Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು - Vistara News

ಕರ್ನಾಟಕ

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Nursing Student Dies: ಬೆಂಗಳೂರು ಹೊರವಲಯದ ಧನ್ವಂತರಿ ಕಾಲೇಜಿನ ವಿದ್ಯಾರ್ಥಿನಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾಳೆ. ಈ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Nursing student dies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies) ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ಯ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿ.

ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು. ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

Drowned in water
Drowned in water

ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ (Drowned in water) ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ವಿದ್ಯುತ್‌ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ತುಮಕೂರು

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shira News: ಶಿರಾ ನಗರಸಭೆಯ ವತಿಯಿಂದ ಭಾನುವಾರ ನಗರದ ದೊಡ್ಡಕೆರೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಹೇಮಾವತಿ ಜಲಾಶಯದಿಂದ ಶಿರಾದ ದೊಡ್ಡಕೆರೆಗೆ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆಯ ಆಯುಕ್ತ ರುದ್ರೇಶ್‌ ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ವಚ್ಛತಾ ಕಾರ್ಯ ಕೈಗೊಂಡರು.

VISTARANEWS.COM


on

Shira News
Koo

ಶಿರಾ: ಶಿರಾ ನಗರಸಭೆಯ ವತಿಯಿಂದ ಭಾನುವಾರ ನಗರದ ದೊಡ್ಡಕೆರೆಯ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಹೇಮಾವತಿ ಜಲಾಶಯದಿಂದ ಶಿರಾದ ದೊಡ್ಡಕೆರೆಗೆ ನೀರು ಹರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರಸಭೆಯ ಆಯುಕ್ತ ರುದ್ರೇಶ್‌ ಅವರ ನೇತೃತ್ವದಲ್ಲಿ ಸಿಬ್ಬಂದಿ ಸ್ವಚ್ಛತಾ ಕಾರ್ಯ (Shira News) ಕೈಗೊಂಡರು.

ಇದನ್ನೂ ಓದಿ: Stock Market News: ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ, ರೂ.17.03 ಲಕ್ಷ ಕೋಟಿ ನಷ್ಟ

ತುಮಕೂರು ಭಾಗದ ನಾಲೆಗಳಿಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಿರುವ ಕಾರಣ ಶಿರಾ ದೊಡ್ಡಕೆರೆಯ ಸುತ್ತಮುತ್ತಲೂ ಯಥೇಚ್ಛವಾಗಿ ಬೆಳೆದಿದ್ದ ಗಿಡ-ಗಂಟೆಗಳು, ಕಸದರಾಶಿಯನ್ನು ನಗರಸಭೆಯ ಸಿಬ್ಬಂದಿ ತೆರವು ಗೊಳಿಸಿ, ಸ್ವಚ್ಛತಾ ಕಾರ್ಯ ನಡೆಸಿದರು.

ಇನ್ನು ಕೆರೆಯ ಸುತ್ತಮುತ್ತಲಿನ ನಾನಾ ಬಡಾವಣೆಗಳಿಂದ ಹರಿಬಿಡುವ ಕೊಳಚೆ ನೀರು ಕೆರೆಗೆ ಸೇರದಂತೆ ಅಗತ್ಯ ಕ್ರಮ ಕೈಗೊಂಡು ಹಾಗೂ ಸುತ್ತಲಿನ ತಂತಿ ಬೇಲಿಗಳನ್ನು ಭದ್ರಗೊಳಿಸಿ, ತಂತಿ ಬೇಲಿಗೆ ಆವರಿಸಿಕೊಂಡಿದ್ದ ಗಿಡ-ಗಂಟೆಗಳನ್ನು ತೆರವುಗೊಳಿಸಲಾಯಿತು.

