Site icon Vistara News

Corruption charge | ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಜಾಮೀನುರಹಿತ ವಾರಂಟ್‌ ಹೊರಡಿಸಿದ ಕೋರ್ಟ್‌

Kempanna

ಬೆಂಗಳೂರು: ತೋಟಗಾರಿಕಾ ಸಚಿವ ವಿ. ಮುನಿರತ್ನ ಅವರ ವಿರುದ್ಧ ಭ್ರಷ್ಟಾಚಾರದ (Corruption charge) ಗಂಭೀರ ಆಪಾದನೆ ಮಾಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಜಾಮೀನುರಹಿತ ವಾರಂಟ್‌ ಹೊರಡಿಸಲಾಗಿದೆ.

ಮುನಿರತ್ನ ಅವರು ಕೋಲಾರ ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾರೆ. ಅವರ ನೇತೃತ್ವದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ವಿವಿಧ ಇಲಾಖೆಯಿಂದ ನಮಗೆ 22 ಸಾವಿರ ಕೋಟಿ ರೂ. ಬಿಲ್ ಬಾಕಿ ಇದೆ. 3 ವರ್ಷಗಳಿಂದ ಬಿಲ್ ಬಾಕಿ ಇದೆ. ಇಂತಹ ಭ್ರಷ್ಟ ಸರ್ಕಾರ ನಾನು ಜೀವನದಲ್ಲಿ ನೋಡಿಲ್ಲ ಎಂದು ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದರು. ಕಾಂಗ್ರೇಸ್ ಮುಖಂಡ ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ಮಾಡಿದ ಅವರು ಈ ಗಂಭೀರ ಆರೋಪ ಮಾಡಿದ್ದರು.

ಈ ಆರೋಪವನ್ನು ಅಲ್ಲಗಳೆದಿದ್ದ ಸಚಿವ ಮುನಿರತ್ನ ಅವರು ಕೆಂಪಣ್ಣ ಸೇರಿ ಗುತ್ತಿಗೆದಾರರ ಸಂಘದ ೧೮ ಮಂದಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು.

ಅಂತೆಯೇ ಮುನಿರತ್ನ ಅವರು ಕೆಂಪಣ್ಣ ಮತ್ತು ಇತರರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇದನ್ನು ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ಜಾಮೀನುರಹಿತ ವಾರಂಟ್‌ ಹೊರಡಿಸಿದೆ. ಗುತ್ತಿಗೆದಾರರ ಸಂಘದ ವಿರುದ್ದ ಕ್ರಿಮಿನಲ್‌ ಹಾಗೂ ಸಿವಿಲ್‌ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಮುಂದಿನ ವಿಚಾರಣೆಯನ್ನು ಜ. ೧೯ಕ್ಕೆ ನಿಗದಿ ಮಾಡಲಾಗಿದೆ.

ಇದನ್ನೂ ಓದಿ | Murugha seer case | ಶ್ರೀಗಳ ವಿರುದ್ಧ ಸುಳ್ಳು ಕೇಸಿಗೆ ಪಿತೂರಿ ಆರೋಪ: ಎಸ್‌.ಕೆ. ಬಸವರಾಜನ್‌ಗೆ ಹೈಕೋರ್ಟ್‌ ಜಾಮೀನು

Exit mobile version