Site icon Vistara News

Rain News: ಕಡೂರಿನಲ್ಲಿ ಸಿಡಿಲು ಬಡಿದು ಒಬ್ಬನ ಸಾವು, ನಾಲ್ವರಿಗೆ ಗಾಯ

Mukesh dies after being struck by lightning

#image_title

ಚಿಕ್ಕಮಗಳೂರು: ಮಲೆನಾಡಿನಲ್ಲಿ ವಿವಿಧೆಡೆ ಭಾನುವಾರ ಸಂಜೆ ಭಾರಿ ಮಳೆಯಾಗಿದೆ. ಈ ನಡುವೆ ದೇವಸ್ಥಾನದ ಹೊರಾಂಗಣದಲ್ಲಿ ಕುಳಿತಿದ್ದಾಗ ಸಿಡಿಲು ಬಡಿದು ಒಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ (Rain News) ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.

ತರೀಕೆರೆ ತಾಲೂಕಿನ ಗಂಜಿಗೆರೆ ಗ್ರಾಮದ ಮುಕೇಶ್ (30) ಮೃತರು. ಸುದೀಪ್, ಸಂಕೇತ್, ನಾಗಾರ್ಜುನ್ ಮತ್ತು ಶೃತಿ ಗಾಯಾಳುಗಳು. ಮುಕೇಶ್‌ ಕುಟುಂಬ ಸಮೇತ ಕಡೂರು ತಾಲೂಕಿನ ಯಗಟಿಪುರದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯಕ್ಕೆ ಆಗಮಿಸಿದ್ದರು.

ಮಗುವಿನ ಮುಡಿ ಹರಕೆಯ ಪೂಜೆ ಸಲ್ಲಿಸಿ ವಾಪಸ್ ಊರಿಗೆ ತೆರಳುವ ಮುನ್ನ ದೇವಾಲಯದ ಆವರಣದಲ್ಲಿದ್ದಾಗ ಸಿಡಿಲು ಬಡಿದಿದೆ. ಮುಕೇಶ್ ಗಂಭೀರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಯಗಟಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಉಳಿದ ನಾಲ್ವರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಕಳುಹಿಸಲಾಗಿದೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಚಿಕ್ಕಮಗಳೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗಿದೆ. ಸತತ ಎರಡು ಗಂಟೆ ಕಾಲ ನಿರಂತರವಾಗಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇದನ್ನೂ ಓದಿ | Free Bus Service : ವಿದ್ಯುತ್‌ ದರ ಏರಿಕೆಯಲ್ಲಿ ಕಾಂಗ್ರೆಸ್ ಸರ್ಕಾರದ ಪಾತ್ರವಿಲ್ಲ : ಸಿಎಂ ಸಿದ್ದರಾಮಯ್ಯ

ದೇವದುರ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು

ರಾಯಚೂರು: ಜಿಲ್ಲೆಯ ದೇವದುರ್ಗದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವಿಗೀಡಾಗಿದ್ದಾರೆ. ಗೆಜ್ಜೆಬಾವಿದೊಡ್ಡಿ ಗ್ರಾಮದ ಮೌನೇಶ (35) ಮೃತರು. ಸಂಜೆ 5 ಗಂಟೆಗೆ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ದುರ್ಘಟ‌ನೆ ನಡೆದಿದೆ. ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಭೇಟಿ ನೀಡಿ ಪರಿಶೀಲಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ವರುಣನ ಅಬ್ಬರ

ಭಾರೀ ಮಳೆಗೆ ಹೈರಾಣಾದ ಸಾರ್ವಜನಿಕರು | Yadgiri | Heavy Rain | Vistara News

ಯಾದಗಿರಿ: ಜಿಲ್ಲೆಯ ವಿವಿಧೆಡೆ ಭಾನುವಾರ ಭಾರಿ ಮಳೆ ಸುರಿದಿದೆ. ಶಹಾಪುರದಲ್ಲಿ ವರುಣನ‌ ಅಬ್ಬರಕ್ಕೆ ರಸ್ತೆಗಳು ಜಲಾವೃತವಾಗಿವೆ. ಅಂಗಡಿಗಳಿಗೆ ಮಳೆ ನೀರು ನುಗ್ಗಿದ್ದರಿಂದ ವ್ಯಾಪಾರಿಗಳು ಪರದಾಡಿದರು. ಬಸವೇಶ್ವರ ವೃತ್ತ, ತರಕಾರಿ ಮಾರುಕಟ್ಟೆ ರಸ್ತೆ ಸಂಪೂರ್ಣ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು. ಶಹಾಪುರ ಠಾಣೆ ಆವರಣದೊಳಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

Exit mobile version