ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನದಲ್ಲಿ ರಚನೆಯಾಗಿರುವ ವಿವಿಧ ಟ್ರಸ್ಟ್‌ಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ತಮ್ಮನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಿರುವುದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ತಿಳಿಸಿದ್ದಾರೆ. ಒಟ್ಟು 21 ಟ್ರಸ್ಟ್‌ಗಳಿಗೆ ಟ್ರಸ್ಟ್‌ಗಳಿಗೆ ಡಾ. ಎಚ್.ಎಸ್. ವೆಂಕಟೇಶಮೂರ್ತಿ, ಎಸ್. ದಿವಾಕರ್, ಡಾ. ಭೀಮಸೇನ್ ಸೇರಿ ಅನೇಕರನ್ನು ಅಧ್ಯಕ್ಷರಾಗಿ ಹಾಗೂ ಒಟ್ಟು 147 ಸದಸ್ಯರು, ತಲಾ ಒಬ್ಬರು ಸದಸ್ಯ ಕಾರ್ಯದರ್ಶಿಯನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಟ್ರಸ್ಟ್‌ಗಳ ಅಧ್ಯಕ್ಷರು
ಕ್ರ. ಸಂ. | ಟ್ರಸ್ಟ್ | ಅಧ್ಯಕ್ಷರು |
1 | ಡಾ. ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಮನೋಜ ಪಾಟೀಲ, ಧಾರವಾಡ |
2 | ಡಾ. ಪು.ತಿ.ನ. ಟ್ರಸ್ಟ್ | ಡಾ. ಎಚ್.ಎಸ್. ವೆಂಕಟೇಶಮೂರ್ತಿ |
3 | ಮಲ್ಲಿಕಾರ್ಜುನ ಮನ್ಸೂರ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ನಾಗರಾಜ ಹವಾಲದಾರ |
4 | ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ | ಡಾ. ವತ್ಸಲಾ ಮೋಹನ್ |
5 | ಡಾ. ಶಿವರಾಮ ಕಾರಂತ ಪ್ರತಿಷ್ಠಾನ | ಆನಂದ ಸಿ. ಕುಂದರ್ |
6 | ಡಾ. ವಿ.ಕೃ. ಗೋಕಾಕ್ ಪ್ರತಿಷ್ಠಾನ | ಅನಿಲ ಗೋಕಾಕ್ |
7 | ಸ್ವರ ಸಾಮ್ರಾಟ್ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಶ್ರೀಪಾದ ಹೆಗಡೆ |
8 | ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಡಾ. ಶ್ರೀನಿವಾಸ ಪಾಡಿಗಾರ |
9 | ಬೆಟಗೇರಿ ಕೃಷ್ಣಶರ್ಮ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಡಾ. ಕವಿತಾ ಕುಸಗಲ್ |
10 | ಹುತಾತ್ಮ ಮೈಲಾರ ಮಹದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಸುಧೀರ್ ಸಿಂಹ ಘೋರ್ಪಡೆ |
11 | ಬಸವರಾಜ ಕಟ್ಟೀಮನಿ ಪ್ರತಿಷ್ಠಾನ | ಡಾ. ಗುರುಪಾದ ಮರಿಗುದ್ದಿ |
12 | ಡಿ.ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ | ಪಿ.ಎಸ್. ಕಡೆಮನಿ |
13 | ಡಾ.ಡಿ.ವಿ.ಜಿ. ಪ್ರತಿಷ್ಠಾನ | ಎಸ್. ದಿವಾಕರ |
