ಬೆಂಗಳೂರು : ತಿರು ಓಣಂ ಹಬ್ಬ ಆಚರಣೆ (onam 2022) ಹಿನ್ನೆಲೆಯಲ್ಲಿ KSRTC ವತಿಯಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ನಿಯೋಜನೆ ಮಾಡಲಾಗಿದೆ. ಗುರುವಾರ (ಸೆ.8) ತಿರು ಓಣಂ ಹಬ್ಬದ ನಿಮಿತ್ತ ಸೆಪ್ಟೆಂಬರ್ ೬ ಮತ್ತು ೭ ರಂದು ಬೆಂಗಳೂರಿನಿಂದ ಹೆಚ್ಚುವರಿ ಬಸ್ಸುಗಳ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಹೆಚ್ಚುವರಿ ಬಸ್‌ಗಳು ನಿಯೋಜಿಸಿದೆ. ಕೇರಳದ ಕಣ್ಣೂರು, ಕೋಯಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಶಿರೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ ವಾಹನಗಳ ಕಾರ್ಯಾಚರಣೆ ಮಾಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವೂ ಕಲ್ಪಿಸಿದೆ.
ಇದನ್ನೂ ಓದಿ | ಗಣೇಶನ ಹಬ್ಬಕ್ಕೆ ಊರಿಗೆ ಹೋಗ್ಬೇಕಾ? ಟಿಕೆಟ್ ಸಿಕ್ಕಿಲ್ಲ ಅಂತ ಬೇಜಾರಾಗ್ಬೇಡಿ, KSRTCಯಿಂದ 500 ಹೆಚ್ಚುವರಿ ಬಸ್
ಇ-ಟಿಕೆಟ್ ಬುಕಿಂಗ್ ಅನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಲು ಸೂಚನೆ ನೀಡಿದೆ. ನಾಲ್ಕು ಹಾಗೂ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇ. 5 ರಷ್ಟು ರಿಯಾಯಿತಿ ಇದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಿದೆ.