Site icon Vistara News

ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದ NSUI ಕಾರ್ಯಕರ್ತರಿಗೆ ಜಾಮೀನು

NSUI

ತುಮಕೂರು: ಶಿಕ್ಷಣ ಸಚಿವ ಬಿ. ಸಿ. ನಾಗೇಶ್‌ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿದ್ದ 24 ಎನ್‌ಎಸ್‌ಯುಐ ಕಾರ್ಯಕರ್ತರು ಷರತ್ತುಬದ್ಧ ಜಾಮೀನಿನ ಮೇಲೆ ಗುರುವಾರ ಬಿಡುಗಡೆಯಾಗಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿ 9 ದಿನಗಳ ಕಾಲ ಜೈಲು ವಾಸದಲ್ಲಿದ್ದ ಎನ್‌ಎಸ್‌ಯುಐ ಕಾರ್ಯಕರ್ತರಿಗೆ ಜಾಮೀನು ಸಿಕ್ಕಿದೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಎನ್‌ಎಎಸ್‌ಐ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಮಾತನಾಡಿ ʼʼರಾಜ್ಯ ಸರ್ಕಾರ ಆರ್‌ಎಸ್‌ಎಸ್‌ ಮಾತು ಕೇಳಿ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರ ವಿಚಾರವನ್ನು ಸುಟ್ಟು ಹಾಕಲು ಪ್ರಯತ್ನಿಸುತ್ತಿತ್ತು. ಹಾಗಾಗಿ ನಾವು ಚಡ್ಡಿ ಸುಟ್ಟು ಆರ್‌ಎಸ್‌ಎಸ್‌ ವಿರುದ್ಧ ಪ್ರತಿಭಟನೆ ನಡೆಸಿದ್ದೆವು. ದೇಶಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿರುವ ಬಗ್ಗೆ ಖುಷಿ ಇದೆ. ನಾಡಿಗಾಗಿ ಜೈಲಿಗೆ ಹೋಗಿದ್ದಕ್ಕೆ ಹೆಮ್ಮೆ ಅನಿಸುತ್ತದೆ. ಮುಂದಿನ ಹೋರಾಟದ ರೂಪುರೇಷೆ ಸದ್ಯದಲ್ಲೇ ಸಿದ್ಧಪಡಿಸಲಾಗುತ್ತದೆʼʼ ಎಂದರು.

ಆರೋಪಿಗಳಿಗೆ ಬುಧವಾರವೇ ಜಾಮೀನು ಮಂಜೂರಾಗಿತ್ತು. ಆದರೆ ತಿಪಟೂರು ಕೋರ್ಟ್ ಒಬ್ಬ ಆರೋಪಿಗೆ ತಲಾ ಇಬ್ಬರಂತೆ 24 ಮಂದಿಗೆ 48 ಜನರನ್ನ ಶ್ಯೂರಿಟಿ ನೀಡುವಂತೆ ಸೂಚಿಸಿತ್ತು. ಹಾಗಾಗಿ ಆರೋಪಿಗಳಿಗೆ ಜಾಮೀನು ಮಂಜೂರಾಗುವುದು ತಡವಾಗಿದೆ. ಕಾಂಗ್ರೆಸ್‌ನಿಂದ 48 ಜಾಮೀನುದಾರರು ಶ್ಯೂರಿಟಿ ನೀಡಿದ ಬಳಿಕ ಇವರನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ | ಚಡ್ಡಿ ಸುಟ್ಟು ಜೈಲು ಸೇರಿರುವ ಕಾರ್ಯಕರ್ತರನ್ನು ಭೇಟಿಯಾದ ಪರಮೇಶ್ವರ್

Exit mobile version