ಬೆಂಗಳೂರು: ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್) ರದ್ದುಗೊಳಿಸುವ ಕುರಿತು ರಾಜ್ಯ ಸರ್ಕಾರವು ಮತ್ತೊಮ್ಮೆ ಸಮಿತಿಯನ್ನು ಪುನರ್ ರಚಿಸಿರುವ ಕ್ರಮಕ್ಕೆ (NPS News) ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘವು ವಿರೋಧ ವ್ಯಕ್ತಪಡಿಸಿದೆ.
ಇದನ್ನೂ ಓದಿ: Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್ ರಚನೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು, ಸರ್ಕಾರವು ಎನ್‌ಪಿಎಸ್ ಯೋಜನೆಯನ್ನು ರದ್ದುಗೊಳಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದ ನೌಕರರಿಗೆ ರಾಜ್ಯ ಸರ್ಕಾರವು ಮೂರನೇ ಬಾರಿಗೆ ಸಮಿತಿಯನ್ನು ರಚಿಸಿ, ವಿಳಂಬಗೊಳಿಸುತ್ತಿರುವ ಕ್ರಮವು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!
ಎನ್‌ಪಿಎಸ್ ಯೋಜನೆಯನ್ನು ಈಗಾಗಲೇ ರದ್ದುಗೊಳಿಸಿರುವ ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳು ಯಾವುದೇ ಸಮಿತಿಯನ್ನು ರಚಿಸಿರುವುದಿಲ್ಲ. ಆದರೆ ರಾಜ್ಯ ಸರ್ಕಾರವು ಸಮಿತಿಯನ್ನು ಪುನರ್ ರಚಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದು ನಿರಾಸೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಎನ್‌ಪಿಎಸ್ ನೌಕರರ ಸಂಘವು ನಿರ್ಣಾಯಕ ಹೋರಾಟಕ್ಕೆ ಕರೆ ನೀಡುವ ಕುರಿತು ನಿರ್ಣಯ ಕೈಗೊಳ್ಳಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.