Operation Leopard | ಬಲೆಗೆ ಬೀಳದ ಬೆಳಗಾವಿ ಚಿರತೆ; ಸೋಮವಾರದಿಂದ ಶಾಲಾ-ಕಾಲೇಜು ಆರಂಭ - Vistara News

ಕರ್ನಾಟಕ

Operation Leopard | ಬಲೆಗೆ ಬೀಳದ ಬೆಳಗಾವಿ ಚಿರತೆ; ಸೋಮವಾರದಿಂದ ಶಾಲಾ-ಕಾಲೇಜು ಆರಂಭ

ಬೆಳಗಾವಿಯ ಚಿರತೆ ಸೆರೆ (Operation Leopard)ಕಾರ್ಯಾಚರಣೆಯನ್ನು ಅರಣ್ಯಾಧಿಕಾರಿಗಳು ಭಾನುವಾರ ಅಂತ್ಯಗೊಳಿಸಿದ್ದಾರೆ. ಸತತ ಒಂದು ತಿಂಗಳ ಕಾರ್ಯಾಚರಣೆಯಲ್ಲಿ ಕಣ್ಣು ತಪ್ಪಿಸಿ ಓಡಾಡುತ್ತಿರುವ ಚಿರತೆ ಪತ್ತೆಗಾಗಿ ಅರಣ್ಯಾಧಿಕಾರಿಗಳು ಹರಸಾಹಸ ಪಟ್ಟಿದ್ದರು. ಆದರೆ ಯಾರ ಬಲೆಗೂ ಬೀಳದ ಚಿರತೆ ನಾಪತ್ತೆಯಾಗಿದೆ.

VISTARANEWS.COM


on

Operation leopard
ಬೆಳಗಾವಿ ಚಿರತೆ ಸೆರೆಗೆ ಶೋಧ ಕಾರ್ಯಾಚರಣೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಅರಣ್ಯಾಧಿಕಾರಿಗಳಿಗೆ ಚಳ್ಳೆಹಣ್ಣು ತಿನಿಸಿ ಮಿಂಚಿ ಮರೆಯಾಗುತ್ತಿರುವ ಚಿರತೆ ಪತ್ತೆಯು ಬಿಸಿ ತುಪ್ಪದಂತೆ ಆಗಿದ್ದು, ಭಾನುವಾರದ ಕಾರ್ಯಾಚರಣೆ ಅಂತ್ಯವಾಗಿದೆ. ಸತತ 30 ದಿನ ಕಳೆದರೂ ಚಿರತೆ ಸುಳಿವು (Operation Leopard) ಸಿಗದ ಕಾರಣ ಕೂಂಬಿಂಗ್‌ ಕಾರ್ಯಾಚರಣೆ ಮುಗಿಸಿದೆ.

ಚಿರತೆ ಕಂಡು ಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರ (ಸೆ.5)ದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದ್ದಾರೆ.

ನಗರದಲ್ಲಿ ಚಿರತೆ ಕಂಡು ಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಕಾರ್ಯನಿರ್ವಹಿಸಲಿವೆ.
ಚಿರತೆ ಸಿಗದ ಹಿನ್ನೆಲೆಯಲ್ಲಿ ಪಾಲಕರು ಹಾಗೂ ಶಾಲೆಗಳು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಎಚ್ಚರಿಕೆ ವಹಿಸಬೇಕೆಂದು ಶಿಕ್ಷಣ ಇಲಾಖೆ ತನ್ನ ಜವಾಬ್ದಾರಿಯಿಂದ ಜಾರಿಗೊಂಡಿದೆ.

ಚಿರತೆ ಹೆಜ್ಜೆ ಹೀಗಿತ್ತು

ಜಾಧವ್‌ ನಗರದ ಬಳಿ ಆಗಸ್ಟ್‌ ೫ರಂದು ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಿದ ಚಿರತೆ ಬಳಿಕ ನಾಪತ್ತೆಯಾಗಿತ್ತು. ಜಾಧವ್‌ ನಗರದ ಗಾಲ್ಫ್‌ ಮೈದಾನದಲ್ಲಿ ಈ ಚಿರತೆ ಅಡಗಿಕೊಂಡಿದೆ ಎಂದು 20ಕ್ಕೂ ಹೆಚ್ಚು ದಿನಗಳಿಂದ ಹುಡುಕಾಟ ನಡೆಸಲಾಗಿತ್ತು. ಗಾಲ್ಫ್ ಮೈದಾನ ಇರುವ 250 ಎಕರೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆದಿತ್ತು.

