Noted Kannada writer, critic professor GH Nayak no more GH Nayak : ಕನ್ನಡದ ಹಿರಿಯ ಸಾಹಿತಿ, ಪ್ರಖರ ವಿಮರ್ಶಕ ಪ್ರೊ. ಜಿ.ಎಚ್‌ ನಾಯಕ್ ಇನ್ನಿಲ್ಲ Vistara News
Connect with us

ಉತ್ತರ ಕನ್ನಡ

GH Nayak : ಕನ್ನಡದ ಹಿರಿಯ ಸಾಹಿತಿ, ಪ್ರಖರ ವಿಮರ್ಶಕ ಪ್ರೊ. ಜಿ.ಎಚ್‌ ನಾಯಕ್ ಇನ್ನಿಲ್ಲ

Pro. GH Nayak: ಕನ್ನಡದ ಖ್ಯಾತ ಲೇಖಕ, ವಿಮರ್ಶಕ ಜಿಎಚ್‌. ನಾಯಕ ಉತ್ತರ ಕನ್ನಡದವರಾದರೂ ಹಲವಾರು ವರ್ಷಗಳಿಂದ ಮೈಸೂರಲ್ಲೇ ಇದ್ದು ಮೈಸೂರಿಗರೇ ಆಗಿದ್ದರು. ಪ್ರಖರ ವಿಮರ್ಶೆಗಳಿಗೆ ಹೆಸರಾಗಿದ್ದರು.

VISTARANEWS.COM


on

Kannada Writer GH Nayak
ಖ್ಯಾತ ವಿಮರ್ಶಕ ಜಿ.ಎಚ್‌. ನಾಯಕ ಇನ್ನಿಲ್ಲ
Koo

ಮೈಸೂರು: ನಾಡಿನ ಖ್ಯಾತ ಸಾಹಿತಿ ಮತ್ತು ಪ್ರಖರ ವಿಮರ್ಶಕ ಪ್ರೊ. ಜಿ.ಎಚ್‌. ನಾಯಕ (GH Nayak) ಇನ್ನಿಲ್ಲ. ಅವರಿಗೆ 88 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲಸುತ್ತಿದ್ದ ಅವರು ಶುಕ್ರವಾರ (ಮೇ 26) ಮೈಸೂರಿನ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದವರಾದ ಜಿ.ಎಚ್​. ನಾಯಕ ಅವರು ಮೈಸೂರು ವಿಶ್ವವಿದ್ಯಾಲಯದಲ್ಲಿ (Mysore University) ಕನ್ನಡ ಅಧ್ಯಾಪಕರಾಗಿ, ಮುಂದೆ ಪ್ರಾಧ್ಯಾಪಕರಾಗಿ (Kannada professor) ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು. ನಿವೃತ್ತಿ ಬಳಿಕ ಮೈಸೂರಿನ ಕುವೆಂಪು ನಗರದಲ್ಲಿ ನೆಲೆಸಿದ್ದ ಅವರು ಮೈಸೂರಿಗರೇ ಆಗಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ನಾಯಕರಿಗೆ ಪತ್ನಿ, ಸಾಮಾಜಿಕ ಹೋರಾಟಗಾರ್ತಿ ಮೀರಾ ನಾಯಕ. ಪುತ್ರಿ ದೀಪಾ ಇದ್ದಾರೆ.

ಅವರ ಬಾಳೇ ಒಂದು ಆತ್ಮಕಥನ

ಕನ್ನಡ ಸಾಹಿತ್ಯ ಲೋಕದಲ್ಲಿ ಜಿ.ಎಚ್.ನಾಯಕ ಎಂದು ಚಿರಪರಿಚಿತರಾಗಿದ್ದ ಅವರ ಪೂರ್ಣ ಹೆಸರು ಗೋವಿಂದರಾಯ ಹಮ್ಮಣ್ಣ ನಾಯಕ. ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ. 1935ರ ಸೆಪ್ಟೆಂಬರ್‌ 18ರಂದು.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಬಹುಕಾಲ ಅಧ್ಯಾಪಕರಾಗಿದ್ದ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯ (1994-95) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕಾವ್ಯಾಧ್ಯಯನ ಪೀಠ (1996-97)ಗಳ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು. ಅವರು ವಿಮರ್ಶೆ ಜತೆಗೆ ಸಂಪಾದನೆ, ಕನ್ನಡ ಸಣ್ಣಕಥೆಗಳು, ಹೊಸಗನ್ನಡ ಕವಿತೆಗಳನ್ನೂ ರಚಿಸಿದ್ದರು. ಬಾಳು ಎನ್ನುವುದು ಅವರ ಆತ್ಮಕಥನ.