ಇದನ್ನೂ ಓದಿ: Viral Video: ಅಳುತ್ತಿರುವ ಹುಡುಗನನ್ನು ಸಮಾಧಾನಪಡಿಸಿದ ನಾಯಿ ಮರಿ! ಆನಂದ್‌ ಮಹೀಂದ್ರಾ ಹಂಚಿಕೊಂಡ ವಿಡಿಯೊ ಇದು

ಈ ಕುರಿತು ನಗರಸಭೆಯ ಆಯುಕ್ತ ರುದ್ರೇಶ್‌ ಮಾತನಾಡಿ, ದೊಡ್ಡಕೆರೆಯ ಸುತ್ತಮುತ್ತಲೂ ಬೆಳೆದಿದ್ದ ಗಿಡ-ಗಂಟೆ, ತ್ಯಾಜ್ಯವನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

ತೋಳ್ಬಲ, ಹೆಂಡದ ಬಲ, ಅಧಿಕಾರದ ಬಲದಿಂದ ಬಂದಿರುವ ಸಿಎಂ ಅನೇಕ ಭ್ರಷ್ಟಾಚಾರಗಳಲ್ಲಿ‌ ಸಿಲುಕಿ ನರಳುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನಾಯಕತ್ವ ಇದ್ದರೆ ಕೂಡಲೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬೇಕು ಎಂದು ಬಿಎಸ್‌ ಯಡಿಯೂರಪ್ಪ (BS Yediyurappa) ಆಗ್ರಹಿಸಿದರು.

VISTARANEWS.COM


on

bs yediyurappa
Koo

ರಾಮನಗರ: ಬಿಜೆಪಿ- ಜೆಡಿಎಸ್‌ ಮೈತ್ರಿಕೂಟ ಸಂಬಂಧ ಶಾಶ್ವತ. ರಾಜ್ಯದ ಜನತೆ ಭ್ರಷ್ಟ ಕಾಂಗ್ರೆಸ್‌ (Congress) ಸರಕಾರದಿಂದ ಬೇಸತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿಕೂಟದಿಂದ (BJP-JDS Alliance) ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.

ʼಮೈಸೂರು ಚಲೋʼ ಪಾದಯಾತ್ರೆಯ (BJP-JDS Padayatra) ಮೂರನೇ ದಿನದ ನಡಿಗೆ ಹಾಗೂ ಚನ್ನಪಟ್ಟಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇಂದು ಈ ರಾಜ್ಯದ ಮುಖ್ಯಮಂತ್ರಿ ಅನೇಕ ಭ್ರಷ್ಟಾಚಾರಕ್ಕೆ ಸಿಲುಕಿದ್ದಾರೆ. ಉಸಿರುಗಟ್ಟುವ ವಾತಾವರಣದಲ್ಲಿ ಸಿಲುಕಿದ್ದಾರೆ. ಗೌರವಯುತವಾಗಿ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ತೋಳ್ಬಲ, ಹೆಂಡದ ಬಲ, ಅಧಿಕಾರದ ಬಲದಿಂದ ಬಂದಿರುವ ಸಿಎಂ ಅನೇಕ ಭ್ರಷ್ಟಾಚಾರಗಳಲ್ಲಿ‌ ಸಿಲುಕಿ ನರಳುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ನಾಯಕತ್ವ ಇದ್ದರೆ ಕೂಡಲೇ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬೇಕು. ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಸಿದ್ದರಾಮಯ್ಯ ಅವರಂತೆ ಮುಡಾದಲ್ಲಿ 14 ಸೈಟು ಪಡೆದಿರೋದು ಯಾರೂ ಇಲ್ಲ. ಒಬ್ಬ ಮುಖ್ಯಮಂತ್ರಿ ತನ್ನ ಪತ್ನಿ ಹೆಸರಿಗೆ 14 ಸೈಟು ಪಡೆದಿದ್ದಾರೆ. ಅವರೇ ಅದನ್ನು ಒಪ್ಪಿಕೊಂಡಿದ್ದಾರೆ. 60 ಕೋಟಿ ಬೆಲೆ ಬಾಳಲಿದೆ ಅಂತಲೂ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಕೇಂದ್ರದ ನಾಯಕರಿಗೆ ಜವಾಬ್ದಾರಿ ಇದ್ದರೆ ಕೂಡಲೇ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ವಾಲ್ಮೀಕಿ ನಿಗಮದಂಥ ಬೃಹತ್ ಹಗರಣ ಹಿಂದೆಂದೂ ಆಗಿರಲಿಲ್ಲ.‌ ಇನ್ಸ್‌ಪೆಕ್ಟರ್‌ ವರ್ಗಾವಣೆಗೆ 30-40 ಲಕ್ಷ ತಗೋಳೋದು ನೋಡಿರಲಿಲ್ಲ. ಇದರಿಂದಾಗಿ ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರೋದನ್ನ ನೀವು ನೋಡಿದ್ದೀರಿ. ಇದು ಅತ್ಯಂತ ಭ್ರಷ್ಟ ಸರಕಾರ ಎಂದು ಅವರು ಆಪಾದಿಸಿದರು.

ಬಿಜೆಪಿ-ಜೆಡಿಎಸ್ ಸಂಬಂಧ ಶಾಶ್ವತ ಸಂಬಂಧ. ನಾವು ಜೊತೆಯಾಗಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದೇವೆ. ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸೀಟು ಗೆಲ್ಲುತ್ತೇವೆ. ಮೈಸೂರಿನಲ್ಲಿ ಎರಡು ಲಕ್ಷ ಜನ ಸೇರಿಸಿ ಸಮಾರೋಪ ಮಾಡಲಿದ್ದೇವೆ. ನಿಮ್ಮ ಕೇಂದ್ರದ ನಾಯಕರಿಗೆ ಭ್ರಷ್ಟಾಚಾರದ ಮನವರಿಕೆ ಮಾಡುವ ಕೆಲಸ ಮಾಡ್ತಿದ್ದೇವೆ. ಈಗಲಾದ್ರೂ ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು. ಪಾದಯಾತ್ರೆ ಮೈಸೂರು ತಲುಪುವುದರ ಒಳಗೆ ಸಿಎಂ ರಾಜೀನಾಮೆ ಕೊಡದಿದ್ರೆ ನಮ್ಮ ಮುಂದಿನ ಹೋರಾಟ ರೂಪಿಸಲಿದ್ದೇವೆ ಎಂದು ಅವರು ಎಚ್ಚರಿಸಿದರು.

ʼನಮ್ಮ ಈ ಹೋರಾಟ ನಾವು ಅಧಿಕಾರಕ್ಕೆ ಬರಬೇಕು ಅಂತಲ್ಲ. ಈ ರಾಜ್ಯದಲ್ಲಿ ವಚನಭ್ರಷ್ಟ ಸರ್ಕಾರ ಅಧಿಕಾರದಲ್ಲಿದೆ. ವಾಲ್ಮೀಕಿ ನಿಗಮದ 187 ಕೋಟಿ ಲೂಟಿ ಮಾಡಿದೆ. ನಮ್ಮ ಹೋರಾಟದ ಪರಿಣಾಮವಾಗಿ ದೆಹಲಿಯಿಂದ ಕಾಂಗ್ರೆಸ್ ವರಿಷ್ಠರು ಬಂದಿದ್ದಾರೆ. ಸಿಎಂ ಪರವಾಗಿ ಗಟ್ಟಿಯಾಗಿ ನಿಲ್ಲುವಂತೆ ಆಡಳಿತ ಪಕ್ಷದ ಶಾಸಕರಿಗೆ ಸೂಚಿಸಲು ಬಂದಿದ್ದಾರೆ. ಆಡಳಿತ ಪಕ್ಷದ ಶಾಸಕರಿಗೆ ಅನುದಾನ ಕೊಡೋದಾಗಿ ಭರವಸೆ ಕೂಡ ನೀಡಿದ್ದಾರೆ. ಆದರೆ ಈ ಸರ್ಕಾರ ಎಷ್ಟು ಬೇಗ ತೊಲಗಲಿದೆಯೋ, ಅಷ್ಟು ಒಳ್ಳೆಯದುʼ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.

ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಅಸ್ವಸ್ಥಗೊಂಡ ಬಿಜೆಪಿ ಮುಖಂಡ

ಚನ್ನಪಟ್ಟಣದಲ್ಲಿ ಪಾದಯಾತ್ರೆ ವೇಳೆ ಬಿಜೆಪಿ ಮುಖಂಡರೊಬ್ಬರು ಅಸ್ವಸ್ಥಗೊಂಡರು. ಕೂಡಲೇ ಆಂಬ್ಯುಲೆನ್ಸ್ ಮೂಲಕ ಅವರನ್ನು ರಾಮನಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಬೆಂಗಳೂರಿನ ಬಿಜೆಪಿ ಜಯನಗರ ಮಂಡಲ ಉಪಾಧ್ಯಕ್ಷ ಶಂಕರ್ ಆರೋಗ್ಯದಲ್ಲಿ ಏರುಪೇರು ಉಂಟಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಶಾಸಕರಾದ ಸಿ.ಕೆ. ರಾಮಮೂರ್ತಿ ಮತ್ತು ರವಿಸುಬ್ರಮಣ್ಯ ಆಸ್ಪತ್ರೆಗೆ ತೆರಳಿ ಶಂಕರ್ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: BJP-JDS Padayatra: ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗಲ್ಲ, ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ: ಕೆ.ಸಿ. ವೇಣುಗೋಪಾಲ್

Continue Reading

ಕರ್ನಾಟಕ

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

PSI Parashuram Case: ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವ ಪೊಲೀಸ್‌ಗೂ ದುಡ್ಡು ಕೇಳಿಲ್ಲ. ಪ್ರಕರಣವನ್ನು ನಮ್ಮ ಸರ್ಕಾರ ಸಿಐಡಿಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ನಾನು ಸೇರಿ ಸತ್ಯಾಂಶ ತಿಳಿಯುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

VISTARANEWS.COM


on

PSI Parashuram Case
Koo

ಬೆಂಗಳೂರು: ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ (PSI Parashuram Case) ಎಫ್‌ಐಆರ್‌ ದಾಖಲಾದ ಬಳಿಕ ಎಲ್ಲೂ ಕಾಣಿಸಿಕೊಳ್ಳದಿದ್ದ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣ ದಾಖಲಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಶಾಸಕ, ಇದೀಗ ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ. ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ ಎಂದು ತಿಳಿಸಿದ್ದಾರೆ.

ನಗರದಲ್ಲಿ ವಿಸ್ತಾರ ನ್ಯೂಸ್‌ನೊಂದಿಗೆ ಪ್ರತಿಕ್ರಿಸಿರುವ ಯಾದಗಿರಿ ಶಾಸಕ, ನನ್ನ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ನಾನು ಯಾವ ಪೊಲೀಸ್‌ಗೂ ದುಡ್ಡು ಕೇಳಿಲ್ಲ. ದುಡ್ಡಿನ ಬಗ್ಗೆ ಮಾತಾಡಿಲ್ಲ, ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಮಾತಾಡಿದ್ದೇನೆ. ಬೇರೆ ಯಾವ ವಿಷಯವೂ ನಾನು ಮಾತಾಡಿಲ್ಲ. ಪ್ರಕರಣವನ್ನು ನಮ್ಮ ಸರ್ಕಾರ ಸಿಐಡಿಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ನಾನು ಸೇರಿ ಸತ್ಯಾಂಶ ತಿಳಿಯುತ್ತದೆ ಎಂದು ಹೇಳಿದ್ದಾರೆ.

ಎಫ್ಐಆರ್ ದಾಖಲಾಗಲು ವಿಳಂಬದ ವಿಚಾರ ಬಗ್ಗೆ ಪ್ರತಿಕ್ರಿಯಿಸಿ, ಅದು ಪೊಲೀಸರಿಗೆ ಬಿಟ್ಟಿದ್ದು, ಅದರಲ್ಲಿ ನಾನು ಭಾಗಿಯಾಗಿಲ್ಲ, ಆ ಕುರಿತು ಯಾರ ಜೊತೆಗೆ ಮಾತನಾಡಿಲ್ಲ. ತಂದೆ ಜತೆ ಮಗ ಇದ್ದೆ ಇರುತ್ತಾನೆ, ಆದರೂ ಸುಮ್ಮನೆ ಆ ಹುಡುಗನ ಮೇಲೆ ಜನ ಆಪಾದನೆ ಮಾಡುತ್ತಾರೆ ಎಂದರೆ ನಾನು ಒಪ್ಪುವುದಿಲ್ಲ. ಇದು ಸುಳ್ಳು, ಕಟ್ಟು ಕಥೆ, ಇದೊಂದು ಷಡ್ಯಂತ್ರ. ತಂದೆ ಮಕ್ಕಳನ್ನು ಸಿಕ್ಕಿ ಹಾಕಿಸಲು ವಿಪಕ್ಷದವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಐಡಿ ವರದಿ ಬಂದ ಮೇಲೆ ಇದು ಷಡ್ಯಂತ್ರವೋ, ಅಲ್ಲವೋ ಎಂಬುವುದು ಹೊರಗಡೆ ಬರಲಿದೆ. ಕಾನೂನಿಗೆ ನಾನು ತಲೆ ಬಾಗುತ್ತೇನೆ, ಸಿಐಡಿ ಅವರು ಕರೆ ಮಾಡಿದ ತಕ್ಷಣ ಹೋಗಿ ವಿಚಾರಣೆಗೆ ಸಹಕಾರ ಕೊಡುತ್ತೇನೆ. ಸಿಎಂ ಅವರು ನಮ್ಮ ನಾಯಕರು, ಪಕ್ಷದ ಸಭೆಗೆ ಬರಲು ಹೇಳಿದ್ದರು. ಅದಕ್ಕೆ ಹೋಗಿದ್ದೆ. ಚನ್ನಾರೆಡ್ಡಿ ಧೈರ್ಯವಾಗಿ ಇರು, ನಾವೆಲ್ಲ ಇದ್ದೇವೆ ಎಂದು ಹೇಳಿರುವುದಾಗಿ ತಿಳಿಸಿದರು.

ಸಿಎಂಗೆ ನಾನು ಯಾವ ವಿಚಾರವೂ ತಿಳಿಸಲು ಹೋಗಿಲ್ಲ. ಅವರಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಹೋಗಿರುತ್ತದೆ. ಗೃಹ ಸಚಿವರು ಸೇರಿ ಎಲ್ಲಾ ಸಚಿವರು ನನ್ನ ಜೊತೆ ಮಾತನಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | PSI Parashuram Case: ಸರ್ಕಾರಿ ಯೋಜನೆ ಹಣ ಬಿಡುಗಡೆಗೂ ಕಮಿಷನ್‌ಗೆ ಬೇಡಿಕೆ; ಎ2 ಪಂಪನಗೌಡ ವಿರುದ್ಧ ಮತ್ತೊಂದು ಆರೋಪ

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

ಇದನ್ನೂ ಓದಿ | Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Continue Reading

ಬೆಂಗಳೂರು

Road Accident : ಅಡ್ಡ ಬಂದ ನಾಯಿ ಮರಿ ಮೇಲೆ ಬೈಕ್ ಹತ್ತಿಸಿದ ಸವಾರ

Road Accident : ತ್ರಿಬಲ್‌ ರೈಡಿಂಗ್‌ (Thribel Riding) ಹೋಗುತ್ತಿದ್ದ ಯುವಕನೊಬ್ಬ ಬೈಕ್‌ಗೆ ನಾಯಿ ಮರಿಯೊಂದು ಅಡ್ಡ ಬಂದಿದ್ದು, ಅದರ ಮೇಲೆ ಹತ್ತಿಸಿದ್ದಾರೆ. ಕಾರೊಂದರ ಡ್ಯಾಶ್‌ ಬೋರ್ಡ್‌ನಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ.

VISTARANEWS.COM


on

By

Road Accident
Koo

ಬೆಂಗಳೂರು: ಇಬ್ಬರು ಹುಡುಗಿಯರನ್ನು ಕೂರಿಸಿಕೊಂಡು ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ಯುವಕನೊರ್ವ ಅಡ್ಡ ಬಂದ ನಾಯಿ ಮರಿ ಮೇಲೆ ಬೈಕ್‌ (Road Accident) ಹತ್ತಿಸಿದ್ದಾನೆ. ಬೆಂಗಳೂರಿನ ವರ್ತೂರು ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ.

ಏಕಾಏಕಿ ನಾಯಿ ಮರಿಯೊಂದು ಬೈಕ್‌ಗೆ ಅಡ್ಡ ಬಂದಿದೆ. ಈ ವೇಳೆ ಬೈಕ್‌ ಟಯರ್ ಹರಿದಿದೆ. ಬೈಕ್ ಟಯರ್ ಹತ್ತಿದ ಕಾರಣ ನಾಯಿ ಮರಿ ಬಿದ್ದು ಒದ್ದಾಡಿದೆ. ಅಲ್ಲೆ ಇದ್ದ ಮತ್ತೊಬ್ಬ ಯುವಕ ನಾಯಿ ಮರಿ ಬಳಿ ಬಂದು ರಸ್ತೆ ಪಕ್ಕ ಹಾಕಿದ್ದಾನೆ. ನಾಯಿ ಮರಿ ಮೇಲೆ ಬೈಕ್ ಹತ್ತಿಸುವ ವಿಡಿಯೊ ಕಾರ್ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಯುವತಿ ಅಸ್ವಸ್ಥ, ಆಸ್ಪತ್ರೆಗೆ ಬಸ್‌ ತಿರುಗಿಸಿದ ಚಾಲಕ, ನಿರ್ವಾಹಕ

ಕರಾವಳಿಯ ಖಾಸಗಿ ಬಸ್‌ನ ಚಾಲಕ, ನಿರ್ವಾಹಕರು ಮಾನವೀಯತೆ ಮೆರೆದಿದ್ದಾರೆ. ಅಸ್ವಸ್ಥಗೊಂಡಿದ್ದ ಯುವತಿಗಾಗಿ ಆಸ್ಪತ್ರೆಗೆ ಬಸ್ ಕೊಂಡೊಯ್ದಿದ್ದಾರೆ. ಉಡುಪಿ ನಗರದಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ನವೀನ್ ಬಸ್‌ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿರ್ವದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್, ಉಡುಪಿಯ ಹಳೆ ತಾಲೂಕಿನ ಕಚೇರಿ ಬರುವಾಗ ಯುವತಿಯೊಬ್ಬಳು ಅಸ್ವಸ್ಥಳಾಗಿದ್ದಾಳೆ. ಬಸ್ಸಿನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಳು. ಆಕೆಯ ಸ್ಥಿತಿ ಕಂಡ ಚಾಲಕ, ನಿರ್ವಾಹಕರು ತಕ್ಷಣವೇ ಹತ್ತಿರದ ಟಿಎಂಎ ಪೈ ಆಸ್ಪತ್ರೆಗೆ ‌ಬಸ್ ಅನ್ನು ತಿರುಗಿಸಿದ್ದಾರೆ.

Road Accident
Road Accident

ತಕ್ಷಣವೇ ಪ್ರಥಮ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಬಳಿಕ ಯುವತಿ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮನೆಯವರು ಬರುವ ತನಕ ಬಸ್ ಸಿಬ್ಬಂದಿ ಅಲ್ಲೆ ಇದ್ದು, ಸಹಕಾರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shira News
ತುಮಕೂರು11 mins ago

Shira News: ಶಿರಾ ನಗರಸಭೆಯಿಂದ ದೊಡ್ಡಕೆರೆಯ ಸುತ್ತಲಿನ ಪ್ರದೇಶದ ಸ್ವಚ್ಛತೆ

Shravana 2024
ಧಾರ್ಮಿಕ15 mins ago

Shravana 2024: ಶ್ರಾವಣ ಉಪವಾಸದ ವೇಳೆ ಈ 5 ಪಾನೀಯ ಆರೋಗ್ಯಕರ

bs yediyurappa
ಪ್ರಮುಖ ಸುದ್ದಿ16 mins ago

BS Yediyurappa: ಮುಂದಿನ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್‌ 150 ಸೀಟು ಖಚಿತ: ಬಿಎಸ್‌ ಯಡಿಯೂರಪ್ಪ

PSI Parashuram Case
ಕರ್ನಾಟಕ29 mins ago

PSI Parashuram Case: ನಾನು ಯಾವ ಪೊಲೀಸ್‌ ಬಳಿಯೂ ದುಡ್ಡು ಕೇಳಿಲ್ಲ: ಶಾಸಕ ಚನ್ನಾರೆಡ್ಡಿ ಪಾಟೀಲ

Snake Bite
ವೈರಲ್ ನ್ಯೂಸ್47 mins ago

Snake Bite: ಹಾವು ಹಿಡಿಯುವವನನ್ನು ಕಚ್ಚಿ ತಾನೇ ಜೀವ ಬಿಟ್ಟ ಕಾಳಿಂಗ ಸರ್ಪ! ಸಾವಿಗೆ ಕಾರಣ ಏನು?

Road Accident
ಬೆಂಗಳೂರು48 mins ago

Road Accident : ಅಡ್ಡ ಬಂದ ನಾಯಿ ಮರಿ ಮೇಲೆ ಬೈಕ್ ಹತ್ತಿಸಿದ ಸವಾರ

Viral Video
Latest1 hour ago

Viral Video: ಯುವತಿ ಜತೆ ಡ್ಯಾನ್ಸ್ ಮಾಡ್ತಾ ಮಾಡ್ತಾ ಪ್ರಾಣಬಿಟ್ಟ ಯುವಕ; ಆಘಾತಕಾರಿ ವಿಡಿಯೊ

Physical Abuse
ವಿಜಯಪುರ1 hour ago

Physical Abuse : ಬಸ್‌ ಸ್ಟಾಪ್‌ನಲ್ಲಿ ನಿಂತಿದ್ದ ಮಹಿಳೆಗೆ ಕಣ್ಣು ಹೊಡೆದು ಚುಡಾಯಿಸಿದವನಿಗೆ ಚಪ್ಪಲಿ ಏಟು

Sex Racket
Latest1 hour ago

Sex Racket: ಹೋಟೆಲ್‍ನಲ್ಲಿ ಸೆಕ್ಸ್ ದಂಧೆ ಪತ್ತೆ; ನಗ್ನ ಸ್ಥಿತಿಯಲ್ಲಿದ್ದ 10 ಜೋಡಿಗಳು ಪೊಲೀಸ್‌ ಬಲೆಗೆ!

Duniya Vijay- Ganesh To Combined together make Movie in future
ಸ್ಯಾಂಡಲ್ ವುಡ್1 hour ago

Duniya Vijay- Ganesh: ದುನಿಯಾ ವಿಜಯ್-ಗಣೇಶ್ ಕಾಂಬಿನೇಷನ್ ಸಿನಿಮಾ ಬರೋದು ಪಕ್ಕಾ; ʻಭೀಮʼನದ್ದೇ ಆ್ಯಕ್ಷನ್‌ ಕಟ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