ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ- ಮಾನವ ಸಂಘರ್ಷ ಮಂದುವರಿದಿದೆ. ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಾಡಬೇಗೂರು ಕಾಲೋನಿಯಲ್ಲಿ ಹುಲಿ ದಾಳಿಗೆ (Tiger Attack) ಮತ್ತೊಬ್ಬರ ಬಲಿಯಾಗಿದೆ. ಶುಂಠಿ ಹೊಲದಲ್ಲಿ ಕುಳಿತಿದ್ದ ವೇಳೆ ಹುಲಿ ದಾಳಿ ಮಾಡಿ ವ್ಯಕ್ತಿಯನ್ನು ಕೊಂದಿದೆ.
ಬಿ.ಮಟಗೆರೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(45) ಮೃತರು. ಟೀ ಕುಡಿದು ಶುಂಠಿ ಹೊಲಕ್ಕೆ ಬಾಲಾಜಿ ನಾಯ್ಕ. ತೆರಳಿದ್ದರು. ಈ ವೇಳೆ ಏಕಾಏಕಿ ಹುಲಿ ದಾಳಿ ಮಾಡಿ ಎಳೆದೊಯ್ದಿದೆ. ಈ ವೇಳೆ ಸ್ಥಳೀಯರು ಗಮನಿಸಿ, ಕೂಗಾಡಿದ್ದಾರೆ. ನಂತರ ಹುಲಿ ಅಲ್ಲಿಂದ ಪರಾರಿಯಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ವನ್ಯಜೀವಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಇತ್ತೀಚೆಗೆ ನಂಜನಗೂಡು ತಾಲೂಕಿನ ಮಹದೇವನಗರ ಗ್ರಾಮದ ದನಗಾಹಿ ಮೇಲೆ ಹುಲಿ ದಾಳಿ ಮಾಡಿತ್ತು. ಹೀಗಾಗಿ ಹುಲಿ ಪತ್ತೆಗೆ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಹುಲಿ ಕಾರ್ಯಾಚರಣೆಗೆ ಪಾರ್ಥ ಸಾರಥಿ ಹಾಗೂ ಧರ್ಮ ಆನೆ ಎಂಟ್ರಿ ನೀಡಿವೆ. 30ಕ್ಕೂ ಹೆಚ್ಚು ಕಡೆಗಳಲ್ಲಿ ಕ್ಯಾಮರಾ ಅಳವಡಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಹುಲಿ ಹೆಜ್ಜೆ ಗುರುತು ಜಾಡು ಹಿಡಿದು ಹೊರಟ ಅರಣ್ಯ ಇಲಾಖೆ ಸಿಬ್ಬಂದಿ ಹೊರಟಿದ್ದಾರೆ. ಆದರೆ, ನಾಲ್ಕು ದಿನವಾದರೂ ಹುಲಿ ಸುಳಿವು ಸಿಕ್ಕಿಲ್ಲ.
ಇದನ್ನೂ ಓದಿ | Murder Case : ಸರ್ಕಾರಿ ಕೆಲಸ ಇಲ್ಲವೇ ಪ್ರತಿಮಾಳ ಕೊಲೆ; ನಿರ್ಧರಿಸಿಯೇ ಬಂದಿದ್ದ ಹಂತಕ ಕಿರಣ್
ಸಿಡಿಲು ಬಡಿದು ಎರಡು ಹಸುಗಳು ಸಾವು
ಮೈಸೂರು: ಸಿಡಿಲು ಬಡಿದು ಎರಡು ಹಸುಗಳು ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಸಮೀಪದಲ್ಲೇ ಇದ್ದ ರೈತ ಚನ್ನಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದೆ. ಹೀಗಾಗಿ ಹಸುಗಳನ್ನು ಹುಣಸೆ ಮರದ ಕೆಳಗಡೆ ಕಟ್ಟಿದ್ದರು. ಈ ವೇಳೆ ಸಿಡಿಲು ಬಡಿದು ಎರಡು ಹಸುಗಳು ಮೃತಪಟ್ಟಿವೆ.
ಮೃತ ಹಸುಗಳ ಪೈಕಿ ಒಂದು ಹಸು ಗರ್ಭಿಣಿಯಾಗಿತ್ತು. ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಚನ್ನಶೆಟ್ಟಿ ಮನವಿ ಮಾಡಿದ್ದಾರೆ.
ಹರಪನಹಳ್ಳಿಯಲ್ಲಿ ಸಿಡಿಲಿಗೆ 30ಕ್ಕೂ ಹೆಚ್ಚು ಕರುಗಳ ಬಲಿ
ವಿಜಯನಗರ: ಸಿಡಿಲಿಗೆ ಮೂವತ್ತಕ್ಕೂ ಹೆಚ್ಚು ಕರುಗಳ ಬಲಿಯಾಗಿರುವ ಘಟನೆ ಹರಪನಹಳ್ಳಿ ತಾಲೂಕಿನ ಗಡಿಗುಡಾಳ್ ಗ್ರಾಮದಲ್ಲಿ ನಡೆದಿದೆ. ಮಳೆ (Rain News) ಬರುತ್ತಿದ್ದಾಗ ಮರದ ಕೆಳಗೆ ಇದ್ದ ಕುರಿ ಹಿಂಡಿಗೆ ಸಿಡಿಲು ಬಡಿದು ಅನಾಹುತ ಸಂಭವಿಸಿದೆ.
ನಾಲ್ವರು ಕುರಿಗಾಹಿಗಳಿಗೆ ಸೇರಿದ ಮೂವತ್ತಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಕಂದಾಯ ಹಾಗೂ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಸೂಕ್ತ ಪರಿಹಾರ ನೀಡುವಂತೆ ಕುರಿಗಾಹಿಗಳು ಆಗ್ರಹಿಸಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.