ಜಿ.ಎಚ್‌ ನಾಯಕರ ವಿಮರ್ಶಾ ಕೃತಿಗಳು ಇವು

ಸಮಕಾಲೀನ (1973), ಅನಿವಾರ್ಯ (1980), ನಿರಪೇಕ್ಷ (1984), ನಿಜದನಿ (1988), ಸಕಾಲಿಕ (1995), ಗುಣಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ದಲಿತ ಹೋರಾಟ: ಗಂಭೀರ ಸವಾಲುಗಳು (2004), ಸ್ಥಿತಿಪ್ರಜ್ಞೆ (2007), ಮತ್ತೆ ಮತ್ತೆ ಪಂಪ (2008), ಸಾಹಿತ್ಯ ಸಮೀಕ್ಷೆ (2009). ಉತ್ತರಾರ್ಧ (2011) ಜಿ.ಎಚ್‌. ನಾಯಕ ವಿಮರ್ಶಾ ಕೃತಿಗಳು.

ಸಂಪಾದಿತ ಕೃತಿಗಳು ಹಲವು

ಕನ್ನಡ ಸಣ್ಣ ಕಥೆಗಳು (1978), ಹೊಸಗನ್ನಡ ಕವಿತೆ (1985), ಶತಮಾನದ ಕನ್ನಡ ಸಾಹಿತ್ಯ ಸಂ. 2 (2000) ಶತಮಾನದ ಕನ್ನಡ ಸಾಹಿತ್ಯ ಸಂ. 2 (2009) ಕೃತಿಗಳನ್ನು ಸಂಪಾದಿಸಿದ್ದಾರೆ.

ಪಡೆದ ಪ್ರಶಸ್ತಿಗಳು ಹಲವಾರು

-ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅತ್ಯುತ್ತಮ ಸಾಹಿತ್ಯ ವಿಮರ್ಶೆ ಪ್ರಶಸ್ತಿ ‘ನಿರಪೇಕ್ಷ’ (1985)
– ವಿ.ಎಂ. ಇನಾಂದರ್‌ ವಿಮರ್ಶೆ ಪ್ರಶಸ್ತಿ ‘ನಿಜದನಿ’ (1989)
-ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (19990)
– ಕರ್ನಾಟಕ ರಾಜ್ಯ ಪ್ರಶಸ್ತಿ (2000), ಜಿ. ಎಸ್. ಶಿವರುದ್ರಪ್ಪ ವಿಮರ್ಶೆ ಪ್ರಶಸ್ತಿ (2004)
– ಶಿವರಾಮ ಕಾರಂತ ಪ್ರಶಸ್ತಿ (20009), ಪಂಪ ಪ್ರಶಸ್ತಿ (2010)
-ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಡಿ. ಲಿಟ್ ಪದವಿ (2014),
-ತೀನಂಶ್ರೀ ವಿಮರ್ಶೆ ಪ್ರಶಸ್ತಿ (2014).

ಅಮೆರಿಕ, ಇಂಗ್ಲೆಂಡ್‌, ಚೀನಾದಲ್ಲೂ ಅಧ್ಯಾಪನ

ಅಮೆರಿಕದ ಮ್ಯಾಡಿಸನ್ ವಿಸ್ಕಾನ್ಸಿನ್ ವಿಶ್ವವಿದ್ಯಾನಿಲಯ (1983) ಹಾಗೂ ಅಮೆರಿಕ ಸರ್ಕಾರದ ಅತಿಥಿಯಾಗಿ ಅಮೆರಿಕ (2000) ಪ್ರವಾಸ ಮಾಡಿದ್ದ ಅವರು ಇಂಗ್ಲೆಂಡ್ (2000) ಮತ್ತು ಚೀನಾ (2006)ಗಳಿಗೂ ಭೇಟಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸಂತಾಪ

ಕನ್ನಡದ ಖ್ಯಾತ ವಿಮರ್ಶಕ, ಪ್ರಾಧ್ಯಾಪಕ ಜಿ.ಎಚ್.ನಾಯಕ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಸೂರ್ವೆಯಲ್ಲಿ ಜನಿಸಿದ್ದ ಜಿ.ಎಚ್.ನಾಯಕರು. ಪ್ರಾಧ್ಯಾಪಕರಾಗಿ ನಿವೃತ್ತರಾದ ನಂತರ ಅವರು ಮೈಸೂರಿನಲ್ಲಿಯೇ ನಿವೃತ್ತ ಜೀವನ ನಡೆಸುತ್ತಿದ್ದರು. ಕನ್ನಡದ ಅತ್ಯುತ್ತಮ ವಿಮರ್ಶಕರಲ್ಲೊಬ್ಬರಾಗಿದ್ದ ಅವರ ಅನೇಕ ಪುಸ್ತಕಗಳು ಪ್ರಕಟವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಿ.ಎಂ.ಇನಾಂದಾರ ಸ್ಮಾರಕ ಬಹುಮಾನ ಲಭಿಸಿವೆ ಎಂದು ತಿಳಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ : Death News : ಕೋಟ ಡಾ. ಶಿವರಾಮ ಕಾರಂತರ ಆಪ್ತ ಸಹಾಯಕಿಯಾಗಿದ್ದ ಮಾಲಿನಿ ಮಲ್ಯ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉಡುಪಿ

Weather Report: ಈ ವಾರ ಕರಾವಳಿಯಲ್ಲಿ ಮಳೆ ಅಬ್ಬರ; ಉಳಿದೆಡೆ ಬಿಸಿಲಿಗೆ ಜನ ತತ್ತರ

Rising temperature: ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳು ಕಾದ ಕಾವಲಿಯಂತಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ (Weather Report) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

Edited by

karwali rain
ಕಾರವಾರ, ಅಂಕೋಲಾದಲ್ಲಿ ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ ಆಗಿದ್ದು, ಇನ್ನೊಂದು ವಾರ ತಾಪಮಾನದಲ್ಲಿ (Heat wave) ಏರಿಳಿತ ಆಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆಯಾದರೂ ಹಲವು ಕಡೆ ಬಿಸಿಲು ಝಳಪಿಸಲಿದ್ದು, ನಾಗರಿಕರು ಮತ್ತಷ್ಟು ಹೈರಾಣಾಗಬಹುದು ಎಂದು ಹವಾಮಾನ ಇಲಾಖೆ (Weather report) ಮುನ್ಸೂಚನೆಯನ್ನು ನೀಡಿದೆ.

ಕರಾವಳಿ ಜಿಲ್ಲೆಯಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ ಮತ್ತು ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ಚಿತ್ರದುರ್ಗದಲ್ಲಿ ಬಿಸಿಲಿನ ತಾಪಮಾನ ಏರಿಕೆ ಆಗಲಿದೆ. ಮುಂದಿನ 48 ಗಂಟೆಯಲ್ಲಿ ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ರಾಜಧಾನಿಯಲ್ಲಿ ಗುಡುಗಲಿರುವ ವರುಣ

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ರಾಯಚೂರಲ್ಲಿ ಮಂಡೆ ಬಿಸಿ

ರಾಜ್ಯದಲ್ಲಿ ಶುಕ್ರವಾರದಂದು (ಮೇ 26) ಗರಿಷ್ಠ ಉಷ್ಣಾಂಶ 39.0 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲಿ ದಾಖಲಾಗಿದೆ. ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಉತ್ತರ ಕನ್ನಡದ ಅಂಕೋಲ, ವಿಜಯಪುರದ ದೇವರಹಿಪ್ಪರಿಗಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಉತ್ತರ ಕನ್ನಡದ ಹೊನ್ನಾವರ ಹಾಗೂ ಉಡುಪಿಯ ಕೋಟದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Video: ಹಿಂದು ಹುಡುಗನೊಂದಿಗೆ ಮುಸ್ಲಿಂ ಹುಡುಗಿ ಡಿನ್ನರ್​; ಸ್ಕೂಟರ್​ ಅಡ್ಡಗಟ್ಟಿ ಗಲಾಟೆ ಮಾಡಿದ ಗುಂಪು, ಚಾಕು ಇರಿತ