ಇದಕ್ಕಾಗಿ 22 ಟ್ರ್ಯಾಪ್ ಕ್ಯಾಮೆರಾ, 8 ಬೋನುಗಳನ್ನು ಇರಿಸಲಾಗಿತ್ತು. ಚಿರತೆಗಾಗಿ ೫೦ ಮಂದಿ ಅರಣ್ಯ ಮತ್ತು ಪೊಲೀಸ್‌ ಸಿಬ್ಬಂದಿ ಕಾವಲು ಕಾಯುತ್ತಿದ್ದರು. ಆದರೂ ಚಿರತೆ ಕಣ್ಣಿಗೆ ಬಿದ್ದಿರಲಿಲ್ಲ. ಈ ನಡುವೆ, ಆಗಸ್ಟ್‌ ೭ ಮತ್ತು ೮ರಂದು ಸಿಸಿ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗಿತ್ತು. ಚಿರತೆಯ ಕಾರಣದಿಂದಾಗಿ ಜಾಧವ ನಗರ ಹಲವು ದಿನಗಳ ಕಾಲ ಪೂರ್ಣವಾಗಿ ಬಂದ್‌ ಆಗಿತ್ತು ಜತೆಗೆ ಶಾಲೆಗಳನ್ನೂ ಮುಚ್ಚಲಾಗಿತ್ತು.

ಆಗಸ್ಟ್‌ 19ರಂದು ಬೃಹತ್‌ ಕಾರ್ಯಾಚರಣೆಯ ಮೂಲಕ ಎಲ್ಲಿದ್ದರೂ ಹುಡುಕುವ ಪ್ರಯತ್ನವೊಂದು ನಡೆಯಿತು. ಆದರೆ, ಆಗಲೂ ಚಿರತೆ ಕಣ್ಣಿಗೆ ಕಾಣಲಿಲ್ಲ. ಗಾಲ್ಫ್‌ ಪ್ರದೇಶದಿಂದ ಚಿರತೆ ಬೇರೆಡೆಗೆ ಹೋಗಿರಬಹುದು ಎಂದು ಭಾವಿಸಲಾಗಿತ್ತು. ಆದರೆ ಮತ್ತೊಮ್ಮೆ ಆಗಸ್ಟ್‌ 22ರ ಬೆಳಗ್ಗೆ ಖಾಸಗಿ ಕಂಪನಿಯ ಬಸ್ ಚಾಲಕರೊಬ್ಬರ ಮೊಬೈಲ್‌ನಲ್ಲಿ ಚಿರತೆ ಚಲನವಲನ ಸೆರೆಯಾಗಿತ್ತು. ಹಿಂಡಲಗಾದ ರಸ್ತೆಯಲ್ಲಿ ಬಸ್ಸು ಓಡಿಸಿಕೊಂಡು ಹೋಗುವಾಗ ಚಿರತೆಯೊಂದು ಮುಖ್ಯರಸ್ತೆ ದಾಟಿ ಹೋಗಿತ್ತು.

ಬಳಿಕ ಆಗಸ್ಟ್‌ 22ರಂದೇ ಚಿರತೆ ಸೆರೆಗೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ‌ ಸಿಬ್ಬಂದಿ ಎದುರೆ ಡಬಲ್ ರೋಡ್ ಪಾಸ್ ಮಾಡಿ ಮತ್ತೆ ಗಾಲ್ಫ್ ಮೈದಾನಕ್ಕೆ ಚಿರತೆ ನುಗ್ಗಿತ್ತು. ಇದಾದ ಬಳಿಕ ಅಧಿಕಾರಿಗಳ ಕಣ್ಣಿಗೆ ಬೀಳದೇ ಟ್ಯ್ರಾಪ್‌ ಕ್ಯಾಮರಾದಲ್ಲಿ 2ಬಾರಿ ಸೆರೆಯಾಗಿತ್ತು. ಲಕ್ಷಾಂತರ ರೂಪಾಯಿ ವ್ಯಯಿಸಿ, ಜತೆಗೆ ಹುಕ್ಕೇರಿ ಶಿಕಾರಿ ಶ್ವಾನ, ಹಂದಿ ಹಿಡಿಯುವ ಬಲೆ, ಎರಡು ಆನೆಗಳ ಸಹಾಯದೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದರೂ ಯಾವುದು ಸದ್ಯ ಫಲಸಿಗಲಿಲ್ಲ.

