Site icon Vistara News

Nursing Student Dies: 6ನೇ ಮಹಡಿಯಿಂದ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಸಾವು

Nursing student dies

ಬೆಂಗಳೂರು: 6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್‌ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies) ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತುಲ್ಯ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿನಿ.

ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು. ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗಡೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder Case : ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ; ಕೈ-ಕಾಲು ಬಿಗಿದು, ಕಲ್ಲು ಕಟ್ಟಿ ಕೆರೆಗೆ ಎಸೆದ ಹಂತಕರು

Drowned in water : ಆಟವಾಡುತ್ತಾ ಕಾಲುವೆಗೆ ಕಾಲು ಜಾರಿ ಬಿದ್ದು 4 ವರ್ಷದ ಬಾಲಕ ಸಾವು

ಚಿಕ್ಕೋಡಿ: ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಬಾಲಕನೊರ್ವ ಮೃತಪಟ್ಟಿರುವ ದಾರುಣ (Drowned in water) ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಜೋಡಕುರಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅರುಣ ಖದ್ದಿ (4) ಮೃತ ದುರ್ದೈವಿ. ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಆಟವಾಡಲು ಹೋದ ಅರುಣ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡಲಾಗಿತ್ತು. ಕಾಲುವೆಗೆ ಬಿದ್ದಾಗ ನೀರಿನಲ್ಲಿ ಮುಳುಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸರು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಕ್ಲೀನರ್ ಸಾವು; ಬೈಕ್‌ ಅಪಘಾತದಲ್ಲಿ ಸವಾರರಿಬ್ಬರು ಮೃತ್ಯು

ದಾವಣಗೆರೆಯಲ್ಲಿ ವಿದ್ಯುತ್ ತಗುಲಿ ವ್ಯಕ್ತಿ ಸಾವು

ವಿದ್ಯುತ್‌ ತಗುಲಿ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕಡರನಾಯಕನಹಳ್ಳಿಯ ಡಿ ಎಸ್ ಸುರೇಶ್ (40) ಮೃತ ದುರ್ದೈವಿ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕಡರನಾಯಕನಹಳ್ಳಿಯಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಪಂಪ್ ಸೆಟ್ ಚಾಲನೆ ಮಾಡುವಾಗ ಈ ಘಟನೆ ನಡೆದಿದೆ. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

Exit mobile version