Site icon Vistara News

Coronavirus News: ಮಂಗಳವಾರ 148 ಮಂದಿಗೆ ಕೊರೊನಾ ಸೋಂಕು; ಒಬ್ಬರ ಸಾವು

Covid-19

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 148 ಕೊರೊನಾ ಪಾಸಿಟಿವ್‌ ಪ್ರಕರಣಗಳು (Coronavirus News) ಪತ್ತೆಯಾಗಿದ್ದು, ಇದರಿಂದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1144ಕ್ಕೆ ಏರಿಕೆಯಾಗಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ಒಬ್ಬರು ಮೃತಪಟ್ಟಿದ್ದು, ಸೋಂಕಿನಿಂದ ಗುಣಮುಖರಾಗಿ 248 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ರಾಜ್ಯದಾದ್ಯಂತ ಮಂಗಳವಾರ 7305 ಮಂದಿಗೆ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 148 ಮಂದಿಗೆ ಸೋಂಕು ದೃಢಪಟ್ಟಿದೆ. 1144 ಸಕ್ರಿಯ ಪ್ರಕರಣಗಳಲ್ಲಿ 1089 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 55 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಅಂದರೆ 545 ಸಕ್ರಿಯ ಪ್ರಕರಣಗಳಿವೆ.

60 ವರ್ಷ ಮೇಲ್ಪಟ್ಟವರಿಗೆ ಕೋವಿಡ್‌ ಲಸಿಕೆ; ರಾಜ್ಯ ಸರ್ಕಾರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕೊರೊನಾ (Coronavirus News) ರೂಪಾಂತರ ಜೆ.ಎನ್- 1 ಸೋಂಕು ಕಾಣಿಸಿಕೊಂಡಿದ್ದರೂ ಜನತೆ ಆತಂಕಗೊಳ್ಳುವುದು ಬೇಡ. ಈ ಸಂಬಂಧ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅಲ್ಲದೆ, 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ (Medical Education Minister Dr Sharan Prakash Patil) ಸಲಹೆ ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖಾ ವ್ಯಾಪ್ತಿಗೆ ಒಳಪಡುವ ವಿವಿಧ ಆಸ್ಪತ್ರೆಗಳ ಮುಖ್ಯಸ್ಥರು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರ ಜತೆ ಸಭೆ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಹಾಗೂ ಪೂರ್ವ ಸಿದ್ದತೆಗಳ ಕುರಿತು ಮಾಹಿತಿ ಪಡೆದುಕೊಂಡರು.

ರೂಪಾಂತರ ಜೆ.ಎನ್-1 ಸೋಂಕು ಕಾಣಿಸಿಕೊಂಡಿದ್ದರೂ ಇದು ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ, ಹಾಗೂ ತಜ್ಞರೇ ಹೇಳಿದ್ದಾರೆ. ಆದರೂ ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜನಜಾಗೃತಿ ಮೂಡಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಕ್ಕೆ 30 ಸಾವಿರ ಕೋವಿಡ್ ವ್ಯಾಕ್ಸಿನ್ ಬಂದಿದೆ. ಇದರ ಕೊರತೆಯಾಗದಂತೆ ಎಲ್ಲ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದರು.

ಹೊಸ ಲಸಿಕೆ ಬಗ್ಗೆ ನಿರ್ದೇಶನ ಬಂದಿಲ್ಲ

ರಾಜ್ಯದಲ್ಲಿ ಪ್ರತಿಯೊಬ್ಬ ಅರ್ಹರಿಗೆ ಕೋವಿಡ್ ಲಸಿಕೆ ನೀಡುವ ಅಗತ್ಯವಿಲ್ಲ 60 ವರ್ಷ ಹಾಗೂ ದೀರ್ಘವ್ಯಾದಿಯಿಂದ ಬಳಲುತ್ತಿರುವವರು ಬುಧವಾರದಿಂದಲೇ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ವಾಕ್ಸಿನ್ ತೆಗೆದುಕೊಳ್ಳಬಹುದು. ಒಂದು ಮತ್ತು 2ನೇ ಕೋವಿಡ್ ಸಂದರ್ಭದಲ್ಲಿ ಯಾವ ಲಸಿಕೆಯನ್ನು ನೀಡಲಾಗಿತ್ತೋ ಅದೇ ಲಸಿಕೆಯನ್ನು ನೀಡಲಿದ್ದೇವೆ. ಹೊಸ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರದಿಂದ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದರು.

ಇದನ್ನೂ ಓದಿ | Crime News: ಇನ್ಶೂರೆನ್ಸ್‌ ಹಣಕ್ಕಾಗಿ ಗೆಳೆಯನನ್ನೇ ಕೊಂದ ಪಾಪಿಯನ್ನು ಪತ್ತೆ ಹಚ್ಚಿದ್ದು ಫೋನ್‌ ಕರೆ

ಪ್ರಸ್ತುತ ರಾಜ್ಯದಲ್ಲಿ ಕಾಣಿಸಿಕೊಂಡಿರುವ ಜೆಎನ್-1 ರೂಪಾಂತರ ಸೋಂಕು ಬಹುಬೇಗನೆ ಹರಡುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹರಡಬಹುದೆಂದು ತಜ್ಞರು ಹೇಳಿದ್ದಾರೆ. ಒಂದು ವೇಳೆ ಹಬ್ಬಿದರೂ ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಕಡಿಮೆ ಎಂಬ ಮಾಹಿತಿ ಇದೆ. ಸಾರ್ವಜನಿಕರು ಅನಗತ್ಯವಾಗಿ ಆತಂಕ ಪಡಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮನವಿ ಮಾಡಿದರು.

Exit mobile version