ಶನಿವಾರ ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ

ಶನಿವಾರ (ಮೇ 27) ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ವರುಣನ ಅಬ್ಬರ ಜೋರಾಗಿತ್ತು. ಬಿಸಿಲಿಗೆ ಕಾದಿದ್ದ ಇಳೆಗೆ ಮಳೆರಾಯ ತಂಪೆರೆದಿದ್ದಾನೆ. ಕಾರವಾರ, ಅಂಕೋಲಾ ತಾಲೂಕು ಸುತ್ತಮುತ್ತ ಒಂದೂವರೆ ಗಂಟೆಗಳ‌ ಕಾಲ ಧಾರಾಕಾರ ಮಳೆಯಾಗಿದೆ.

ಸಂಜೆ ವೇಳೆ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಶನಿವಾರ (ಮೇ 27) ಸಂಜೆ ಬಳಿಕ ಬೆಂಗಳೂರು ನಗರ, ಧಾರವಾಡ, ಕಲಬುರಗಿ, ಕೋಲಾರ, ತುಮಕೂರಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಗುಡುಗು, ಮಿಂಚಿನ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Weather report: ಬೆಂಗಳೂರಲ್ಲಿ ತಣ್ಣಗಾದ ವರುಣ; ಕರಾವಳಿ ಸೇರಿ ಇತರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Weather Report: ರಾಜ್ಯಾದ್ಯಂತ ವರುಣ ತಣ್ಣಗಾಗಿದ್ದು, ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather Update) ನೀಡಿದೆ. ಜತೆಗೆ ಕೆಲವು ಕಡೆಗಳಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆಯೂ ಇದೆ.

VISTARANEWS.COM


on

Edited by

Bangalore Rain
Koo

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಕೆಲವು ಕಡೆ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ಉಳಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ (Rain alert) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಕೆಲವು ಭಾಗಗಳಲ್ಲಿ ಮಳೆಯಾಗುವ (Weather report) ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ಮಳೆಯಾಗಲಿದೆ.

ಕಳೆದೆರಡು ದಿನಗಳಿಂದ ಬೆಂಗಳೂರಲ್ಲಿ ವರುಣ ತಣ್ಣಗಾಗಿದ್ದು, ಶನಿವಾರದಂದು ಸಾಮಾನ್ಯವಾಗಿ ಬೆಳಗ್ಗೆ ಬಿಸಿಲಿನಿಂದ ಕೂಡಿದರೆ, ಮಧ್ಯಾಹ್ನದ ಸಮಯ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನ ಏರಿಕೆ ಸಾಧ್ಯತೆ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Cabinet Expansion Live : ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 22 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 37 ಡಿ.ಸೆ – 26 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 26 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಉತ್ತರ ಕನ್ನಡ

Honnavar News: ಕಾರಿಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ, 30 ಮಂದಿಗೆ ಗಾಯ

Honnavar News: ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ಅಪಘಾತ ನಡೆದಿದೆ. ಬಸ್‌ ಚಾಲಕ ಅಪಘಾತ ತಡೆಯಲು ಬ್ರೇಕ್‌ ಹಾಕಿದ್ದು, ಈ ವೇಳೆ ಕಾರಿಗೆ ಡಿಕ್ಕಿಹೊಡೆದು ಬಸ್‌ ಪಲ್ಟಿಯಾಗಿದೆ.

VISTARANEWS.COM


on

Edited by

Bus accident in honnavar
Koo

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಮಂಕಿ ಬಳಿ ನಡೆದಿದೆ. ಅಪಘಾತದಲ್ಲಿ (Honnavar News) ಗಾಯಗೊಂಡಿರುವ ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ.

ಮಂಕಿ ಬಳಿ ಒಳರಸ್ತೆಗೆ ಕಾರು ತಿರುಗಿಸುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಹಿಂದಿನಿಂದ ಬಸ್‌ ಗುದ್ದಿದೆ. ಬಸ್ ಚಾಲಕ ಅಪಘಾತ ತಡೆಯಲು ಯತ್ನಿಸಿದನಾದರೂ ಕಾರಿಗೆ ಡಿಕ್ಕಿಯಾದ ಬಳಿಕ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು ಕಾರಿನಲ್ಲಿದ್ದ ಜಿಲ್ಲಾ ಪಂಚಾಯಿತಿ ಗುತ್ತಿಗೆದಾರ ಮೋಹನ್ ನಾಯ್ಕ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Theft Case: ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದು ಮಹಿಳೆಯರ ತಲೆ ಒಡೆದು ದರೋಡೆ ಮಾಡಿದ ಕಿರಾತಕಿ

ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ; ಪಿಡಿಒ ಅಮಾನತು

PDO Renuka suspended in Devadurga

ರಾಯಚೂರು: ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣದಲ್ಲಿ ನಿರ್ಲಕ್ಷ್ಯ ಆರೋಪದಲ್ಲಿ ಜಾಗೀರ ಜಾಡಲದಿನ್ನಿ ಪಿಡಿಒ ರೇಣುಕಾ ಎಂಬುವವರನ್ನು ಅಮಾನತು ಮಾಡಲಾಗಿದೆ.

ದೇವದುರ್ಗ ತಾಲೂಕು ರೇಕಲಮರಡಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಪೈಪ್‌ಲೈನ್ ಒಡೆದು ಕಲುಷಿತ ನೀರು ಸರಬರಾಜು ಆಗಿತ್ತು. ಆ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಒಬ್ಬ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಘಟನೆಗೆ ಪಿಡಿಒ ನಿರ್ಲಕ್ಷ್ಯ ಕಾರಣ, ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು. ದೇವದುರ್ಗ ಇಒ ನೀಡಿದ ವರದಿ ಆಧರಿಸಿ, ಇಲಾಖಾ ವಿಚಾರಣೆ ಕಾಯ್ದಿರಿಸಿ ಪಿಡಿಒ ರೇಣುಕಾ ಅವರನ್ನು ರಾಯಚೂರು ಜಿ.ಪಂ. ಸಿಇಒ ಶಶಿಧರ್ ಕುರೇರ್ ಆದೇಶ ಹೊರಡಿಸಿದ್ದಾರೆ.

Continue Reading

ಉಡುಪಿ

Weather Report: ಉತ್ತರ ಒಳನಾಡಿನಲ್ಲಿ ವರುಣನಿಗೆ ವಿರಾಮ; ಕರಾವಳಿ, ದಕ್ಷಿಣ ಒಳನಾಡಲ್ಲಿ ಮುಂದುವರಿದ ಮಳೆ

Weather Report: ರಾಜ್ಯದ ಹಲವೆಡೆ ಇನ್ನೆರಡು ದಿನಗಳು ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Rain alert) ನೀಡಿದೆ. ಉತ್ತರ ಒಳನಾಡಲ್ಲಿ ವರುಣ ದುರ್ಬಲಗೊಂಡಿದ್ದರೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದೆ.

VISTARANEWS.COM


on

Edited by

Bangalore Rain
ಸಂಗ್ರಹ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Rain news) ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗುವ (Weather report) ಸಾಧ್ಯತೆ ಇದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ ಚಾಮರಾಜನಗರದಲ್ಲೂ ಮಳೆಯ ಅಬ್ಬರ ಇರಲಿದೆ. ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೊಡಗು ಸೇರಿದಂತೆ ಕೋಲಾರದಲ್ಲೂ ವ್ಯಾಪಕ ಮಳೆಯಾಗಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ನೆಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಮಳೆ ನಡುವೆಯು ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Cooker Blast:‌ ರಾಮನಗರದಲ್ಲಿ ಎಲೆಕ್ಷನ್‌ ಪ್ರಚಾರದ ವೇಳೆ ಕೊಟ್ಟಿದ್ದ ಕುಕ್ಕರ್‌ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಯಚೂರಿನಲ್ಲಿ ತಾಪಮಾನ ಏರಿಕೆ; ರಾಜ್ಯಾದ್ಯಂತ ಮಳೆ ಅಬ್ಬರ

