Site icon Vistara News

ಸೆ.14ರಂದು ರಾಜ್ಯದ ಹತ್ತು ಮಹಾನಗರ ಪಾಲಿಕೆಗಳು ಬಂದ್

ಪೌರಕಾರ್ಮಿಕರ

ಬೆಂಗಳೂರು: ರಾಜ್ಯದ ಮಹಾನಗರ ಪಾಲಿಕೆಗಳಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಿಸುವಂತೆ ಒತ್ತಾಯಿಸಿ ಸೆ.14 ರಂದು ಸಿಬ್ಬಂದಿ ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ರಾಜ್ಯದ 10 ಮಹಾನಗರ ಪಾಲಿಕೆಗಳು ಬಂದ್‌ ಆಗಲಿವೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲ. ಇದರಿಂದ ಪೌರಕಾರ್ಮಿಕರಿಗೆ ಇದರಿಂದ ಯಾವುದೇ ಉಪಯೋಗವಾಗುತ್ತಿಲ್ಲ. ಹೀಗಾಗಿ ಮಹಾನಗರ ಪಾಲಿಕೆ ಸಿಬ್ಬಂದಿಯನ್ನೂ ಯೋಜನೆ ವ್ಯಾಪ್ತಿಗೆ ಒಳಪಡಿಸಿ, ಆರೋಗ್ಯ ಸೌಲಭ್ಯ ಒದಗಿಸಬೇಕು ಎಂದು, ಸಿಬ್ಬಂದಿ ಒಂದು ದಿನದ ಮಟ್ಟಿಗೆ ಕರ್ತವ್ಯ ಬಹಿಷ್ಕರಿಸಿ, ಹೋರಾಟ ಮಾಡಲು ನಿರ್ಧರಿಸಿದ್ದಾರೆ. ಬುಧವಾರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಕೆಲಸ ಕಾರ್ಯ ಸ್ಥಗಿತಗೊಳಿಸಿ, ಪಾಲಿಕೆಗಳ ಸಿಬ್ಬಂದಿ ಪ್ರತಿಭಟನೆ ಮಾಡಲಿದ್ದಾರೆ.

ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರು ಮತ್ತು ಕುಟುಂಬ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್‌ಎಸ್‌) ಯೋಜನೆ ಜಾರಿ ಮಾಡಲಾಗಿದೆ. ಆದರೆ ಯೋಜನೆ ವ್ಯಾಪ್ತಿಯಿಂದ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಹೊರಗಿಟ್ಟಿರುವುದನ್ನು ವಿರೋಧಿಸಿ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿರುವ ಸಂಘಗಳು
1.ದಾವಣಗೆರೆ ಮಹಾನಗರ ಪಾಲಿಕೆ ನೌಕರರ ಸಂಘ
2.ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ನೌಕರರ ಸಂಘ
3.ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘ
4.ಮಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘ
5.ಕಲಬುರಗಿ ಮಹಾನಗರ ಪಾಲಿಕೆ ನೌಕರರ ಸಂಘ
6.ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘ
7.ಬೆಳಗಾವಿ ಮಹಾನಗರ ಪಾಲಿಕೆ ನೌಕರರ ಸಂಘ
8.ಬಳ್ಳಾರಿ ಮಹಾನಗರ ಪಾಲಿಕೆ ನೌಕರರ ಸಂಘ
9.ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ
10.ತುಮಕೂರು ಮಹಾನಗರ ಪಾಲಿಕೆ ನೌಕರರ ಸಂಘ

ಇದನ್ನೂ ಓದಿ | ನಾವೂ ಕಪ್ಪು ಬಾವುಟ ತೋರಿಸಿ, ಮೊಟ್ಟೆ ಹೊಡೆದೇ ಬಂದಿದ್ದೀವಿ ಗೊತ್ತ?: ಸರ್ಕಾರಕ್ಕೆ ಸಿದ್ದರಾಮಯ್ಯ ಆವಾಜ್‌

Exit mobile version