Site icon Vistara News

OBC Reservation : ಒಬಿಸಿಗೆ ರಾಜಕೀಯ ಮೀಸಲಾತಿ; ಯಾವೆಲ್ಲ ಚುನಾವಣೆಗಳಿಗೆ ಅನುಕೂಲ?

CM Siddaramaiah

ಬೆಂಗಳೂರು: ನ್ಯಾ. ಭಕ್ತ ವತ್ಸಲ ವರದಿಯನ್ನು (Justice Bhakta Vatsala Report) ಅನುಷ್ಠಾನಕ್ಕೆ ತರಲು ಸಚಿವ ಸಂಪುಟದಲ್ಲಿ ಅನುಮೋದನೆ ತರುವ ಮೂಲಕ ಹಿಂದುಳಿದ ವರ್ಗಗಳಿಗೆ ರಾಜಕೀಯ ಬಲ (Political strength) ಬಂದಂತೆ ಆಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ (Local body elections) ಈ ವರ್ಗಗಳಿಗೆ ರಾಜಕೀಯ ಮೀಸಲಾತಿ (Political reservation) ದೊರೆತಂತೆ ಆಗಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ನಗರ ಹಾಗೂ ಗ್ರಾಮೀಣ ಚುನಾವಣೆಗಳಲ್ಲಿ ಎಸ್‌ಸಿ-ಎಸ್‌ಟಿ ಮೀಸಲು ಜತೆಗೆ ಒಬಿಸಿ ವರ್ಗಕ್ಕೂ ಮೀಸಲಾತಿಯನ್ನು (OBC Reservation ) ಇನ್ನು ಮುಂದೆ ಕಲ್ಪಿಸಬೇಕಿದೆ. ಈ ಮೂಲಕ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಕೂಗಿಗೆ ಈಗ ಸ್ಪಷ್ಟ ನ್ಯಾಯ ಸಿಕ್ಕಂತೆ ಆಗಿದೆ.

ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಪಂಚಾಯತ್ ರಾಜ್ (Panchayati Raj) ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ (Urban Local Bodies) ಸೂಕ್ತ ಮೀಸಲಾತಿ ನೀಡುವ ಸಂಬಂಧ ನ್ಯಾ. ಭಕ್ತ ವತ್ಸಲ ಆಯೋಗವನ್ನು ರಚಿಸಲಾಗಿತ್ತು. ಈ ಆಯೋಗವು ಅಧ್ಯಯನ ನಡೆಸಿ ಪ್ರಮುಖವಾಗಿ 5 ಶಿಫಾರಸುಗಳುಳ್ಳ ವರದಿಯನ್ನು ನೀಡಿತ್ತು. ಅದರಲ್ಲಿ ಮೂರು ಶಿಫಾರಸನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಇದನ್ನೂ ಓದಿ: RBI Monetary Policy: ಆರ್‌ಬಿಐ ರೆಪೋ ದರ ಯಥಾಸ್ಥಿತಿ; ಸಾಲಗಾರರಿಗೆ ಬಡ್ಡಿ ಏರಿಕೆ ಬಿಸಿ ಇಲ್ಲ

ಸ್ಥಳೀಯ ಸಂಸ್ಥೆ, ಬಿಬಿಎಂಪಿಯಲ್ಲಿ ಒಬಿಸಿಗೆ ಬಲ

ಒಟ್ಟಾರೆ 50ರಷ್ಟು ಮೀಸಲಾತಿ ಮೀರದಂತೆ ಶೇಕಡಾ 33ರಷ್ಟು ರಾಜಕೀಯ ಮೀಸಲಾತಿ ನೀಡುವುದು. ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ (BBMP Mayor and Deputy Mayor) ಸ್ಥಾನಕ್ಕೆ ಮೀಸಲಾತಿ ನೀಡುವುದು ಹಾಗೂ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿರ್ವಹಣೆ ಅಧಿಕಾರವನ್ನು ಡಿಪಿಆರ್ ಅಡಿಯಲ್ಲಿ ತರುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

ಒಬಿಸಿಗೆ ಹೇಗೆ ಅನುಕೂಲ?

ಯಾವೆಲ್ಲ ಕ್ಷೇತ್ರಗಳಲ್ಲಿ ಒಬಿಸಿಗೆ ಮಾನ್ಯತೆ?

ಈ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯದವರಿಗೆ ಚುನಾವಣೆಯಲ್ಲಿ ಹೆಚ್ಚಿನ ಮೀಸಲಾತಿ ದೊರೆಯುತ್ತದೆ. ಇದರಿಂದ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬ ಕೂಗು ನಿವಾರಣೆಯಾಗಲಿದೆ.

ಬಿಬಿಎಂಪಿ ಮೇಯರ್ ಅಥವಾ ಉಪ ಮೇಯರ್ ಆಗಬಹುದು

ಈಗ ಈ ಮೀಸಲಾತಿ ಕಲ್ಪಿಸಿರುವುದರಿಂದ ಬಿಬಿಎಂಪಿ ಮೇಯರ್‌ ಇಲ್ಲವೇ ಉಪ ಮೇಯರ್‌ ಆಗಿ ಹಿಂದುಳಿದ ವರ್ಗದವರಿಗೆ ಅವಕಾಶ ಕಲ್ಪಿಸಬೇಕಾಗುತ್ತದೆ. ಇದರಿಂದ ಮಹಾಪೌರರಾಗಿಯೂ ಪ್ರಾತಿನಿಧ್ಯ ಪಡೆಯುವ ಅವಕಾಶ ಒಬಿಸಿಯವರಿಗೆ ಲಭ್ಯವಾಗಲಿದೆ.

ಮರು ವರ್ಗೀಕರಣಕ್ಕೆ ಸಿಕ್ಕಿಲ್ಲ ಒಪ್ಪಿಗೆ

2027-28ರಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ಹಿಂದುಳಿದ ವರ್ಗಗಳ ಕೆಟಗರಿ ಎ ಮತ್ತು ಬಿ ಜತೆಗೆ ಅಲ್ಪಸಂಖ್ಯಾತರು ಸೇರಿದಂತೆ ಇತರ ಹಿಂದುಳಿದ ವರ್ಗದವರಿಗಾಗಿ ಪರಿಣಾಮಕಾರಿಯಾದ ರಾಜಕೀಯ ಮೀಸಲು ವ್ಯವಸ್ಥೆ ಕಲ್ಪಿಸಲು ಎರಡು ಹೆಚ್ಚುವರಿ ಕೆಟಗರಿಗಳನ್ನು ಸೇರಿಸಿ ಹಿಂದುಳಿದ ವರ್ಗಗಳ ಮರು ವರ್ಗೀಕರಣ ಮಾಡಲು ಕ್ರಮ ಕೈಗೊಳ್ಳಬೇಕೆಂಬ ಶಿಫಾರಸನ್ನು ಸಚಿವ ಸಂಪುಟ ಒಪ್ಪಿಲ್ಲ.

ಬಿಬಿಎಂಪಿ ಕಾಯ್ದೆ 2020ರಂತೆ ಮೇಯರ್ ಮತ್ತು ಉಪಮೇಯ‌ರ್‌ ಸ್ಥಾನಗಳಿಗೆ 30 ತಿಂಗಳು ಕಾಲಾವಧಿ ನಿಗದಿ ಪಡಿಸುವ ವ್ಯವಸ್ಥೆಯನ್ನು ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸಲು ಕರ್ನಾಟಕ ಮುನ್ಸಿಪಲ್ ಕಾಯ್ದೆಯ ಕಲಂ 10ಕ್ಕೆ ತಿದ್ದುಪಡಿ ತರುವುದು ಸೂಕ್ತ ಎಂದು ನ್ಯಾ. ಭಕ್ತವತ್ಸಲ ಆಯೋಗವು ವರದಿಯಲ್ಲಿ ಶಿಫಾರಸು ಮಾಡಿತ್ತು. ಅದನ್ನೂ ಸಹ ತಿರಸ್ಕರಿಸಲಾಗಿದೆ.

ಇದನ್ನೂ ಓದಿ: Provocative speech: ಆಂದೋಲದ ಸಿದ್ದಲಿಂಗ ಸ್ವಾಮೀಜಿ ಮೇಲೆ ಪ್ರಚೋದನಕಾರಿ ಭಾಷಣ ಕೇಸ್‌; ಅವರು ಹೇಳಿದ್ದೇನು?

ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ಈ ಕ್ರಮ

ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಸಂಬಂಧ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಆಯೋಗ ಈ ವರದಿಯನ್ನು ನೀಡಿತ್ತು. ಆಯಾ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯವನ್ನು ಖಚಿತಪಡಿಸಿದ ಬಳಿಕವೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದರನ್ವಯ ಆಯೋಗವನ್ನು ರಚನೆ ಮಾಡಿ ಅಧ್ಯಯನ ನಡೆಸಿ ವರದಿಯನ್ನು ಪಡೆಯಲಾಗಿತ್ತು. ಈಗ ಕೆಲವೊಂದು ತಿದ್ದುಪಡಿಯೊಂದಿಗೆ ವರದಿ ಅಂಗೀಕಾರಗೊಂಡಿದೆ.

Exit mobile version