Site icon Vistara News

Operation Kamala: ಸಿದ್ದರಾಮಯ್ಯ ತವರಲ್ಲಿ ಆಪರೇಷನ್ ಕಮಲ; ಸಿಎಂ ಆಪ್ತನನ್ನು ಬಿಜೆಪಿಗೆ ಸೆಳೆದ ವಿಜಯೇಂದ್ರ

Gurupadaswamy

ಮೈಸೂರು: ಸಿಎಂ ತವರಲ್ಲಿ ಆಪರೇಷನ್ ಕಮಲದ (Operation Kamala) ಮೂಲಕ ಸಿದ್ದರಾಮಯ್ಯ ಅವರಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟಕ್ಕರ್ ನೀಡಿದ್ದಾರೆ. ಲೋಕಸಭಾ ಚುನಾವಣೆಯ (Lok Sabha Election 2024) ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿದ್ದರಾಮಯ್ಯ ಅವರ ಆಪ್ತ ಗುರುಪಾದಸ್ವಾಮಿಯನ್ನು ಬಿಜೆಪಿಗೆ ಸೆಳೆದಿದ್ದು, ವರುಣ ಕ್ಷೇತ್ರದ ಪ್ರಬಲ ಲಿಂಗಾಯತ ಸಮುದಾಯದ ನಾಯಕ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ್ದಾರೆ.

ಸಿದ್ದರಾಮಯ್ಯ ಜತೆಯಲ್ಲಿದ್ದ ಗುರುಪಾದಸ್ವಾಮಿ ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದರು. ಕಾಂಗ್ರೆಸ್‌ನಲ್ಲಿ ಯಾವುದೇ ಹುದ್ದೆ ದೊರೆಯದ ಕಾರಣ ಕಾಂಗ್ರೆಸ್ ತೊರೆಯಲು ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ಗೆಲ್ಲಿಸಿದ ನಮಗೆ ಯಾವುದೇ ಹುದ್ದೆಯಿಲ್ಲ. ಅದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಿದವರಿಗೆ ಸಿಎಂ ಮಾನ್ಯತೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ನಡೆಯ ಬಗ್ಗೆ ಬೇಸತ್ತು ಬಿಜೆಪಿ ಸೇರ್ಪಡೆಯಾಗುತ್ತಿರುವುದಾಗಿ ಹೇಳಿದ್ದಾರೆ. ಗುರುವಾರ ವಿಜಯೇಂದ್ರ ನೇತೃತ್ವದಲ್ಲಿ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ | Lok Sabha Election 2024: ಒಕ್ಕಲಿಗ ಪಾಲಿಟಿಕ್ಸ್‌ಗೆ ನಿರ್ಮಲಾನಂದನಾಥ ಶ್ರೀಗಳ ಎಳೆದು ತಂದ ಡಿಕೆಶಿ! ತಿರುಗಿಬಿದ್ದ ನಾಯಕರು

ಗೆಲ್ಲಿಸಿದ ನನಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ?

ಮನೆಯಲ್ಲಿ ಸಿದ್ದರಾಮಯ್ಯ ಫೋಟೋ ಇಟ್ಟುಕೊಂಡಿದ್ದೇನೆ. ವರುಣದಲ್ಲಿ ಅವರನ್ನು ಗೆಲ್ಲಿಸಿದ ನನಗೆ ಏನು ಮಾಡಿದ್ದಾರೆ ಎಂದು ಗುರುಪಾದಸ್ವಾಮಿ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಚಾಮುಂಡೇಶ್ವರಿಯಲ್ಲಿ 36 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದರು. ಆ ಕ್ಷೇತ್ರದವರನ್ನು ಮುಡಾ ಅಧ್ಯಕ್ಷರಾಗಿ ಮಾಡಿದರು. ವರುಣದಲ್ಲಿ ಸತತವಾಗಿ ಗೆಲ್ಲಿಸಿಕೊಂಡು ಬಂದ ನಮ್ಮನ್ನು ಮಾತೂ ಆಡಿಸಿಲ್ಲ. ವೀರಶೈವ ಸಮುದಾಯಕ್ಕೆ ಸೇರಿದ ನನ್ನ ಕೊಡುಗೆ ಏನೂ ಇಲ್ಲವಾ? ಕೃಷ್ಣರಾಜ ಕ್ಷೇತ್ರಕ್ಕೆ ಎಂಎಲ್‌ಎ, ಮೈಸೂರು ಕ್ಷೇತ್ರಕ್ಕೆ ಎಂಪಿ ಟಿಕೆಟ್ ಕೇಳಿದ್ದೆ.‌ ನನ್ನನ್ನು ಅಸಡ್ಡೆ ಮಾಡಿದ್ದಕ್ಕೆ ಬೇಸರ ಇದೆ. ಚಾಮರಾಜನಗರ ಅಭ್ಯರ್ಥಿ ಬಾಲರಾಜ್ ಸಂಪರ್ಕಿಸಿದ್ದರು. ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.

