Site icon Vistara News

JDS-BJP Alliance: ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದ ಡಿಕೆಶಿ

DCM DK Shivakumar

DCM DK Shivakumar Talks about JDS and BJP alliance in lok sabha election

ಬೆಂಗಳೂರು: ಜೆಡಿಎಸ್ ಏಕಾಂಗಿಯಾಗಿಯಾದರೂ ಚುನಾವಣೆ ಸ್ಪರ್ಧಿಸಲಿ ಅಥವಾ ಬಿಜೆಪಿ ಜತೆ ಮೈತ್ರಿಯಾದರೂ (JDS-BJP Alliance) ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿದೆ, ಅವರು ನಮ್ಮ ಮೈತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿ, ನಾವು ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಇದನ್ನೂ ಓದಿ | BK Hariprasad : ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್‌ ಶಕ್ತಿ ಪ್ರದರ್ಶನ; ಖಾಕಿ ಚಡ್ಡಿ ಹಾಕಿಕೊಂಡ ಸಮಾಜವಾದಿ ಎಂದು ಗೇಲಿ

ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕು. ಜೆಡಿಎಸ್ ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ನಿಲುವುಗಳ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ನೀಡಬೇಕೋ ಅವರು ನೀಡುತ್ತಾರೆ. ಅವರು ರಾಜಕೀಯ ಅಸ್ತಿತ್ವಕ್ಕಾಗಿ ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.

2018 ರಲ್ಲಿ ಮೈತ್ರಿ ಮಾಡಿಕೊಳ್ಳುವಾಗ ರೊಟ್ಟಿ ಹಳಸಿರಲಿಲ್ಲವೇ ? ಈಗ ಕಾಂಗ್ರೆಸ್‌ನವರು ಮಾತನಾಡುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅವರ ಬಗ್ಗೆ ಮೊದಲ ದಿನದಿಂದಲೂ ನಮಗೆ ಗೊತ್ತು. ಒಂದೊಂದು ದಿನ ಒಂದೊಂದು ಮಾತನಾಡುತ್ತಿದ್ದಾರೆ? ಅವರು ಮಾತನಾಡುತ್ತಲೇ ಇರಲಿ. ನಾನು ಕೇಳಿದ ಪ್ರಶ್ನೆಗಳಿಗೆ ಮೊದಲು ಅವರ ಬಳಿ ಉತ್ತರ ಕೇಳಿ ಎಂದರು.

ಆವತ್ತು ನಾನು ಜೆಡಿಎಸ್‌ ಬಿಜೆಪಿಯ ಬಿಟೀಂ ಅಂದಾಗ ಸಿಟ್ಟಾಗಿದ್ರಲ್ಲಾ? ಈಗ ಏನು ಹೇಳ್ತಾರೆ; ಸಿದ್ದರಾಮಯ್ಯ ಪ್ರಶ್ನೆ

ಹುಬ್ಬಳ್ಳಿ: ಆವತ್ತು ನಾನು ಜೆಡಿಎಸ್‌ ಬಿಜೆಪಿ ಬಿ ಟೀಮ್‌ (JDS is B team of BJP) ಎಂದು ಹೇಳಿದಾಗ ನನ್ನ ಮೇಲೆ ಸಿಟ್ಟು ಮಾಡಿಕೊಂಡಿದ್ದರು. ಈಗ ಏನು ಹೇಳುತ್ತಾರೆ?: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯ (BJP-JDS Alliance) ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕೇಳಿದ ಪ್ರಶ್ನೆ ಇದು. ಶುಕ್ರವಾರ ಮೈತ್ರಿ ಘೋಷಣೆಯಾದಾಗ ʻನಮಗೆ ಅದರಿಂದ ಏನೂ ಪರಿಣಾಮ ಇಲ್ಲʼ ಎಂದು ಚುಟುಕು ಉತ್ತರ ನೀಡಿದ್ದ ಸಿದ್ದರಾಮಯ್ಯ ಅವರು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿ ವಿಸ್ತೃತ ಪ್ರತಿಕ್ರಿಯೆ ನೀಡಿದರು.

ʻʻಜನತಾ ದಳ ಜಾತ್ಯತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು (HD Devegowda) ಯಾವ ಕಾರಣಕ್ಕೂ ಬೇರೆ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳುತ್ತಿದ್ದರು. ಆದರೆ ಪಕ್ಷದ ಉಳಿವಿಗಾಗಿ ಬಿಜೆಪಿ ಜೊತೆ ಸೇರಿಕೊಳ್ಳುತ್ತಿರುವುದಾಗಿ ಶಾಸಕ ಜಿ.ಟಿ.ದೇವೇಗೌಡರು ಹೇಳುತ್ತಿದ್ದಾರೆʼʼ ಎಂದು ಸಿದ್ದರಾಮಯ್ಯ ಹೇಳಿದರು.

ʻʻಈ ಹೇಳಿಕೆಗಳು ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ ಎಂದು ತೋರಿಸುತ್ತದೆ. ಅಧಿಕಾರಕ್ಕಾಗಿ ಯಾವುದೇ ಕ್ರಮಕ್ಕೆ ಸಿದ್ಧ ಎಂಬುದನ್ನು ಅವರು ತೋರಿಸಿದ್ದಾರೆʼʼ ಎಂದರು ಸಿದ್ದರಾಮಯ್ಯ.

ಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ

ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು.

ಇದನ್ನೂ ಓದಿ | Basanagowda yatnal : ರಾಹುಲ್‌ ಗಾಂಧಿ ಒಬ್ಬ ಅರೆಹುಚ್ಚ, ಅಂಥವರನ್ನೆಲ್ಲ ಜಿ20ಗೆ ಕರೆಯೋಕೆ ಆಗುತ್ತಾ?; ಯತ್ನಾಳ್‌ ವ್ಯಂಗ್ಯ

ಜಿ20 ಸಭೆಗೆ ವಿರೋಧಪಕ್ಷದ ನಾಯಕರನ್ನು ಆಹ್ವಾನಿಸದಿರುವುದು ತಪ್ಪು

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಸಭೆಗೆ ಕಾಂಗ್ರೆಸ್ ನ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸದಿರುವ ಬಗ್ಗೆ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆಯವರು ಅಧಿಕೃತವಾಗಿ ರಾಜ್ಯಸಭೆಯ ವಿರೋಧಪಕ್ಷದ ನಾಯಕರಾಗಿದ್ದು, ಅವರನ್ನು ಜಿ20 ಸಭೆ ಆಹ್ವಾನಿಸದಿರುವುದು ತಪ್ಪು ಎಂದು ತಿಳಿಸಿದರು.

Exit mobile version