ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ನಿಮಿತ್ತ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕ, ಹೆಸರು ಮತ್ತು ಜಕಾತಿ ಬದಲಾವಣೆ ಇನ್ನಿತರ ಸೇವೆಗಳಲ್ಲಿ ನವೆಂಬರ್ 24ರಂದು ಬೆಳಗ್ಗೆ 12.01 ಗಂಟೆಯಿಂದ ನ. 26ರಂದು ರಾತ್ರಿ 11.59ರವರೆಗೆ RAPDRP ನಗರ ಪ್ರದೇಶದ ಗ್ರಾಹಕರಿಗೆ ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ಐಸಿಟಿ ಮತ್ತು ಎಂಐಎಸ್ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.
ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಕಂಡ ನಗರ ಉಪವಿಭಾಗದ ಗ್ರಾಹಕರಿಗೆ ಮೇಲೆ ತಿಳಿಸಿರುವ ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ. ಅಡಚಣೆಗಾಗಿ ವಿಷಾದಿಸಲಾಗಿದ್ದು, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಬೆಸ್ಕಾಂ ತಿಳಿಸಿದೆ.
ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ-1, ದಾವಣಗೆರೆ -2, ಚಿತ್ರದುರ್ಗ, ತುಮಕೂರು-1, ತುಮಕೂರು-2, ಕ್ಯಾತಸಂದ್ರ, ಶಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು, ಗೌರಿಬಿದನೂರು
ಸೆಸ್ಕ್: ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್. ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳಗಾಲ, ಹಾಸನ, ಚನ್ನರಾಯಪಟ್ಟಣ,
ಮೆಸ್ಕಾಂ: ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು
ಜೆಸ್ಕಾಂ: ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವ ಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್, ಹೊಸಪೇಟೆ
ಇದನ್ನೂ ಓದಿ | Education News : ಪ್ರಾಥಮಿಕ ಶಾಲಾ ಶಿಕ್ಷಕರ ಕೊರತೆ ನಿವಾರಣೆಗೆ ಕ್ರಮ; ನೂತನ ಶಿಕ್ಷಕರ ನಿಯೋಜನೆ
ಹೆಸ್ಕಾಂ : ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೇಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವಣೂರು, ಶಿರಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ ರಾಣೆಬೆನ್ನೂರು, ವಿಜಯಪುರ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