ಬೆಂಗಳೂರು: ಉದ್ಧಟತನ ಹಾಗೂ ಕರ್ತವ್ಯ ನಿರ್ಲಕ್ಷ್ಯತೆ ತೋರಿ, ಕರ್ತವ್ಯಲೋಪ ಎಸಗಿ, ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇದುವರೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಪೊಲೀಸ್ ಸಿಬ್ಬಂದಿ ರಾಜ್ಯದಲ್ಲಿದ್ದಾರೆ. ಘಟಕಾಧಿಕಾರಿಗಳು ಕರ್ತವ್ಯದಿಂದ ಬಿಡುಗಡೆ ಮಾಡಿದರೂ ರಾಜ್ಯದ ವಿವಿಧ ಠಾಣೆಗಳ 38 ಇನ್‌ಸ್ಪೆಕ್ಟರ್‌ಗಳು ಕರ್ತವ್ಯಕ್ಕೆ ಹಾಜರಾಗಿಲ್ಲ.
ವರ್ಗಾವಣೆಗೊಂಡರೂ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ ಈ 38 ಇನ್‌ಸ್ಪೆಕ್ಟರ್‌ಗಳಿಗೆ ಡಿಜಿ-ಐಜಿಪಿ ಕಚೇರಿಯಿಂದಲೇ ಇದೀಗ ನೊಟೀಸ್ ಕಳಿಸಲಾಗಿದೆ. ಹೀಗಾಗಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅಂತಿಮವಾಗಿ ಸೂಚಿಸಲಾಗಿದೆ. ಇಲ್ಲವಾದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು ? ಎಂಬ ಬಗ್ಗೆ ವಿವರಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಸೂಚನಾ ಪತ್ರ ತಲುಪಿದ 7 ದಿನದೊಳಗಾಗಿ ಸಮಜಾಯಿಷಿ ಸಲ್ಲಿಸತಕ್ಕದ್ದು ಎಂದು 38 ಪೊಲೀಸ್ ಇನ್‌ಸ್ಪೆಕ್ಟರ್‌ಗಳಿಗೆ ಕಳುಹಿಸಲಾದ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ತಾವೇ ಕರೆಸಿಕೊಂಡ ಇನ್ಸ್‌ಪೆಕ್ಟರನ್ನು ತೆಗಳಿದ ಶಾಸಕ: ಎಂ.ಪಿ. ಕುಮಾರಸ್ವಾಮಿ ಹೇಳಿಕೆ ಕುತೂಹಲ –