ಶಿವಮೊಗ್ಗ: 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದ 65 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಪೋಕ್ಸೋ ನ್ಯಾಯಾಲಯ ತೀರ್ಪು (Court Verdict) ನೀಡಿದೆ.
ಶಿವಮೊಗ್ಗದ ನಾಗಪ್ಪ ಶಿಕ್ಷೆಗೆ ಒಳಪಟ್ಟ ಅಪರಾಧಿ. ಈತನಿಗೆ ಜೀವಾವಧಿ ಶಿಕ್ಷೆ ಜತೆಗೆ 60 ಸಾವಿರ ರೂ. ದಂಡ ವಿಧಿಸಿ ಪೋಕ್ಸೋ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ.
ಏನಿದು ಪ್ರಕರಣ?
2020ರ ಅ.13ರಂದು ಶಿವಮೊಗ್ಗದಲ್ಲಿ ನಾಗಪ್ಪ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಪ್ರಕರಣದ ಜಾಡುಹಿಡಿದ ಪೊಲೀಸರು ಈತನನ್ನು ಬಂಧಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಪಿಐ ಅಭಯ್ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದಾರೆ.
ಇದನ್ನೂ ಓದಿ | ಬಿಬಿಎಂಪಿ ಚೀಫ್ ಎಂಜಿನಿಯರ್ ಎಂದು ಹೇಳ್ಕೊಂಡು ಓಡಾಡ್ತಿದ್ದವ ಅರೆಸ್ಟ್, ಸಿಎಂ ಕಚೇರಿಗೆ ಬಂದಾಗ ಸಿಕ್ಕಿಬಿದ್ದ!