ತರೀಕೆರೆ ಕಾಂಗ್ರೆಸ್ ಮಾಜಿ ಶಾಸಕ ಎಸ್‌.ಎಂ. ನಾಗರಾಜು ಬಿಜೆಪಿ ಸೇರ್ಪಡೆ

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ಬಿದ್ದಿದೆ. ತರೀಕೆರೆ ಕಾಂಗ್ರೆಸ್ ಮಾಜಿ ಶಾಸಕ ಎಸ್‌.ಎಂ. ನಾಗರಾಜು ಹಾಗೂ ತರೀಕೆರೆ ಕಾಂಗ್ರೆಸ್ ಮುಖಂಡ ಧ್ರುವ ಕುಮಾರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇವರಷ್ಟೇ ಅಲ್ಲದೇ ತರೀಕೆರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಿ.ಟಿ.ರವಿ ನೇತೃತ್ವದಲ್ಲಿ ನಡೆದ ಉಡುಪಿ ಚಿಕ್ಕಮಗಳೂರು ಲೋಕಸಭಾ ಪ್ರಚಾರ ಸಭೆಯಲ್ಲಿ ಇವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಕಾಂಗ್ರೆಸ್ ತೊರೆದು ಹಲವು ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬಹಿರಂಗ ಸಭೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಮೋದಿ ಅಕ್ಕಿಗೆ ತಮ್ಮ ಫೋಟೋ ಹಾಕಿಕೊಂಡು ಓಡಾಡುತ್ತಿದ್ದಾರೆ. ಇವರು ಒಂದೇ ಒಂದು ಕಾಳು ಅಕ್ಕಿಯನ್ನೂ ಕೊಟ್ಟಿಲ್ಲ. ರಾಜ್ಯದಲ್ಲಿ 18-20 ಸ್ಥಾನ ಗೆಲ್ಲುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಹೇಳಿಕೆ ಜಗತ್ತಿನ 8ನೇ ಅದ್ಭುತ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ 28ಕ್ಕೆ 28 ಸ್ಥಾನ ಗೆಲ್ಲುತ್ತೆ ಎಂದು ಹೇಳಿದರು.

ಇದನ್ನೂ ಓದಿ | Lok Sabha Election 2024: ಏಪ್ರಿಲ್‌ 14ಕ್ಕೆ ಮೋದಿ ರೋಡ್‌ ಶೋ; ರೆಡಿಯಾಗಿದೆ 4 ರೂಟ್‌ಮ್ಯಾಪ್‌!

ಸರ್ಕಾರ ಬಂದು 9 ತಿಂಗಳಾಯಿತು, ಒಂದು ರೂಪಾಯಿ ಕೆಲಸ ಆಗಿಲ್ಲ. ಇಂದು ಕಾಂಗ್ರೆಸ್ ಶಾಸಕರಿಗೆ ಅನುದಾನ ತರಲು ಆಗುತ್ತಿಲ್ಲ. ಸರ್ಕಾರ ರೈತರು, ಬಡವರ ಹೆಸರಲ್ಲಿ ಮೊಸಳೆ ಕಣ್ಣೀರು ಹಾಕುತ್ತಿದೆ. ಇಂತಹ ಕೆಟ್ಟ ಸರ್ಕಾರ ಎಂದೂ ನೋಡಿರಲಿಲ್ಲ. ಒಂದು ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡುವ ಪರಿಸ್ಥಿತಿ ಬಂದಿದೆ. 2-3 ತಿಂಗಳಲ್ಲಿ ಸರ್ಕಾರಿ ನೌಕರರಿಗೂ ಸಂಬಳ ಕೊಡೋದಕ್ಕೆ ಕಷ್ಟ ಆಗುತ್ತೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತೆ ಎಂದು ಹೇಳಿದರು.

Exit mobile version