ರಾಜ್ಯದಲ್ಲಿ ಗುರುವಾರ ಮಳೆಯಾಗಿದ್ದು, ಇದರ ನಡುವೆಯೂ ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 39.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ 5, ಕೊಳ್ಳೇಗಾಲ, ಕೊಣನೂರು, ಹೊಸಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ನಾಪೋಕ್ಲು, ಮದ್ದೂರು, ತುಮಕೂರಲ್ಲಿ ತಲಾ 3, ಬುಕ್ಕಪಟ್ಟಣ, ಹೊಸದುರ್ಗದಲ್ಲಿ ತಲಾ 2ಸೆಂ.ಮೀ ಮಳೆಯಾಗಿದೆ. ಹುಣಸೂರು, ಮಧುಗಿರಿ, ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಚಿಕ್ಕಮಗಳೂರು, ಕೊಟ್ಟಿಗೆಹಾರ , ಚಂದೂರಾಯನಹಳ್ಳಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Foundation laying programme of new parliament building
ಕರ್ನಾಟಕ10 mins ago

New Parliament Building : ನೂತನ ಸಂಸತ್‌ ಭವನ ಉದ್ಘಾಟನೆಗೆ ಶೃಂಗೇರಿ ಪುರೋಹಿತರು

Laxmi Hebbalkar Shashikala jolle and leelavati r prasad
ಕರ್ನಾಟಕ18 mins ago

Karnataka Cabinet expansion: ಮೊದಲ, 2ನೇ ಬಾರಿಗೇ ಸಚಿವಗಿರಿ ಪಡೆದ ಬೆಳಗಾವಿ ಶಾಸಕಿಯರಿವರು!

New Parliament Building
ದೇಶ20 mins ago

ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್‌, ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ

Darbar Film
South Cinema24 mins ago

V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

TB Jayachandra granddaughter with letter to rahul gandhi
ಕರ್ನಾಟಕ29 mins ago

Karnataka Cabinet: ತಾತನನ್ನು ಮಿನಿಸ್ಟರ್‌ ಮಾಡಿ ಪ್ಲೀಸ್‌: ರಾಹುಲ್‌ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು

new Simple One Scooter
ಆಟೋಮೊಬೈಲ್38 mins ago

Simple One: ಒಂದು ಚಾರ್ಜ್​​ಗೆ 212 ಕಿ.ಮೀ ಓಡುವ ಸ್ಕೂಟರ್​ ಬಿಡುಗಡೆ; ಇದರ ಬೆಲೆ ಎಷ್ಟು ಗೊತ್ತೇ?

upsc prelims 2023 IAS prelims 2023
ಉದ್ಯೋಗ40 mins ago

UPSC Prelims 2023: ನಾಳೆ ಯುಪಿಎಸ್‌ಸಿ ಪ್ರಿಲಿಮ್ಸ್‌; ಈ ಬಾರಿಯೂ ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ

soudi
ವೈರಲ್ ನ್ಯೂಸ್44 mins ago

Viral News : ನಿತ್ಯ ಶಾಪಿಂಗ್‌ಗೆಂದೇ 70 ಲಕ್ಷ ರೂ. ಖರ್ಚು ಮಾಡುತ್ತಾಳಂತೆ ಈ ಮಹಿಳೆ!

TB Jayachandra speaking with media
ಕರ್ನಾಟಕ46 mins ago

Karnataka Cabinet: ರಾಜ್ಯ ಕಾಂಗ್ರೆಸ್‌ ನಾಯಕರ ಜತೆಗೆ ಮಾತುಕತೆ ಕಟ್‌: ಸದನದಲ್ಲಿ ನೋಡ್ಕೊತೀನಿ ಎಂದ ಜಯಚಂದ್ರ

Pond near kolar
ಕರ್ನಾಟಕ52 mins ago

Drowned in Pond: ಸೆಕೆ ತಾಳಲಾರದೆ ಕೆರೆಯಲ್ಲಿ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Laxmi Hebbalkar oath taking as a minister
ಕರ್ನಾಟಕ2 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ24 hours ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ1 day ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ1 day ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ2 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ2 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ3 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

karnataka politics it takes time to implement guarantee schemes says minister priyank kharge
ಕರ್ನಾಟಕ3 days ago

Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್‌ ಖರ್ಗೆ ವಿವಾದಿತ ಹೇಳಿಕೆ

horoscope today
ಪ್ರಮುಖ ಸುದ್ದಿ4 days ago

Horoscope Today : ಪಂಚಮಿಯ ದಿನ ಪಂಚ ರಾಶಿಯವರಿಗೆ ಶುಭ ಫಲ; ಇಲ್ಲಿದೆ ಇಂದಿನ ದಿನ ಭವಿಷ್ಯ

ಟ್ರೆಂಡಿಂಗ್‌

error: Content is protected !!