Site icon Vistara News

Seer Suicide | ಬಂಡೇಮಠದ ಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಸಚ್ಚಿದಾನಂದ ಮೂರ್ತಿಗೆ ನೋಟಿಸ್‌

Bande Mutt Seer

ರಾಮನಗರ: ಕಂಚುಗಲ್ ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣದಲ್ಲಿ (Seer Suicide) ವೀರಶೈವ ಸಮಾಜದ ಮುಖಂಡ, ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಸಚ್ಚಿದಾನಂದ ಮೂರ್ತಿಗೆ ವಿಚಾರಣೆಗೆ ಹಾಜರಾಗುವಂತೆ ಮಾಗಡಿ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಬಿ.ರವಿ ನೋಟಿಸ್‌ ನೀಡಿದ್ದಾರೆ.

ಸ್ವಾಮೀಜಿ ಡೆತ್ ನೋಟ್‌ನಲ್ಲಿ ಸಚ್ಚಿದಾನಂದ ಮೂರ್ತಿ ಹೆಸರು ಪ್ರಸ್ತಾಪವಾಗಿತ್ತು. ಹಾಗೆಯೇ ಸ್ವಾಮೀಜಿಗೆ ಸಂಬಂಧಪಟ್ಟ ವಿಡಿಯೋ ಇದ್ದ ಸಿ.ಡಿ.ಯನ್ನು ಪ್ರಕರಣದಲ್ಲಿ ಬಂಧಿತ ಆರೋಪಿ ಕಣ್ಣೂರು ಶ್ರೀಗಳಿಗೆ ನೀಡಿದ ಆರೋಪ ಸಚ್ಚಿದಾನಂದ ವಿರುದ್ಧ ಕೇಳಿಬಂದಿತ್ತು. ಹೀಗಾಗಿ ಹೆಚ್ಚಿನ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ‌ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ದೊಡ್ಡಬಳ್ಳಾಪುರ ಮೂಲದ ನೀಲಾಂಬಿಕೆ ಅಲಿಯಾಸ್‌ ಚಂದು (21), ತುಮಕೂರು ಮೂಲದ ನಿವೃತ್ತ ಶಿಕ್ಷಕನಾಗಿರುವ ಮಹದೇವಯ್ಯ ಅವರನ್ನು ಮಾಗಡಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Seer Suicide | ಬಂಡೇಮಠದ ಸ್ವಾಮೀಜಿಯ ಖಾಸಗಿ ವಿಡಿಯೊ ಮಾಡಿಕೊಂಡಿದ್ದ ಮೂಲ ಫೋನ್‌ಗಾಗಿ ಶೋಧ!

Exit mobile version