Site icon Vistara News

Karnataka Politics: ಆರ್.ಆರ್.ನಗರದಲ್ಲಿ ಆಪರೇಷನ್ ಹಸ್ತ; ಶಾಸಕ ಮುನಿರತ್ನ ಆಪ್ತರು ಕಾಂಗ್ರೆಸ್‌ ಸೇರ್ಪಡೆ

BJP leaders join Congress

ಬೆಂಗಳೂರು: ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ (Karnataka Politics) ಆರ್.ಆರ್.ನಗರ ಕ್ಷೇತ್ರದಲ್ಲಿ ಆಪರೇಷನ್ ಹಸ್ತ ನಡೆಸುವ ಮೂಲಕ ಬಿಜೆಪಿ ಶಾಸಕ ಮುನಿರತ್ನಗೆ ಡಿಕೆ ಬ್ರದರ್ಸ್ ಬಿಗ್ ಶಾಕ್ ನೀಡಿದ್ದಾರೆ. ಮುನಿರತ್ನ ಅತ್ಯಾಪ್ತ ಎಂದೇ ಗುರುತಿಸಿದ್ದ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಸೇರಿ ಹಲವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಶಾಸಕ ಮುನಿರತ್ನ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ವೇಲು ನಾಯ್ಕರ್, ಮೋಹನ್ ಕುಮಾರ್, ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಕಳೆದ ಅವಧಿಯಲ್ಲಿ ಪಾಲಿಕೆ ಸದಸ್ಯರಾಗಿ ಈ ಮೂವರು ಆಯ್ಕೆಯಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ವೇಲು ನಾಯ್ಕರ್‌ ಕೆಜಿಎಫ್‌ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೇಳಿದ್ದರು. ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಅವರು ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಇದೀಗ ಶಾಸಕ ಮುನಿರತ್ನ ಆಪ್ತ ವಲಯದ ಮೂವರು ಮಾಜಿ ಕಾರ್ಪೋರೇಟರ್‌ಗಳು ಕಾಂಗ್ರೆಸ್ ತೆಕ್ಕೆಗೆ ಸೇರಿದ್ದಾರೆ. ಇವರು ಸಂಸದ ಡಿ.ಕೆ. ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ.

ಇದನ್ನೂ ಓದಿ | BK Hariprasad : ಸಿಎಂ ಇಳಿಸುವ ಮಾತು ಹರಿಪ್ರಸಾದ್‌ರದ್ದೋ, ಡಿಕೆಶಿಯದ್ದೋ? ಮಾಳವೀಯ ಪ್ರಶ್ನೆ

ಆಲ್ಕೋಹಾಲು, ಹಾಲಿನ ಮೂಲಕವೂ ಸರ್ಕಾರದಿಂದ ಹಣ ವಸೂಲಿ; ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ಬಿಜೆಪಿ ಜತೆ ಸೇರಿಕೊಂಡು ರಾಜ್ಯದ ಕಾಂಗ್ರೆಸ್‌ ಸರ್ಕಾರದ (Congress Government) ಮೇಲೆ ಮುಗಿಬಿದ್ದಿರುವ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರು ಈಗ ಹಾಲು ಮತ್ತು ಆಲ್ಕೋಹಾಲು (Milk and Alcohol Costlier) ಬೆಲೆ ಏರಿಕೆಯನ್ನು (Price rise) ಗುರಿಯಾಗಿಟ್ಟುಕೊಂಡು ಸರಕಾರದ ಮೇಲೆಗೆ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ. ಹಿಂದೆ ತಮ್ಮ ಕಿವಿಗೆ ತಾವೇ ಹೂವಿಟ್ಟುಕೊಂಡಿದ್ದ ಕಾಂಗ್ರೆಸಿಗರು ಈಗ ಜನರ ತಲೆ ಮೇಲೆ ಫ್ಲವರ್‌ ಪಾಟ್‌ ಇಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಬೆಲೆ ಏರಿಕೆ ಗ್ಯಾರಂಟಿ ಎಂಬ ಹ್ಯಾಷ್‌ ಟ್ಯಾಗ್‌ ಮೂಲಕ ತಮ್ಮ ಮಾತುಗಳನ್ನು ಅವರು ಹಂಚಿಕೊಂಡಿದ್ದಾರೆ.

ಆಗ ಕಿವಿ ಮೇಲೆ ಹೂವು, ಈಗ ಜನರ ತಲೆ ಮೇಲೆ ಫ್ಲವರ್‌ ಪಾಟ್‌

ಆಲ್ಕೊಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ @INCKarnataka ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ!!!

ಬೆಲೆ ಏರಿಕೆಯ ಸರಣಿ ಶಾಕ್‌ ನೀಡುತ್ತಿರುವ ಕಾಂಗ್ರೆಸ್‌

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ಬಾಯಿಬಾಯಿ ಬಡಿದುಕೊಂಡಿತ್ತು.ದೊಡ್ಡ ಬಾನಗಡಿಯನ್ನೇ ಎಬ್ಬಿಸಿತ್ತು. ಅಧಿಕಾರಕ್ಕೆ ಬಂದೊಡನೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಹೀಗಿದೆ ನೋಡಿ ಕೈ ಕರಾಮತ್ತು. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ.

ಇದನ್ನೂ ಓದಿ : Karnataka Politics : NICE ಹೆಸರಲ್ಲಿ ನೈಸಾಗಿ ಬೆಸೆದುಕೊಂಡ ಕುಮಾರಸ್ವಾಮಿ, ಬೊಮ್ಮಾಯಿ! ಜಂಟಿ ಮಾತೇನು?

ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯ ಖಚಿತ!

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ.

ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಎಲ್ಲಿ?

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ.

Exit mobile version