Site icon Vistara News

Rain News | ಕರಾವಳಿ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್

ಕರಾವಳಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಕರಾವಳಿ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಈ ಸಂದರ್ಭದಲ್ಲಿ 115 ಮಿ.ಮೀ.ನಿಂದ 204 ಮಿ.ಮೀ.ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಜುಲೈ 12 ಮತ್ತು 13ರಂದು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಜುಲೈ 14 ರಿಂದ 16 ರವರೆಗೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೊಷಿಸಲಾಗಿದ್ದು, ಗುರುವಾರದಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಪಶ್ಚಿಮ ಘಟ್ಟದ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಜುಲೈ 12 ಮತ್ತು 13ರಂದು ಆರೆಂಜ್ ಅಲರ್ಟ್ ಘೊಷಿಸಿದ್ದು, ಜುಲೈ 14ರಿಂದ 16 ಹಾಸನ ಸೇರಿ ಪಶ್ಚಿಮ ಘಟ್ಟದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಜುಲೈ 12ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ | ಗುಜರಾತ್​ನಲ್ಲಿ ಭೀಕರ ಮಳೆ: ಗೋಡೆ ಕುಸಿದು 8 ಮಂದಿ ಸಾವು, ಇನ್ನೂ 2 ದಿನ ವರುಣಾರ್ಭಟ ಸಾಧ್ಯತೆ

Exit mobile version