14 | ಪಿ.ಬಿ. ಧುತ್ತರಗಿ ಪ್ರತಿಷ್ಠಾನ | ಶಿವಪ್ಪ ಭರಮಪ್ಪ ಅದರಗುಂಚಿ |
15 | ಗಳಗನಾಥ ಮತ್ತು ನಾ. ಶ್ರೀ ರಾಜಪುರೋಹಿತ ಪ್ರತಿಷ್ಠಾನ | ಚಕ್ರವರ್ತಿ ಸೂಲಿಬೆಲೆ(ತಿರಸ್ಕರಿಸಿದ್ದಾರೆ) |
16 | ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ | ಡಾ. ಬಿ.ವಿ. ರಾಜಾರಾಮ್ |
17 | oಡಾ. ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನ | ಡಾ. ಬಸವರಾಜ ಕಲ್ಗುಡಿ |
18 | ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ | ನರೇಂದ್ರ ರೈ ದೇರ್ಲ |
19 | ಹಲಸಂಗಿ ಗೆಳೆಯರ ಪ್ರತಿಷ್ಠಾನ | ಸರಸ್ವತಿ ಚಿಮ್ಮಲಗಿ |
20 | ಕವಿ ಚಕ್ರವರ್ತಿ ರನ್ನ ಪ್ರತಿಷ್ಠಾನ | ಡಾ. ನೀಲಗಿರಿ ತಳವಾರ್ |
21 | ಡಾ. ಗುಬ್ಬಿ ವೀರಣ್ಣ ಟ್ರಸ್ಟ್ | ಡಾ. ಭೀಮಸೇನ್ |
ತಿರಸ್ಕರಿಸಿದ ಚಕ್ರವರ್ತಿ ಸೂಲಿಬೆಲೆ
ತಮ್ಮನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷರಾಗಿ ನೇಮಿಸಿರುವುದನ್ನು ಚಕ್ರವರ್ತಿ ಸೂಲಿಬೆಲೆ ತಿರಸ್ಕರಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸೂಲಿಬೆಲೆ, “ಗಳಗನಾಥರ ಕುರಿತಂತೆ ಅಪಾರ ಗೌರವ ಹೊಂದಿರುವ ನನಗೆ, ನನ್ನನ್ನು ಗಳಗನಾಥ ಮತ್ತು ರಾಜ ಪುರೋಹಿತ ಪ್ರತಿಷ್ಠಾನಕ್ಕೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದು ಅಚ್ಚರಿಯೂ ಮತ್ತು ಸಂತಸವೂ ಆಯ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದಕ್ಕೆ ಸಮಯ ಕೊಡುವಷ್ಟು ಪುರಸೊತ್ತಿಲ್ಲದಿರುವುದರಿಂದ ಅತ್ಯಂತ ವಿನೀತನಾಗಿಯೇ ಈ ಗೌರವವನ್ನು ಮರಳಿಸಬೇಕಾಗಿ ಬಂದಿದೆ. ಗಳಗನಾಥರ ಕುರಿತಂತೆ ನನ್ನಷ್ಟೇ ಅಥವಾ ಅದಕ್ಕಿಂತಲೂ ಹೆಚ್ಚು ಪ್ರೀತ್ಯಾದರಗಳನ್ನು ಹೊಂದಿರುವ ಕೆಲವು ವ್ಯಕ್ತಿಗಳು ನನ್ನ ದೃಷ್ಟಿಯಲ್ಲಿದ್ದಾರೆ. ಸಂಬಂಧಪಟ್ಟವರಿಗೆ ಅದನ್ನು ತಿಳಿಸುವೆ. ಸೂಕ್ತವೆನಿಸಿದರೆ ಅವರನ್ನು ಆಯ್ಕೆ ಮಾಡಬಹುದು”.
“ಗಳಗನಾಥರ ಕನ್ನಡ ಸೇವೆಗೆ ನಾವೆಷ್ಟು ಋಣಿಯಾದರೂ ಕಡಿಮೆಯೇ. ಅವರ ಕೆಲಸ ಮಾಡುವ ಈ ಅವಕಾಶ ಸ್ವೀಕರಿಸಲಾಗದಿರುವುದಕ್ಕೆ ಖಂಡಿತವಾಗಿಯೂ ಖೇದವಿದೆ. ನನ್ನನ್ನು ಸೂಕ್ತವೆಂದು ಆಯ್ಕೆ ಮಾಡಿದವರಿಗೆ ಧನ್ಯವಾದಗಳು” ಎಂದಿದ್ದಾರೆ.
ಟ್ರಸ್ಟ್ ಅಧ್ಯಕ್ಷರು ಹಾಗೂ ಸದಸ್ಯರ ನೇಮಕದ ಸಂಪೂರ್ಣ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