನೇ ಮದುವೆ ಆಗುತ್ತೀನಿ ಎಂದು ಹಠ ಹಿಡಿದಿದ್ದ. ಆದರೆ, ಮದುವೆಗೆ ಯುವತಿ ಮನೆಯವರು ನಿರಾಕರಿಸಿದ್ದರು. ಈ ಹಿನ್ನೆಲೆ ಹಾಸ್ಟೆಲ್‌ನಿಂದ ಯುವಕ ಹೊರಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕೆ ಯರಗೇರಾ ಪೊಲೀಸರು ಭೇಟಿ ‌ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷ ಸೇವನೆ ಬಳಿಕ ನೀರಿನಲ್ಲಿ ಬಿದ್ದಿದ್ದ ಯುವಕನ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Farmer Death : ಸಾಲದ ಶೂಲಕ್ಕೆ ಮನನೊಂದ ರೈತ; ಕೆರೆಗೆ ಹಾರಿ ಆತ್ಮಹತ್ಯೆ

ನಿದ್ದೆಗೆ ಜಾರಿದ 3 ವರ್ಷದ ಬಾಲಕನನ್ನು ಕಚ್ಚಿ ಸಾಯಿಸಿದ ನಾಗರಹಾವು

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿ (Snake Bite) 3 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೀಕ್ಷಿತ್ (3) ಮೃತ ದುರ್ದೈವಿ.

ಮಾಲತಿ-ಸುರೇಶ ದಂಪತಿಯ ಏಕೈಕ ಪುತ್ರ ದೀಕ್ಷಿತ್ ಮನೆಯ ಕಾಂಪೌಂಡ್‌ನ ಮುಂದೆ ಮಲಗಿದ್ದಾಗ ನಾಗರಹಾವು ಕಚ್ಚಿದೆ. ಕೂಡಲೇ ಅಸ್ವಸ್ಥಗೊಂಡಿದ್ದ ದೀಕ್ಷಿತ್‌ನನ್ನು ಆಸ್ಪತ್ರೆಗೆ ಕರೆತರಲಾಗಿದೆ. ಆದರೆ ಸಕಾಲಕ್ಕೆ ಬಾಗೇಪಲ್ಲಿ ಆಸ್ಪತ್ರೆಯ ಸ್ಟಾಪ್ ನರ್ಸ್ ಬೋಮ್ಮಣ್ಣ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ವೈದ್ಯರು ಬಂದು ನೋಡುವಷ್ಟರಲ್ಲಿ ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು ಎಂದು ಪೋಷಕರು ಗೋಳಾಡಿದ್ದಾರೆ.

ಇದನ್ನೂ ಓದಿ |

ಮೀನು ಹಿಡಿಯಲು ನದಿಗೆ ಇಳಿದವನು ನಾಪತ್ತೆ

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮೀನುಗಾರಿಕೆಗೆ ಇಳಿದ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಕುಲ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾವುಸಾಬ್ ಗಬಾಡೆ ನಾಪತ್ತೆಯಾದವರು.

ನದಿಯಲ್ಲಿ ನಾಪತ್ತೆಯಾದ ಮೀನುಗಾರ ಬಾವುಸಾಬ್‌ ಗಬಾಡೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬನಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನದಿಯಲ್ಲಿ ಶೋಧಕಾರ್ಯ ಮುಂದುವರಿದಿದೆ.

Continue Reading
Advertisement
Petrol Diesel Price
ಕರ್ನಾಟಕ12 mins ago

Petrol Diesel Price: ಜನರಿಗೆ ಸಿದ್ದರಾಮಯ್ಯ ಸರ್ಕಾರ ಶಾಕ್; ಪೆಟ್ರೋಲ್‌, ಡೀಸೆಲ್‌ ಬೆಲೆ 3 ರೂ. ಏರಿಕೆ

Pakistan Cricket Board
ಕ್ರಿಕೆಟ್20 mins ago

Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

Uorfi Javed and Orry were spotted outside a restaurant in Mumbai
ಬಾಲಿವುಡ್37 mins ago

Uorfi Javed: ನೈಟ್‌ ಪಾರ್ಟಿಯ ಕಿಲಾಡಿ ಓರಿ ಮತ್ತು ಉರ್ಫಿ ಮದುವೆ ಆಗ್ತಾರಾ?

Windfall Tax
ವಾಣಿಜ್ಯ43 mins ago

Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

Mallikarjun Kharge
ದೇಶ50 mins ago

Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Self harming
ಉತ್ತರ ಕನ್ನಡ51 mins ago

Self Harming : ಪೊಲೀಸ್‌ ಠಾಣೆ ಎದುರೇ ಬೆಂಕಿ ಹಚ್ಚಿಕೊಂಡ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

Renuka Swamy Murder
ಕರ್ನಾಟಕ1 hour ago

Renuka Swamy Murder: ರೇಣುಕಾಸ್ವಾಮಿ ಶವ ಸಾಗಿಸಲು ಆರೋಪಿಗಳಿಗೆ ನೆರವು; ಪಿಎಸ್‌ಐ ಬಂಧನ ಸಾಧ್ಯತೆ

Road Accident
ದೇಶ1 hour ago

Road Accident: ಟೆಂಪೋ ಟ್ರಾವೆಲರ್‌ ಆಳವಾದ ಕಮರಿಗೆ ಉರುಳಿ ಕನಿಷ್ಠ 8 ಮಂದಿ ಸಾವು

Chahal-Dhanashree
ಕ್ರಿಕೆಟ್1 hour ago

Chahal-Dhanashree: ನ್ಯೂಯಾರ್ಕ್​ನಲ್ಲಿ ಪತ್ನಿ ಜತೆ ಪ್ರವಾಸಿ ತಾಣ ಸುತ್ತಿ ಎಂಜಾಯ್​ ಮಾಡಿದ ಚಹಲ್​

Self Harming
ಕ್ರೈಂ2 hours ago

Self Harming: ಅತ್ತೆ ಮಗಳು ಪ್ರೀತಿ ‌ನಿರಾಕರಿಸಿದಕ್ಕೆ ವಿಷ ಸೇವಿಸಿ ಯುವಕ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ2 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ22 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು23 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು24 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ1 day ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