ಇದನ್ನೂ ಓದಿ | ಬೆಳಗಾವಿ ಚಿರತೆ ಪತ್ತೆಗಾಗಿ ಗಣಪನ ಮೊರೆ, ಗೊಂಬೆ ಇಟ್ಟು ಪೂಜೆ ಮಾಡಿದ ಕುಟುಂಬ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Gold Rate Today: ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

VISTARANEWS.COM


on

Mamitha Baiju
Koo

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಸೇರಿ ಕರ್ನಾಟಕದಾದ್ಯಂತ (Karnataka) ಭಾರಿ ಏರಿಕೆ ಕಂಡು, ಬಳಿಕ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ (Gold Rate Today) ಭಾನುವಾರ (ಮೇ 11) ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) 87.10 ರೂ., ಎಂಟು ಗ್ರಾಂ 696.80 ರೂ. ಮತ್ತು 10 ಗ್ರಾಂ 871 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,710 ರೂ. ಮತ್ತು 1 ಕಿಲೋಗ್ರಾಂಗೆ 87,100 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Akshaya Tritiya 2024

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Continue Reading

ಚಿತ್ರದುರ್ಗ

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

SSLC Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ನಾಲ್ಕು ಸಬ್ಜೆಕ್ಟ್‌ನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ (SSLC result) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

SSLC Student Death Exam fail
ಸಾಂದರ್ಭಿಕ ಚಿತ್ರ
Koo

ಚಿತ್ರದುರ್ಗ: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC exam fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಮುಂದುವರಿದೆ. ಫೇಲ್‌ ಆಗಿದ್ದಕ್ಕೆ ಮನನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ (SSLC Student Death) ಮಾಡಿಕೊಂಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೊಬ್ಬರಿಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ.

16 ವರ್ಷದ ಧನುಶ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇತ್ತ ಮಗಳು ಫೇಲ್ ಆಗಿದ್ದರು ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.

sslc student death
ಮೃತ ಧನುಶ್ರೀ

ಆದರೂ ಮನನೊಂದ ವಿದ್ಯಾರ್ಥಿನಿ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಘಟನೆ-1 ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದ (chikkaballapur news) ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಎಂಬಾಕೆಯು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್‌ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ಎಸ್ಎಸ್ಎಲ್‌ಸಿ ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.

ಘಟನೆ -2 ಹೊಲಕ್ಕೆ ತೆರಳಿ ಮರಕ್ಕೆ ನೇಣಿಗೆ ಶರಣಾದ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ- 3 ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ.

ಘಟನೆ-4 ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ- 5 ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್‌ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್‌ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Tumkur: ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

VISTARANEWS.COM


on

Tumkur Accident
Koo

ತುಮಕೂರು: ಜಿಲ್ಲೆಯ (Tumkur) ಪಾವಗಡ ತಾಲೂಕಿನಲ್ಲಿ ಕಾರೊಂದು (Pavagada Accident) ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ ಕಾರಣ ಅವರನ್ನು ಬೆಂಗಳೂರಿನ (Bengaluru) ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕಣಿವೆನಹಳ್ಳಿ ಗೇಟ್‌ ಬಳಿ ಕಾರು ಪಲ್ಟಿಯಾಗಿದೆ. ನಾಲ್ವರೂ ತುಮಕೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ಪಾವಗಡಕ್ಕೆ ತೆರಳುತ್ತಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಗುಚಿದೆ. ಕಾರು ಪಲ್ಟಿಯಾದ ತೀವ್ರತೆಗೆ ಒ. ಧನಂಜಯ ಹಾಗೂ ಶ್ರೀಕೃಷ್ಣ ಅವರು ಮೃತಪಟ್ಟಿದ್ದಾರೆ. ಶಿಕ್ಷಕರಾದ ನರಸಿಂಹ ಹಾಗೂ ವೆಂಕಟಾಚಲಪತಿ ಎಂಬುವರು ಗಾಯಗೊಂಡಿದ್ದಾರೆ.

