ಚಿಕ್ಕಮಗಳೂರು: ಬಸ್‌ನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಸೋಮನಹಳ್ಳಿ ತಾಂಡಾದ ರಕ್ಷಿತಾ ನಾಯಕ್ ಅವರ 9 ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕ ಕೆಲಸ ಮಾಡಿದ್ದ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಚಿಕ್ಕಮಗಳೂರು ನಗರದಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ರಕ್ಷಿತಾ 5 ದಿನದ ಹಿಂದೆ ಬಸ್ ಹತ್ತುವಾಗ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ಈ ವೇಳೆ ಆಕೆಯ ಮೆದುಳು ನಿಷ್ಕ್ರಿಯಗೊಂಡಿತ್ತು. ಇದರಿಂದ ಆಕೆ ಬದುಕುಳಿಯಲಾರಳು ಎಂದು ವೈದ್ಯರು ತಿಳಿಸಿದ್ದರಿಂದ ಅವರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ಒಪ್ಪಿಗೆ ನೀಡಿದ್ದರು. ಅದರಂತೆ ಹೃದಯ, ಶ್ವಾಸಕೋಶ, ಕಿಡ್ನಿ, ಯಕೃತ್ತು, ಕಣ್ಣುಗಳು ಸೇರಿದಂತೆ ಒಟ್ಟು ೯ ಅಂಗಗಳನ್ನು ದಾನ ಮಾಡಲಾಗಿತ್ತು.
೮ ಲಕ್ಷ ರೂಪಾಯಿ ಪರಿಹಾರ
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ, ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂಪಾಯಿ, ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂಪಾಯಿಯನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಪಿ.ರಾಜೀವ್ ಸೋಮನಹಳ್ಳಿ ತಾಂಡ್ಯಾಗೆ ಭೇಟಿ ನೀಡಿ ಕುಟುಂಬಸ್ಥರಿಗೆ ತಾಂಡಾ ಅಭಿವೃದ್ಧಿ ನಿಗಮ ಹಾಗೂ ಉದ್ಯಮಶೀಲತೆ ಯೋಜನೆಯಡಿಯಲ್ಲಿ ಚೆಕ್ ನೀಡಲಿದ್ದಾರೆ.
ಇದನ್ನೂ ಓದಿ | Organ Donation | ಏರ್‌ಲಿಫ್ಟ್ ಮಾಡಿ ಹೃದಯ ರವಾನೆ; 9 ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