Site icon Vistara News

Umesh Katti | ರಾಜ್ಯಾದ್ಯಂತ ಒಂದು ದಿನದ ಶೋಕಾಚರಣೆ ಘೋಷಣೆ

Umesh katti

ಬೆಂಗಳೂರು: ಸಚಿವ ಉಮೇಶ್‌ ಕತ್ತಿ (Umesh Katti) ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ರಾಜ್ಯ ಸರ್ಕಾರ ಘೋಷಿಸಿದೆ.

ಸೆ.7ರಂದು ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲು ನಿರ್ದೇಶಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ ಮಾರ್ಗಸೂಚಿ ಅನ್ವಯ ಅಂತ್ಯಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ.

ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿರುವ ಸಿಎಂ

ಉಮೇಶ್‌ ಕತ್ತಿ ಅವರ ಅಂತಿಮ ವಿಧಿವಿಧಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಳ್ಳಲಿದ್ದಾರೆ. ಬೆಲ್ಲದ ಬಾಗೇವಾಡಿಯಲ್ಲಿ ನಡೆಯಲಿರುವ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳಲಿದ್ದಾರೆ. ಸಿಎಂ ಜೊತೆ ಕಂದಾಯ ಸಚಿವ ಆರ್‌. ಅಶೋಕ್ ಅವರೂ ತೆರಳಲಿದ್ದಾರೆ.

ಇದನ್ನೂ ಓದಿ | ಉಮೇಶ್‌ ಕತ್ತಿ ಶರೀರ ಏರ್‌ಲಿಫ್ಟ್‌ | ಸಂಕೇಶ್ವರ, ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಸಂಸ್ಕಾರ

Exit mobile version