ಒ. ಧನಂಜಯ ಅವರು ಪಾವಗಡ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಾಂಶುಪಾಲರಾಗಿದ್ದರು. ಇನ್ನು ಶ್ರೀಕೃಷ್ಣ ಅವರು ಪಾವಗಡ ತಾಲೂಕಿನ ಗೌಡೇಟಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾಗಿದ್ದರು. ಪಲ್ಟಿಯಾದ ತೀವ್ರತೆಗೆ ಕಾರು ಕೂಡ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪಾವಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶನಿವಾರವಷ್ಟೇ (ಮೇ 11) ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದರು. ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತರು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಇದನ್ನೂ ಓದಿ: Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

Continue Reading

ಬೆಂಗಳೂರು ಗ್ರಾಮಾಂತರ

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Engineering Student : ಮನೆಯಿಂದ ಹೊರ ಹೋದ ವಿದ್ಯಾರ್ಥಿ ನಾಪತ್ತೆಯಾಗಿದ್ದ. ಇತ್ತ ಮಗನಿಗಾಗಿ ಹುಡುಕಾಟ ನಡೆಸಿ ಪೋಷಕರು ಸುಸ್ತಾಗಿದ್ದರು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಹೆದರಿದ ಇಂಜಿನಿಯರಿಂಗ್‌ ವಿದ್ಯಾರ್ಥಿ ಜಿಗಣಿ ಕೆರೆಗೆ ಹಾರಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದ. ಇದೀಗ ಮೂರು ದಿನದ ನಂತರ ಮೃತದೇಹ ಪತ್ತೆಯಾಗಿದೆ.

VISTARANEWS.COM


on

By

Engineering Student
ಅಮೃತೇಶ್‌ ಮೃತದೇಹವನ್ನು ಕೆರೆಯಿಂದ ಹೊರತೆಗೆಯುತ್ತಿರುವುದು
Koo

ಆನೇಕಲ್: ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಫೇಲ್ ಆದ (Exam Fail) ವಿಚಾರ ಪೋಷಕರಿಗೆ ತಿಳಿಯುತ್ತೆಂದು ಹೆದರಿದ ವಿದ್ಯಾರ್ಥಿ ಜಿಗಣಿ ಕೆರೆಗೆ (Jigani lake) ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಘಟನೆ (Bengaluru rural) ನಡೆದಿದೆ. ಅಮೃತೇಶ್ ಪಾಂಡೆ (21) ಆತ್ಮಹತ್ಯೆ ಮಾಡಿಕೊಂಡವನು.

ಹೇಮಲತಾ ಪಾಂಡೆ, ವಿಜಯ್ ಶಂಕರ್ ಪಾಂಡೆ ದಂಪತಿ ಪುತ್ರ ಅಮೃತೇಶ್‌ ಪಾಂಡೆ ಮೂಲತಃ ಬಿಹಾರ ಮೂಲದ ಕುಟುಂಬದವರು. ಕಳೆದ ಕೆಲ ವರ್ಷಗಳ ಹಿಂದೆ ಬೆಂಗಳೂರಿನ ಜಿಗಣಿಗೆ ಬಂದು ನೆಲೆಸಿದ್ದರು. ಮಗನಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸಬೇಕೆಂದು ಕನಸು ಕಂಡಿದ್ದ ಪೋಷಕರು, ಅದರಂತೆಯೇ ಮೈಸೂರು ರಸ್ತೆಯ ಆರ್.ವಿ ಕಾಲೇಜಿಗೆ ಮಗನನ್ನು ಸೇರಿಸಿದ್ದರು.

