ತುಮಕೂರು: ಒಡಿಶಾದಲ್ಲಿ ನಡೆದ ಘೋರ ರೈಲು ದುರಂತದ (Odisha Train Accident) ಸಮೀಪದಲ್ಲಿ ಮಸೀದಿ ಇತ್ತು ಎಂದು ಎಡಿಟ್ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ (viral post) ತುಮಕೂರು ಮೂಲದ ಮಹಿಳೆಯ ಬಗ್ಗೆ ಒಡಿಶಾ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ತುಮಕೂರಿನ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತೆಯಾಗಿರುವ ಶಂಕುತಲಾ ನಟರಾಜ್ ಎಂಬವರು ಅಪಘಾತ ನಡೆದ ಸ್ಥಳದ ಸಮೀಪದಲ್ಲಿ ಮಸೀದಿ ಇದೆ ಎಂದು ಹೈಲೈಟ್ ಮಾಡಿದ ಫೋಟೋ ಅನ್ನು ಟ್ವೀಟ್ ಮಾಡಿದ್ದರು. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಹೀಗೆ ಪೋಟೋ ಶೇರ್ ಮಾಡಿರುವ ಮಹಿಳೆ ಬಗ್ಗೆ ಒಡಿಶಾ ಪೊಲೀಸರು ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.
ರೈಲು ದುರಂತದ ಘಟನಾ ಸ್ಥಳದಲ್ಲಿ ಮಸೀದಿ ಇದೆ ಎಂದು ಫೋಟೋ ಹಾಕಿ, ಘಟನೆಗೆ ಮಸೀದಿಯೇ ಕಾರಣ ಎಂಬಂತೆ ಬಿಂಬಿಸಲಾಗಿತ್ತು. ನಿನ್ನೆ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಶಕುಂತಲಾ ಈ ಪೋಟೋ ಶೇರ್ ಮಾಡಿದ್ದು, ವಿವಾದಕ್ಕೆ ಒಳಗಾಗಿತ್ತು. ನಂತರ ಪೋಟೋ ವೈರಲ್ ಆಗುತ್ತಿದ್ದಂತೆ ಅದನ್ನು ಡಿಲೀಟ್ ಮಾಡಿದ್ದರು ಶಕುಂಕುತಲಾ ನಟರಾಜ್. ಇದು ಸುಳ್ಳು ಸುದ್ದಿ ಎಂದು ಒಡಿಶಾ ಪೊಲೀಸರು ಟ್ವೀಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಶೇರ್ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ದುರಂತದಲ್ಲಿ 280ಕ್ಕೂ ಹೆಚ್ಚು ಪ್ರಯಾಣಿಕರು ಅಸುನೀಗಿದ್ದಾರೆ. 1 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು.
ಇದನ್ನೂ ಓದಿ: Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