ಆರ್.ವಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಹಾಸ್ಟೆಲ್‌ನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗಿ ಬರುತ್ತಿದ್ದ. ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಅಮೃತೇಶ್, ಎರಡು ವಿಷಯದಲ್ಲಿ ಫೇಲ್ ಆಗಿದ್ದ. ಸರಿಯಾಗಿ ಕಾಲೇಜಿಗೂ ಹೋಗುತ್ತಿರಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಲೋಕಸಭೆ ಚುನಾವಣಾಗೆ ಮತ ಹಾಕಲು ಜಿಗಣಿಗೆ ಬಂದಿದ್ದ ಅಮೃತೇಶ್, ಫೇಲ್ ಆಗಿರುವ ವಿಚಾರ ತಂದೆಗೆ ತಿಳಿಯುತ್ತೆ ಎಂದು ಹೆದರಿಬಿಟ್ಟಿದ್ದ. ಕಾಲೇಜಿನವರು ಫೋನ್ ಮಾಡುತ್ತಾರೆ ಎಂದು ತಂದೆ ಫೋನ್‌ನಲ್ಲಿ ನಂಬರ್‌ಗಳನ್ನು ಬ್ಲಾಕ್ ಮಾಡಿದ್ದ. ಆದರೆ ಇತ್ತ ಅಮೃತೇಶ್‌ ತಂದೆ ವಿಜಯ್‌ ಶಂಕರ್‌ ಆರನೇ ಸೆಮಿಸ್ಟರ್‌ಗೆ ಆಡ್ಮಿಷನ್ ಮಾಡಿ ಕಾಲೇಜಿಗೆ ಬಿಟ್ಟು ಬರುತ್ತೇನೆ ಎಂದು ಹೇಳಿದ್ದಾರೆ. ತಂದೆಯ ಜತೆ ಕಾಲೇಜಿಗೆ ಹೋದರೆ ಫೇಲ್ ಆದ ವಿಚಾರ ತಿಳಿಯುತ್ತೆ. ಸರಿಯಾಗಿ ಕಾಲೇಜಿಗೂ ಹೋಗದೇ ಇರುವುದು ತಿಳಿದು ಬಿಡುತ್ತೆ ಎಂದು ಅಮೃತೇಶ್ ಭಯಗೊಂಡಿದ್ದ.

ಹೀಗಾಗಿ ಮೇ 10ರಂದು ಮನೆಯಿಂದ ಹೊರಟ ಅಮೃತೇಶ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇತ್ತ ಆತನಿಗಾಗಿ ಅಮೃತೇಶ್‌ ಪೋಷಕರು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೆ ನಿನ್ನೆ ಜಿಗಣಿ ಕೆರೆಯಲ್ಲಿ ಅಮೃತೇಶ್‌ ಮೃತದೇಹವು ತೇಲಿಕೊಂಡು ಬಂದಿದೆ. ಇದನ್ನು ಕಂಡ ಸ್ಥಳೀಯರು ಕೂಡಲೇ ಜಿಗಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತದೇಹವು ಅಮೃತೇಶ್‌ದ್ದು ಎಂದು ತಿಳಿದು ಬಂದಿದೆ. ಸದ್ಯ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Mamitha Baiju
ಚಿನ್ನದ ದರ15 mins ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ16 mins ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

SSLC Student Death Exam fail
ಚಿತ್ರದುರ್ಗ17 mins ago

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

Richa Chadha drank alcohol to perform Sanjay Leela Bhansali’s Heeramandi
ಸಿನಿಮಾ19 mins ago

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Elon Musk
ತಂತ್ರಜ್ಞಾನ26 mins ago

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Tumkur Accident
ಕರ್ನಾಟಕ54 mins ago

Tumkur: ತುಮಕೂರಿನಲ್ಲಿ ಕಾರು ಪಲ್ಟಿ; ಮದುವೆಗೆ ಹೋಗಿದ್ದ ಇಬ್ಬರು ಶಿಕ್ಷಕರು ಸ್ಥಳದಲ್ಲೇ ಸಾವು

Engineering Student
ಬೆಂಗಳೂರು ಗ್ರಾಮಾಂತರ55 mins ago

Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Abdu Rozik Bigg Boss 16 gets engaged
ಸಿನಿಮಾ1 hour ago

Abdu Rozik: ಎಂಗೇಜ್‌ ಆದ ಬಿಗ್‌ ಬಾಸ್‌ ಖ್ಯಾತಿಯ ಅಬ್ದು ರೋಜಿಕ್!

Viral News
ವೈರಲ್ ನ್ಯೂಸ್2 hours ago

Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

Yogi Adityanath
ದೇಶ2 hours ago

ನಾವೇನು ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ; ಅಯ್ಯರ್‌ ‘ಪಾಕ್‌’ ಹೇಳಿಕೆಗೆ ಯೋಗಿ ಖಡಕ್‌ ಉತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು20 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